ಕ್ವಾರಂಟೈನ್‌ನಿಂದ 67 ಜನ ಬಿಡುಗಡೆ

Team Udayavani, Apr 23, 2020, 12:37 PM IST

huballi-tdy-2

ಹುಬ್ಬಳ್ಳಿ: ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ ನಗರದಲ್ಲಿ ಜಿಲ್ಲಾಡಳಿತ ನಿಗದಿಪಡಿಸಿದ ಸರಕಾರಿ ಕ್ವಾರಂಟೈನ್‌ನಲ್ಲಿದ್ದವರಲ್ಲಿ 67 ಜನರು 14 ದಿನಗಳ ಅವಧಿ ಮುಗಿಸಿ ಬಿಡುಗಡೆಗೊಂಡರು.

ಬಿಡುಗಡೆಯಾಗಿರುವ 63 ಜನರು 14 ದಿನಗಳ ಕಾಲ ತೀವ್ರ ನಿಗಾದಲ್ಲಿ ಇರಿಸಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. 12ನೇ ದಿನದ ವರದಿ ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಅವರನ್ನು ಸರಕಾರಿ ಕ್ವಾರಂಟೈನ್‌ನಿಂದ ಮುಕ್ತಿಗೊಳಿಸಲಾಯಿತು.

ಇದೇ ಸಂದರ್ಭದಲ್ಲಿ ಸ್ವಪ್ನಾ ಬುಕ್‌ ಹೌಸ್‌ ವತಿಯಿಂದ ಪ್ರತಿಯೊಬ್ಬರಿಗೂ 250ರೂ. ಗಿಫ್ಟ್‌ ಓಚರ್‌ ವಿತರಿಸಲಾಯಿತು. ಸಂಜಯ ಗೋಡಾವತ್‌ನ ಸ್ಟಾರ್‌ ಏರ್‌ಲೈನ್‌ ವತಿಯಿಂದ ಆಹಾರ ಕಿಟ್‌ ನೀಡಲಾಯಿತು ಎಂದು ಹುಬ್ಬಳ್ಳಿ ತಹಶೀಲ್ದಾರ್‌ ಶಶಿಧರ ಮಾಡ್ಯಾಳ ತಿಳಿಸಿದರು.

ಉಪವಿಭಾಗಾಧಿಕಾರಿ ಮಹ್ಮದ್‌ ಜುಬೇರ್‌ ಮಾತನಾಡಿ, ಕೋವಿಡ್‌-19 ಸೋಂಕು ದೃಢಪಟ್ಟವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಅವರ ಕುಟುಂಬದ ಹಾಗೂ ನೆರೆ ಹೊರೆಯವರ ಆರೋಗ್ಯದ ದೃಷ್ಟಿಯಿಂದ ಮುಂಜಾಗ್ರತವಾಗಿ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. 236 ಹಾಗೂ 363 ರೋಗಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಣೆಯಿಂದ ಕ್ವಾರಂಟೈನ್‌ಗೆ ಒಳಪಡಬೇಕೆಂದು ತಿಳಿಸಿದರು.

ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೊಬ್ಬರು ಮಾತನಾಡಿ, ನಿಜಾಮುದ್ದಿನ್‌ ಹಾಗೂ ಅಜ್ಮಿರ್‌ ಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ನಮ್ಮ ಆರೋಗ್ಯ ಹಾಗೂ ಕುಟುಂಬದವರ ರಕ್ಷಣೆ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮ ಕೈಗೊಂಡಿದೆ. ವೈದ್ಯರು ಪ್ರತಿದಿನ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಿ ತಪಾಸಣೆ ನಡೆಸುತ್ತಿದ್ದರು.

ಕೋವಿಡ್ 19 ನಿಯಂತ್ರಣಕ್ಕೆ ಹೋರಾಡುತ್ತಿರುವವರಿಗೆ ಪ್ರತಿಯೊಬ್ಬರು ಸಹಕಾರ ನೀಡಬೇಕು. ಇಷ್ಟು ದಿನ ನಮ್ಮನ್ನು ಚೆನ್ನಾಗಿ ನೋಡಿಕೊಂಡು ಹೊರ ಹೋಗುವಾಗ ಆತ್ಮಸ್ಥೈರ್ಯ ತುಂಬಿ ಚಪ್ಪಾಳೆ ಮೂಲಕ ಕಳುಹಿಸುತ್ತಿರುವುದು ಪ್ರತಿಯೊಬ್ಬ ಸಿಬ್ಬಂದಿ, ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ಕ್ವಾರಂಟೈನ್‌ನಿಂದ ಬಿಡುಗಡೆಗೊಂಡ ಯೋಧರೊಬ್ಬರು ಮಾತನಾಡಿ, ದೆಹಲಿಯಿಂದ ಪ್ರಯಾಣ ಮಾಡಿದ್ದಕ್ಕಾಗಿ ನನಗೆ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಜಿಲ್ಲಾಡಳಿತ 14 ದಿನಗಳ ಕಾಳಜಿಯಿಂದ ನಮ್ಮನ್ನು ನೋಡಿಕೊಂಡು ಉಡುಗೊರೆಯೊಂದಿಗೆ ಅಧಿಕಾರಿಗಳು ಬೀಳ್ಕೊಟ್ಟಿದ್ದಾರೆ. ರೋಗಿಯೊಂದಿಗೆ ಸಂಪರ್ಕ ಹೊಂದಿದ್ದರೆ ಸ್ವ ಇಚ್ಛೆಯಿಂದ ಬಂದು ಕ್ವಾರಂಟೈನ್‌ಗೆ ಒಳಗಾಗಬೇಕು. ಇದು ಕುಟುಂಬದ ಆರೋಗ್ಯದ ದೃಷ್ಟಿಯಿಂದ ತಪಾಸಣೆ ಮಾಡಿಸಿಕೊಳ್ಳುವುದು ಒಳಿತು ಎಂದು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.