600ನೇ ದಿನಕ್ಕೆ ಮಹದಾಯಿ ಹೋರಾಟ
Team Udayavani, Mar 21, 2017, 3:42 PM IST
ನವಲಗುಂದ: ರಾಜಕಾರಣಿಗಳು ಮಹದಾಯಿ ನೀರಿಗಾಗಿ ಇಚ್ಛಾಶಕ್ತಿ ತೊರದೇ ರೈತರ ಹೋರಾಟ ಕಡೆಗಣಿಸುತ್ತಿದ್ದಾರೆ ಎಂದು ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರ ಆರೋಪಿಸಿದರು.
ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಇಲ್ಲಿನ ರೈತ ಭವನದಲ್ಲಿ ಪಕ್ಷಾತೀತ ಹೋರಾಟ ಸಮಿತಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸೋಮವಾರ 600 ದಿನಕ್ಕೆ ಕಾಲಿರಿಸಿದ್ದು, ಈ ಸಂದರ್ಭದಲ್ಲಿ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ರಸ್ತೆತಡೆ ನಡೆಸಿ ಉಭಯ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಅವರು, ಕುಡಿವ ನೀರಿನ ವಿಷಯದಲ್ಲೂ ರಾಜಕಾರಣ ಬೆರೆಸುತ್ತಿರುವುದು ವಿಷಾದ ಸಂಗತಿ. ರೈತರ ಬೇಡಿಕೆಗಳನ್ನು ಈಡೇರಿಸುವಂತೆ 600 ದಿನಗಳಿಂದ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಹೀಗಾಗಿ ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಬೆಂಗಳೂರು ವಿಧಾನಸೌಧ ಮುತ್ತಿಗೆ ಹಾಗೂ ಮಹದಾಯಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು. ಇನ್ನೊಂದು ಬಂಡಾಯಕ್ಕೆ ನಾಂದಿ ಹಾಡಲು ಎಲ್ಲ ಸಿದ್ಧತೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ರೈತ ಮುಖಂಡ ಸಿದ್ದು ತೇಜಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶಕ್ಕೆ ಪ್ರಧಾನಿಯೋ ಅಥವಾ ಉತ್ತರ ಪ್ರದೇಶಕ್ಕೆ ಮಾತ್ರ ಎನ್ನುವುದು ತಿಳಿಯುತ್ತಿಲ್ಲ. ಅಧಿಕಾರದ ಚುಕ್ಕಾಣಿ ಹಿಡಿಯಲು ಉತ್ತರ ಪ್ರದೇಶ ರಾಜ್ಯದ ರೈತ ಸಾಲಮನ್ನಾ ಮಾಡುತ್ತಿರುವುದು ಶ್ಲಾಘನೀಯ.
ಆದರೆ ಕರ್ನಾಟಕದ ರೈತರು ಭಾರತದಲ್ಲಿ ಇದ್ದಾರೋ ಅಥವಾ ಬೇರೆ ದೇಶದಲ್ಲಿ ಇದ್ದಾರೋ ಎನ್ನುವುದು ಪ್ರಧಾನಿ ಅವರಿಗೆ ತಿಳಿದರೆ ಉತ್ತಮ ಎಂದರು. ರೈತ ಮುಖಂಡ ಸುಭಾಸಚಂದ್ರಗೌಡ ಪಾಟೀಲ ಮಾತನಾಡಿದರು.
ಮಲ್ಲಿಕಾರ್ಜುನಗೌಡ ಪಾಟೀಲ, ರಮೇಶ ಹಲಗತ್ತಿ, ಬಸವರಾಜ ಬೀರಣ್ಣವರ, ಸಿದ್ದಲಿಂಗಪ್ಪ ಹಳ್ಳದ, ಸಂಗಪ್ಪ ನಿಡವಣಿ, ಫಕ್ಕೀರಪ್ಪ ಬ್ರಿಷ್ಟನವರ, ಡಿ.ಬಿ. ಕುರಹಟ್ಟಿ, ಶಿವಾನಂದ ಬರದ್ವಾಡ, ರಂಗನಗೌಡ ಪಾಟೀಲ, ಬರಮಪ್ಪ ಕಾತರಕಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.