ರಸ್ತೆ ಮಧ್ಯೆಯೇ ಮಕ್ಕಳ ಕುಳ್ಳಿರಿಸಿ ಪಾಠ

ಗ್ರಾಮದ ಎಲ್ಲ ಅಂಗನವಾಡಿಗಳಿಗೆ ಸ್ವತಃ ಕಟ್ಟಡವಿದೆ. ಆದರೆ ನಮಗೆ ಮಾತ್ರ ಅಲೆದಾಡುವುದು ತಪ್ಪಿಲ್ಲ

Team Udayavani, Dec 3, 2021, 5:15 PM IST

ರಸ್ತೆ ಮಧ್ಯೆಯೇ ಮಕ್ಕಳ ಕುಳ್ಳಿರಿಸಿ ಪಾಠ

ಧಾರವಾಡ: ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡ ನೀಡುವಂತೆ ಆಗ್ರಹಿಸಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಕೇಂದ್ರದ ಚಿಣ್ಣರನ್ನು ರಸ್ತೆ ಮಧ್ಯೆಯೇ ಕುಳ್ಳಿಸಿ, ಪೋಷಕರು ರಸ್ತೆತಡೆ ಕೈಗೊಂಡ ಘಟನೆ ಗುರುವಾರ ನಡೆದಿದೆ. ಗ್ರಾಮದ ಶಿವಾಜಿ ವೃತ್ತದಲ್ಲಿ ಪೋಷಕರ ನೇತೃತ್ವದಲ್ಲಿ ಅಂಗನವಾಡಿ ಕೇಂದ್ರದ ಚಿಣ್ಣರು ರಸ್ತೆ ಮಧ್ಯೆಯೇ ಕಲಿಕಾ ಪ್ರಕ್ರಿಯೆ ಕೈಗೊಂಡು, ಸಂಪೂರ್ಣ ರಸ್ತೆ ಬಂದ್‌ ಮಾಡುವ ಮೂಲಕ ಗಮನ ಸೆಳೆದರು.

ಇದೇ ವೇಳೆ ಸ್ಥಳಕ್ಕೆ ಬಂದ ಅಂಗನವಾಡಿ ಕಾರ್ಯಕರ್ತೆ ನಿರ್ಮಲಾ ಹಂಚನಾಳ ಕೂಡ, ರಸ್ತೆಯಲ್ಲಿಯೇ ಮಕ್ಕಳಿಗೆ ಪಾಠ ಬೋಧನೆ, ಹಾಡು ಹೇಳಿಕೊಟ್ಟರು. ಮಳೆ ಬಂದರೂ ಜಗ್ಗದ ಪೋಷಕರು, ಮಕ್ಕಳಿಗಾಗಿ ತಾಡಪತ್ರಿ ಹಿಡಿದು ನಿಂತರು.

ಗ್ರಾಮದ 12ನೇ ಅಂಗನವಾಡಿ ಕೇಂದ್ರ ಹೊಂದಿದ್ದ ಕಟ್ಟಡ ಹಳೆಯದಾಗಿದ್ದರಿಂದ ರಿಪೇರಿಗಾಗಿ ಅಂಗನವಾಡಿ ಕೇಂದ್ರವನ್ನು ಎರಡೂವರೆ ವರ್ಷಗಳ ಹಿಂದೆ ಗ್ರಾಪಂ ವಶಕ್ಕೆ ಪಡೆದಿದ್ದು, ಈವರೆಗೆ ರಿಪೇರಿ ಮಾಡಿ ಮರಳಿ ನೀಡಿಲ್ಲ. ಹೀಗಾಗಿ ಕೇಂದ್ರದ 30ಕ್ಕೂ ಹೆಚ್ಚು ಚಿಣ್ಣರು ಅಲೆದಾಡುವಂತಾಗಿದ್ದು, ಬಾಡಿಗೆ ಮನೆಯಲ್ಲಿ ಕೇಂದ್ರ ನಡೆದರೂ ಬಾಡಿಗೆ ಪಾವತಿ ಸರಿಯಾಗಿ ಆಗುತ್ತಿಲ್ಲ. ಗ್ರಾಮದ ಎಲ್ಲ ಅಂಗನವಾಡಿಗಳಿಗೆ ಸ್ವತಃ ಕಟ್ಟಡವಿದೆ. ಆದರೆ ನಮಗೆ ಮಾತ್ರ ಅಲೆದಾಡುವುದು ತಪ್ಪಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ನಿರ್ಮಲಾ ಹಂಚನಾಳ ದೂರಿದರು.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಡಿಒ ಬಿ.ಡಿ. ಚವರಡ್ಡಿ, ಅಧ್ಯಕ್ಷೆ ತೇಜಸ್ವಿನಿ ತಲವಾಯಿ, ಉಪಾಧ್ಯಕ್ಷ ವಿಠuಲ ಇಂಗಳೆ ಅವರೊಂದಿಗೆ ಪೋಷಕರು ವಾಗ್ವಾದ ನಡೆಸಿದರು. ಅನೇಕ ಬಾರಿ ಮನವಿ ಕೊಟ್ಟರೂ ಬರದೆ ಇರುವವರು ಈಗ ಯಾಕೆ ಬಂದಿದ್ದೀರಾ?ಅಂಗನವಾಡಿಗೆ ಸ್ವಂತ ಕಟ್ಟಡ ಯಾವಾಗ ಕೊಡುತ್ತೀರಿ? ಎಂದು ಪ್ರಶ್ನಿಸಿದರು.

ನಂತರ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸೇರಿಕೊಂಡು ಸ್ವಂತ ಕಟ್ಟಡ ಆಗುವವರೆಗೂ ಗ್ರಾಮದ ಡಾ|ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಅಂಗನವಾಡಿ ಕೇಂದ್ರ ತೆರೆಯಲು ಅನುಮತಿ ನೀಡಿ, ಲಿಖೀತ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಟಾಪ್ ನ್ಯೂಸ್

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.