ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 8.48 ಲಕ್ಷ ಮಕ್ಕಳು
Team Udayavani, Jun 3, 2020, 11:45 AM IST
ಸಾಂದರ್ಭಿಕ ಚಿತ್ರ
ಧಾರವಾಡ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ರಾಜ್ಯದಲ್ಲಿ ಒಟ್ಟು 8.48 ಲಕ್ಷ ಮಕ್ಕಳು ಹಾಜರಾಗಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯದ ಶಿಕ್ಷಣ ಸಚಿವ ಎಸ್. ಸುರೇಶಕುಮಾರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರೀಕ್ಷೆಗೆ ಹಾಜರಾಗುವ ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದರೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಕೆಲ ಜಿಲ್ಲೆಗಳ ಕಂಟೇನ್ಮೆಂಟ್ ಪ್ರದೇಶದಲ್ಲಿನ ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ. ಪರೀಕ್ಷೆಗೂ ಕೆಲ ದಿನ ಮುನ್ನ ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಕೇಂದ್ರಗಳು ಬಂದಲ್ಲಿ ಅವುಗಳನ್ನೂ ಸ್ಥಳಾಂತರ ಮಾಡಿ ಮಕ್ಕಳಿಗೆ ಮಾಹಿತಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪರೀಕ್ಷೆ ನಡೆದಾಗಲೇ ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಣೆಯಾದಲ್ಲಿ ಆ ಕೇಂದ್ರದ ಮಕ್ಕಳಿಗೆ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು. ಫ್ರೆಶ್ ಕ್ಯಾಂಡಿಡೇಟ್ ಎಂದು ಪ್ರವೇಶಪತ್ರ-ಅಂಕಪಟ್ಟಿ ನೀಡಲಾಗುವುದು. ಈ ಕುರಿತು ಮಕ್ಕಳು ಚಿಂತಿಸಬೇಕಿಲ್ಲ. ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಶಾಲೆಗಳನ್ನು ಸದ್ಯಕ್ಕೆ ತೆರೆಯಬೇಡಿ ಎಂಬ ಅಭಿಪ್ರಾಯ ಕೇಳಿ ಬರುತ್ತಿದ್ದು, ಈ ಕುರಿತೂ ಪರಿಶೀಲನೆ ನಡೆಸಲಾಗುತ್ತಿದೆ ಎಂದರು. ಮಕ್ಕಳಿಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ರೆಡ್ ಕ್ರಾಸ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಮಾಸ್ಕ್ಗಳನ್ನು ನೀಡಲು ಮುಂದಾಗಿದ್ದಾರೆ. ಪರೀಕ್ಷೆಗೆ ಹಾಜರಾಗುವ ಎಲ್ಲ ಮಕ್ಕಳಿಗೆ ಥರ್ಮಲ್ ಸ್ಕ್ಯಾನ್ ಮಾಡಲಾಗುವುದು. ಮಕ್ಕಳ ನೆರವಿಗಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಹಾಯವಾಣಿ ಪ್ರಾರಂಭಿಸಲಾಗುವುದು. ಇನ್ನೂ ಬಾಕಿ ಉಳಿದಿರುವ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ಸಹ ನಡೆಸಲಾಗುತ್ತಿದ್ದು, ತಮ್ಮ ಕಾಲೇಜು ಬಿಟ್ಟು ಬೇರೆ ಸ್ಥಳಗಳಲ್ಲಿ ಅವರು ಇರುವಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.