ರಸ್ತೆ ಕಾಮಗಾರಿಗೆ ಅಡ್ಡಲಾಗಿಮಲಗಿ ದಂಪತಿ ಪ್ರತಿಭಟನೆ
Team Udayavani, Mar 20, 2021, 6:05 PM IST
ಕುಂದಗೋಳ: ತರ್ಲಘಟ್ಟ ಗ್ರಾಪಂನಲ್ಲಿ ಅವ್ಯವಹಾರ ಆಗಿದೆ ಎಂದು ಆರೋಪಿಸಿ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣವರ ಕೈಗೊಂಡಿರುವ ಸತ್ಯಾಗ್ರಹ 5ನೇ ದಿನಕ್ಕೆ ಪಾದಾರ್ಪಣೆಗೊಂಡಿದ್ದು, ಶುಕ್ರವಾರ ರಸ್ತೆ ಕಾಮಗಾರಿ ಮಾಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ರಸ್ತೆ ಮಧ್ಯೆ ಮಲಗಿ ಪ್ರತಿಭಟಿಸಿದ ಘಟನೆ ಜರುಗಿದೆ.
ಗ್ರಾಮಕ್ಕೆ ಬಂದ ಕೋಟ್ಯಂತರ ರೂ. ಅನುದಾನ ದುರುಪಯೋಗ ಪಡಿಸಿಕೊಂಡಿದ್ದು ಸಂಪೂರ್ಣ ತನಿಖೆ ಆಗುವವರೆಗೂ ಯಾವುದೇ ಕಾಮಗಾರಿಗಳನ್ನು ಮಾಡಬಾರದು. ಹಿಂದೆ ಈ ರಸ್ತೆಗೆ ಲಕ್ಷಾಂತರ ರೂಪಾಯಿ ಖರ್ಚು ಹಾಕಿದ್ದಾರೆ. ಈಗ ಈ ರಸ್ತೆ ಮಾಡಿದರೆ ಎಲ್ಲ ಸಾಕ್ಷಿಗಳು ನಶಿಸಿ ಹೋಗುತ್ತವೆ. ಅಭಿವೃದ್ಧಿ ಕಾರ್ಯಕ್ಕೆ ನನ್ನ ವಿರೋಧವಿಲ್ಲ. ಮೊದಲು ಅ ಧಿಕಾರಿಗಳು 2015ರಿಂದ 20ರ ವರೆಗೆ ನಡೆದ ಅವ್ಯವಹಾರವನ್ನು ಸಂಪೂರ್ಣ ತನಿಖೆ ಮಾಡಿ ಸಂಬಂಧಪಟ್ಟ ಅಧಿ ಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲು ಆಗಬೇಕು ಹಾಗೂ ದುರುಪಯೋಗ ಪಡಿಸಿಕೊಂಡ ಹಣವನ್ನು ಪಂಚಾಯತಿಗೆ ಮರಳಿಸಬೇಕೆಂದು ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ.
ನನ್ನ ಜೀವ ಹೋದರೂ ಸರಿ ತನಿಖೆ ಆಗುವವರೆಗೂ ತುರ್ತು ಕೆಲಸ ಬಿಟ್ಟು ಬೇರೆ ಯಾವ ಕೆಲಸಕ್ಕೆ ಅನುವು ಮಾಡಿಕೊಡುವುದಿಲ್ಲ ಎಂದು ಪಟ್ಟುಹಿಡಿದರು. ಪರಿಣಾಮ ಕೆಲಕಾಲ ಗೊಂದಲದ ವಾತಾವರಣ, ಮಾತಿನ ಸಮರ ಜರುಗಿತು. ಪಿಡಿಒ ಮಧ್ಯೆ ಪ್ರವೇಶಿಸಿ ಕೆಲಸವನ್ನು ತಾತ್ಕಾಲಿಕವಾಗಿ ನಿಲ್ಲಿಸುತ್ತೇವೆ, ಸೋಮವಾರ ಗ್ರಾಮದ ಹಿರಿಯರೊಂದಿಗೆ ಜಿಪಂ ಸಿಇಒ ಅವರನ್ನು ಭೇಟಿ ಮಾಡಿ ಇಲ್ಲಿ ನಡೆದ ಘಟನೆಯನ್ನು ವಿವರಿಸುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.