Dharwad ಜಿಲ್ಲೆಯಲ್ಲಿ 81 ಕೆರೆಗಳನ್ನು ತುಂಬಿಸಲಾಗಿದೆ: ಡಿಸಿ ಗುರುದತ್ತ ಹೆಗಡೆ
Team Udayavani, Oct 21, 2023, 11:00 AM IST
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲವಾಗಿದ್ದು, ಗ್ರಾಮೀಣ ಪ್ರದೇಶಕ್ಕೆ ಅನುಕೂಲವಾಗುವಂತೆ ಸುಮಾರು 81 ಕೆರೆಗಳನ್ನು ತುಂಬಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಇಲ್ಲಿನ ಹಳೇ ಸಿ. ಆರ್. ಮೈದಾನದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರಿನ ಸಮಸ್ಯೆ ತಪ್ಪಿಸುವ ನಿಟ್ಟಿನಲ್ಲಿ ಎಲ್ಲೆಲ್ಲಿ ಅನುಕೂಲತೆ ಇದೆಯೋ ಅಲ್ಲಿಯ ಎಲ್ಲ ಕೆರೆಗಳನ್ನು ತುಂಬಿಸಲಾಗಿದ್ದು ಎಲ್ಲಿಯೂ ಸಹ ಟ್ಯಾಂಕರ್ ಮೂಲಕ ನೀರನ್ನು ಸದ್ಯಕ್ಕೆ ಪೂರೈಕೆ ಮಾಡುತ್ತಿಲ್ಲ ಎಂದರು.
ಮಳೆಯ ಕೊರತೆಯ ನಡುವೆಯೂ ಹುಬ್ಬಳ್ಳಿ ಧಾರವಾಡ ಸೇರಿದಂತೆ ಜಿಲ್ಲೆಯಲ್ಲಿ ಇನ್ನು ಮೂರ್ನಾಲ್ಕು ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದು. ಆದರೂ ಮುಂಜಾಗ್ರತಾ ಕ್ರಮವಾಗಿ ಪ್ರತಿವಾರ ಸಂಬಂಧಿಸಿದ ಇಲಾಖೆ ಹಾಗೂ ನೀರು ಪೂರೈಕೆ ಕಂಪನಿಯೊಂದಿಗೆ ಚರ್ಚೆ ನಡೆಸುತ್ತಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲೆಯಲ್ಲಿ ಸುಮಾರು 15 ರಿಂದ 16 ಕಡೆ ಆರ್ ಓ ಪ್ಲಾಂಟ್ ಗಳು ದುರಸ್ತಿಯಲ್ಲಿವೆ ಎಂಬ ಮಾಹಿತಿ ಇದ್ದು ಅವುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದರು
ಮಳೆಯ ಕೊರತೆಯಿಂದಾಗಿ ಮುಂಗಾರು ಬೆಳೆ ಹಾನಿಗೀಡಾಗಿದ್ದು ಹಿಂಗಾರು ಹಂಗಾಮಿಗೆ ಜಿಲ್ಲೆಯ ಹಲವು ಕಡೆಗಳಲ್ಲಿ ರೈತರು ಬಿತ್ತನೆ ಮಾಡಿದ್ದು ಒಂದು ವೇಳೆ ಮುಂದಿನ ತಿಂಗಳು ಮಳೆಯಾಗದಿದ್ದರೆ ಬಿತ್ತಿದ ಬೆಳೆ ಸಹ ಹಾನಿ ಆಗಲಿದೆ ಎಂದರು.
ಬೆಳೆ ವಿಮೆ ಪರಿಹಾರ ನಿಟ್ಟಿನಲ್ಲಿ ಬರ ಅಥವಾ ಅತಿವೃಷ್ಟಿ ಸಂದರ್ಭದಲ್ಲಿ ತಕ್ಷಣಕ್ಕೆ ಶೇಕಡ 25 ರಷ್ಟು ಮಧ್ಯಂತರ ಪರಿಹಾರವನ್ನು ನೀಡಬೇಕೆಂಬ ನಿಯಮ ಇರುವುದು ನಿಜ ವಿಮಾ ಕಂಪನಿ ಈ ಬಗ್ಗೆ ಈ ಬಗ್ಗೆ ಒಪ್ಪಿರಲಿಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ವಿಮಾ ಕಂಪನಿಯವರೊಂದಿಗೆ ಸಭೆ ನಡೆಸಿ ಒತ್ತಾಯ ಮಾಡಿದ್ದರಿಂದ ವಿಮಾ ಕಂಪನಿಯವರು ಶೇಕಡ 25ರಷ್ಟು ಮಧ್ಯಂತರ ಪರಿಹಾರ ನೀಡಲು ಒಪ್ಪಿದ್ದು ಇನ್ನೊಂದು ವಾರದಲ್ಲಿ ಮಧ್ಯಂತರ ಪರಿಹಾರ ಬಿಡುಗಡೆಯಾಗುವ ವಿಶ್ವಾಸವಿದೆ ಎಂದರು.
ಬರಗಾಲ ಸ್ಥಿತಿಯನ್ನು ಕೇಂದ್ರ ಅಧ್ಯಯನ ತಂಡ ವೀಕ್ಷಿಸಿದ್ದು ನರೇಗಾ ಅಡಿಯಲ್ಲಿ 150 ದಿನಗಳ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.