ಮೂರು ವರ್ಷದಲ್ಲಿ 79 ರೈತರು ಆತ್ಮಹತ್ಯೆ: ಶಶಿಧರ ಕುರೇರ
Team Udayavani, Jun 2, 2018, 4:50 PM IST
ಬಾಗಲಕೋಟೆ: ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ವಿವಿಧ ಇಲಾಖೆಗಳ ಮೂಲಕ ವಿಶೇಷ ಸೌಲಭ್ಯಗಳನ್ನು ದೊರಕಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಈ ಕುರಿತು ಜರುಗಿದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆತ್ಮಹತ್ಯೆಗೆ ಒಳಗಾದ ರೈತರ ಕುಟುಂಬಗಳಿಗೆ ಸೌಲಭ್ಯ ನೀಡುವ ಸಲುವಾಗಿ ಜಿಲ್ಲಾ ಮಟ್ಟದ ಸಮಿತಿ ರಚಿಸಿದ್ದು, ಈ ಸಮಿತಿ ಕಂದಾಯ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳ ಮೂಲಕ ಸಿಗಬಹುದಾದ ಸೌಲಭ್ಯಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿದರು.
ರೈತರ ಆತ್ಮಹತ್ಯೆಗೆ ಸಂಬಂಧಿ ಸಿದಂತೆ ಜಿಲ್ಲೆಯಲ್ಲಿ ಕಳೆದ 2015-16ನೇ ಸಾಲಿನಲ್ಲಿ 20 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 16 ಪ್ರಕರಣಗಳನ್ನು ಮಾತ್ರ ಸ್ವೀಕರಿಸಲಾಗಿದೆ. 2016-17ನೇ ಸಾಲಿನಲ್ಲಿ ಒಟ್ಟು 24 ಪ್ರಕರಣಗಳಲ್ಲಿ 24 ಪ್ರಕರಣಗಳನ್ನು, 2017-18ನೇ ಸಾಲಿನಲ್ಲಿ 32 ಪ್ರಕರಣಗಳಲ್ಲಿ 30 ಪ್ರಕರಣಗಳನ್ನು ಸ್ವೀಕರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ 3 ಪ್ರಕರಣಗಳು ದಾಖಲಾಗಿದ್ದು, ಸಮಿತಿ ಸಭೆ ನಡೆಸಿ ಶೀಘ್ರದಲ್ಲಿ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ಇತ್ಯರ್ಥವಾದಲ್ಲಿ ತಕ್ಷಣ ಕೃಷಿ ಇಲಾಖೆಯಿಂದ 5 ಲಕ್ಷ ರೂ. ಪರಿಹಾರಧನ ನೀಡಲಾಗುತ್ತಿದೆ. ಇದರ ಜೊತೆಗೆ ಕಂದಾಯ ಇಲಾಖೆಯಿಂದ ವಿಧವಾ ವೇತನ, ಶಿಕ್ಷಣ ಇಲಾಖೆಯಿಂದ ಸ್ನಾತಕೋತ್ತರ ಪದವಿ ಹಂತದವರೆಗೆ ಉಚಿತ ಶಿಕ್ಷಣ, ಹಾಸ್ಟೆಲ್ ಸೌಲಭ್ಯ, ಆರೋಗ್ಯ ಇಲಾಖೆಯಿಂದ ಪರಿಪೂರ್ಣ ಆರೋಗ್ಯ ಸೇವೆ ಸೌಲಭ್ಯಗಳನ್ನು ಒದಗಿಸಲು ಇಂದಿರಾ ಸುರಕ್ಷಾ ಯೋಜನೆ ಕಾರ್ಡ್ ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು. ಕಂದಾಯ, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳು ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ನೀಡುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಸೌಲಭ್ಯಗಳು ತಲುಪಿಸುವ ವ್ಯವಸ್ಥೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
2015-16 ರಿಂದ ಹಿಡಿದು ಇಲ್ಲಿಯವರೆಗೆ ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ಸರಕಾರದಿಂದ ಸಿಗುವ ಸೌಲಭ್ಯಗಳು ದೊರೆಯಬೇಕು. ನೊಂದ ರೈತರ ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯ ಚಿಕಿತ್ಸೆ ದೊರೆಯಬೇಕು. ಈ ನಿಟ್ಟಿನಲ್ಲಿ ಅಧಿ ಕಾರಿಗಳು ಕ್ರಮ ಕೈಗೊಳ್ಳಬೇಕು.
ಜಿಲ್ಲೆಯಲ್ಲಿ ರೈತ ಆತ್ಮಹತ್ಯೆ ಪ್ರಕರಣ ದಾಖಲಾದ ತಕ್ಷಣ ಮಾಹಿತಿ ಪಡೆದುಕೊಂಡು ಅವರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಕೆಲಸವಾಗಬೇಕೆಂದು ಸೂಚಿಸಿದರು. ಸೌಲಭ್ಯಗಳನ್ನು ನೀಡುವಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದೆಂದರು. ಅಲ್ಲದೇ ಈಗಾಗಲೇ ನೊಂದ ರೈತರ
ಕುಟುಂಬಗಳಿಗೆ ನೀಡಿರುವ ಸೌಲಭ್ಯಗಳ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬಾಗಲಕೋಟೆ ಉಪವಿಭಾಗಾಧಿಕಾರಿ ಎಚ್.ಜಯಾ, ಜಮಖಂಡಿಯ ಎಂ.ಮೂರ್ತಿ, ಜಿಲ್ಲಾ ಜಂಟಿ ನಿರ್ದೇಶಕ ರಮೇಶಕುಮಾರ, ಕೃಷಿ ಇಲಾಖೆಯ ಉಪನಿರ್ದೇಶಕ ಕೊಂಗವಾಡ, ಆರೋಗ್ಯ ಇಲಾಖೆಯ ಡಾ.ಎಂ.ಕೆ.ಪಟ್ಟಣಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಸ್.ಅಂಗಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.