ಸಂಜೆ 7ರಿಂದ 36 ತಾಸು ನಿಷೇಧಾಜ್ಞೆ: ಡಿಸಿ ಆದೇಶ


Team Udayavani, May 30, 2020, 8:29 AM IST

huballi-tdy-2

ಸಾಂದರ್ಭಿಕ ಚಿತ್ರ

ಧಾರವಾಡ: ಕೋವಿಡ್ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮೇ 31 ರವಿವಾರದಂದು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ದೀಪಾ ಚೋಳನ್‌ ಆದೇಶ ಹೊರಡಿಸಿದ್ದಾರೆ.

ಈ ಆದೇಶವು ಮೇ 30ರಂದು ಸಂಜೆ 7ರಿಂದ ಜೂ 1ರ ಬೆಳಗ್ಗೆ 7 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ ಹಾಗೂ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿರುತ್ತದೆ. 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ-ಸಮಾರಂಭ ಜರುಗಿಸುವುದನ್ನು ನಿಷೇಧಿಸಿದ್ದು, ಕರ್ಫ್ಯೂ ಅವಧಿಯಲ್ಲಿ ಸಾರ್ವಜನಿಕರು ತುರ್ತು ವೈದ್ಯಕೀಯ ಕಾರ್ಯ ಹೊರತು ಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿರ್ಬಂಧಿ ಸಲಾಗಿದೆ. ಕರ್ಫ್ಯೂ ಅವಧಿಯಲ್ಲಿ ಜಿಲ್ಲೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಶವ ಸಂಸ್ಕಾರ ಕಾರ್ಯದಲ್ಲಿ ಕೇವಲ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.

ಸರಕಾರಿ ವಾಹನಗಳಿಗೆ ಮತ್ತು ಕೋವಿಡ್‌ -19 ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಈ ಅವಧಿಯಲ್ಲಿ ಕಿರಾಣಿ ಅಂಗಡಿಗಳು, ತರಕಾರಿ ಅಂಗಡಿಗಳು, ಹಾಲು-ಮೊಸರು, ಚಿಕನ್‌, ಮಟನ್‌ ಹಾಗೂ ಇತರೆ ಅವಶ್ಯಕ ವಸ್ತುಗಳ ಸೇವೆಗಳು ಲಭ್ಯವಿರುತ್ತವೆ. ಹೋಟೆಲ್‌ ಗಳು ಪಾರ್ಸಲ್‌ ಸೇವೆ ಮಾತ್ರ ನೀಡಬಹುದು. ಹುಬ್ಬಳ್ಳಿ ರೈಲು ನಿಲ್ದಾಣದಿಂದ ಪಶ್ಚಿಮ ಬಂಗಾಳಕ್ಕೆ ವಲಸೆ ಕಾರ್ಮಿಕರಿಗೆ ರೈಲು ನಿಯೋಜಿತವಾಗಿರುವುದರಿಂದ ಅಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಪ್ರಯಾಣ ಮಾಡಲು ಆಗಮಿಸುವ ವಲಸೆ ಕಾರ್ಮಿಕರಿಗೆ ಹಾಗೂ ವಲಸೆ ಕಾರ್ಮಿಕರಿಗೆ ವಿವಿಧ ಸೌಲಭ್ಯ ಒದಗಿಸುವಂತಹ ವ್ಯಕ್ತಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ, ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.