84 ಕೆರೆಗಳ ಪುನರುಜ್ಜೀವನ: ಡಾ| ಹೆಗ್ಗಡೆ
Team Udayavani, Jun 10, 2017, 4:45 PM IST
ಧಾರವಾಡ: 2016-17ನೇ ಸಾಲಿನಲ್ಲಿ 10 ಕೋಟಿ ರೂ. ಅನುದಾನದಲ್ಲಿ 84 ಕೆರೆಗಳನ್ನು ಪುನರುಜ್ಜೀವನಗೊಳಿಸಲಾಗಿದ್ದು, ಪ್ರಸಕ್ತ ವರ್ಷದಲ್ಲಿ 126 ಕೆರೆಗಳ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದೇವರಹುಬ್ಬಳ್ಳಿ ಕೆರೆ ಅಭಿವೃದ್ಧಿ ಸಮಿತಿ ಹಾಗೂ ಗ್ರಾಪಂ ಸಹಭಾಗಿತ್ವದಲ್ಲಿ ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಪುನಶ್ಚೇತನಗೊಳಿಸಿದ ತಾಲೂಕಿನ ದೇವರಹುಬ್ಬಳ್ಳಿ ಕೆರೆ ಹಸ್ತಾಂತರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಧಾರವಾಡ ಜಿಲ್ಲೆಯಲ್ಲಿ 9 ಕೆರೆಗಳ ದುರಸ್ತಿ ನಡೆಸಿದೆ. ಮುಂಬರುವ ವರ್ಷದಲ್ಲಿ ಇನ್ನೂ 5 ಕೆರೆಗಳನ್ನು ದುರಸ್ತಿಗೊಳಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು. ಸಾಂಪ್ರದಾಯಿಕವಾಗಿ ಬಂದಿರುವ ಕೆರೆಗಳನ್ನು ಉಳಿಸಿ-ಬೆಳೆಸದ ಕಾರಣದಿಂದಲೇ ನೀರಿನ ಉದ್ಭವಿಸಲು ಕಾರಣವಾಗಿದೆ.
ನೀರನ್ನು ಸುಖಾಸುಮ್ಮನೇ ಪೋಲು ಮಾಡುತ್ತಿದ್ದೇವೆ ಹೊರತು ಜಲಜೀವ ರಕ್ಷಣೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಹೀಗಾಗಿ ಇಂದು ನಿರ್ಮಿಸಿರುವ ಸುಂದರ ಕೆರೆಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಗ್ರಾಮಸ್ಥರದ್ದಾಗಿದೆ ಎಂದರು. ಗ್ರಾಮಸ್ಥರು ತಮ್ಮ ಕೆರೆಯನ್ನು ಉಳಿಸಿಕೊಂಡಾಗ ಮಾತ್ರ ನೀರಿನ ಸಮಸ್ಯೆ ಪರಿಹರಿಸಲು ಸಾಧ್ಯವಾಗುತ್ತದೆ.
ಈ ನಿಟ್ಟಿನಲ್ಲಿ 3.30 ಎಕರೆ ವಿಸ್ತೀರ್ಣವುಳ್ಳ ದೇವರಹುಬ್ಬಳ್ಳಿಯ ಕುಡಿಯುವ ನೀರಿನ ಕೆರೆ ಪುರುಜ್ಜೀವನಕ್ಕೆ ಗ್ರಾಮಸ್ಥರು 13.60 ಲಕ್ಷ ರೂ. ನೀಡಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ 11 ಲಕ್ಷ ರೂ. ಅನುದಾನದಲ್ಲಿ ಮೂರು ತಿಂಗಳ ಕಾಲ ಕಾಮಗಾರಿ ನಡೆಸಲಾಗಿದೆ ಎಂದರು.
ದೇವರಹುಬ್ಬಳ್ಳಿ ಸಿದ್ಧಾರೂಢ ಮಠದ ಸಿದ್ಧ ಶಿವಯೋಗಿ ಸ್ವಾಮೀಜಿ ಸಾನ್ನಿಧ್ಯ ವಹಿಸಿ, ಮನುಷ್ಯನಲ್ಲಿ ಇಚ್ಛಾಶಕ್ತಿ, ಜ್ಞಾನಶಕ್ತಿ ಹಾಗೂ ಕ್ರಿಯಾ ಶಕ್ತಿ ಎಂಬ ಮೂರು ಶಕ್ತಿಗಳಿವೆ. ಇವುಗಳನ್ನು ಸರ್ಕಾರ ಹಾಗೂ ಜನಪ್ರತಿನಿಧಿಗಳು ಲೋಕ ಕಲ್ಯಾಣಕ್ಕಾಗಿ ಬಳಸಿಕೊಂಡಲ್ಲಿ ಸಮಾಜದಲ್ಲಿ ಸಾಕಷ್ಟು ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ ಎಂದರು.
ಇದಕ್ಕೂ ಪೂರ್ವದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಸಿದ್ಧ ಶಿವಯೋಗಿ ಸ್ವಾಮೀಜಿ ಅವರು ಕುಂಭ ಮೇಳದೊಂದಿಗೆ ಕೆರೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಬೀಜದುಂಡೆ ತಯಾರಿಕೆ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಸಾಂಕೇತಿಕವಾಗಿ ಬೀಜದುಂಡೆ ವಿತರಿಸಲಾಯಿತು.
ಗ್ರಾಪಂ ಅಧ್ಯಕ್ಷೆ ಮಂಜುಳಾ ಕೋಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಎನ್. ಜಯಶಂಕರ್ ಶರ್ಮಾ, ಜಿಪಂ ಸದಸ್ಯ ನಿಂಗಪ್ಪ ಘಾಟೀನ, ತಾಪಂ ಸದಸ್ಯೆ ಫಕ್ಕೀರವ್ವ ನಾಯಕ, ಯೋಜನಾಧಿಕಾರಿ ಕುಸುಮಾಧರ, ಕೃಷಿ ಅಧಿಕಾರಿಗಳು, ಸೇವಾ ಪ್ರತಿನಿಧಿಗಳು, ಮೇಲ್ವಿಚಾರಕರು, ಕೆರೆ ಅಭಿವೃದ್ಧಿ ಸಮಿತಿ ಸದಸ್ಯರು ಇದ್ದರು. ದಿನೇಶ ಎಂ. ಸ್ವಾಗತಿಸಿದರು. ಉಲ್ಲಾಸ್ ಮೇಸ್ತ ನಿರೂಪಿಸಿದರು. ಸುರೇಶಗೌಡ ಕರಿಗೌಡ್ರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.