ಮಹಿಳೆಯರ ಸಾಧನೆ ಅಪಾರ
Team Udayavani, Apr 10, 2017, 3:01 PM IST
ಹುಬ್ಬಳ್ಳಿ: ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲೂ ದಾಪುಗಾಲು ಇರಿಸಿದ್ದು, ಅವರಿಗೆ ಅಸಾಧ್ಯವಾದ ಕೆಲಸ ಯಾವುದು ಇಲ್ಲ ಎಂದು ಮೂರುಸಾವಿರ ಮಠದ ಶ್ರೀ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು. ಜೆ.ಸಿ. ನಗರದ ಅಕ್ಕನ ಬಳಗದಲ್ಲಿ ಶರಣೆ ಅಕ್ಕಮಹಾದೇವಿ ಜಯಂತಿ ಹಾಗೂ ಅಕ್ಕನ ಬಳಗದ 79ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ವಿಜ್ಞಾನ, ತಂತ್ರಜ್ಞಾನ, ಸಾಹಿತ್ಯ, ಕಲೆ, ಇತಿಹಾಸ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಅಪಾರ ಸಾಧನೆ ಮಾಡಿದ್ದಾರೆ. ದೇಶದ ಪ್ರತಿಷ್ಠಿತ ಎಂದೇ ಕರೆಯುವ ಇಸ್ರೋದಲ್ಲೂ ಹಲವು ಮಹಿಳೆಯರು ವಿಜ್ಞಾನಿಗಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು. ತಾಯಿಯಂದಿರುವ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಕೂಡಾ ತಮ್ಮ ಮಾತೃ ಸ್ಥಾನ, ಗೃಹಿಣಿ ಸ್ಥಾನವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ.
ಉದ್ಯೋಗದ ವಿಷಯದಲ್ಲಿ ಮುಂದು ಅದೇ ರೀತಿ ಸಂಸಾರದಲ್ಲೂ ಮುಂದೆ ಮಹಿಳೆಯೇ ಇರುತ್ತಾಳೆ. ಮನೆಯಲ್ಲಿ ಮಕ್ಕಳ ಲಾಲನೆ-ಪಾಲನೆ, ಸಂಸಾರ ಸರಿದೂಗಿಸಿಕೊಂಡು ಹೋಗುವುದು, ಉತ್ತಮ ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಮಹಿಳೆ ಪಾರುಪತ್ಯ ಸಾಧಿಸಿದ್ದಾಳೆ ಎಂದರು.
ಈ ಹಿಂದೆ ವಿರಕ್ತ ಎಂಬುದು ಕೇವಲ ಪುರುಷರಿಗೆ ಸೀಮಿತವಾಗಿತ್ತು. ಆದರೆ ಅದನ್ನು ಹೊಡೆದುಹಾಕಿದ್ದು ಅಕ್ಕಮಹಾದೇವಿ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಎಲ್ಲ ವೈರಾಗ್ಯಗಳನ್ನು ತೊರೆದು ಅಕ್ಕಮಹಾದೇವಿ ವಿರಕ್ತವನ್ನು ಅಪ್ಪಿಕೊಂಡರು. ಅಷ್ಟೇ ಅಲ್ಲದೇ ಕನ್ನಡ ನಾಡಿನ ಮೊದಲ ಕವಯತ್ರಿ ಅಕ್ಕಮಹಾದೇವಿ ಎಂದರು.
ಇದೇ ಸಂದರ್ಭದಲ್ಲಿ ಮಂಗಲಾ ಕುಪ್ಪಸ್ತ ಅವರಿಗೆ ಆದರ್ಶ ಗೃಹಿಣಿ ಎಂದು ಮತ್ತು ಸಹಾಯಕ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಮೌನಾ ನರವಣಿ, ಶಂಕುತಲಾ ಶೆಟ್ಟರ, ಪತ್ರಕರ್ತ ಸುಶೀಲೇಂದ್ರ ಕುಂದರಗಿ, ಸುವರ್ಣಾ ಅಬ್ಬಿಗೇರಿ ಅವರನ್ನು ಸನ್ಮಾನಿಸಲಾಯಿತು.
ನಂತರ ಪತ್ರಕರ್ತ ಸುಶೀಲೇಂದ್ರ ಕುಂದರಗಿ, ಸುವರ್ಣಾ ಅಬ್ಬಿಗೇರಿ, ಶಂಕುತಲಾ ಶೆಟ್ಟರ, ಮೌನಾ ನರವಣಿ ಮಾತನಾಡಿದರು. ಮಂಗಲಾ ನರವಣಿ ಸ್ವಾಗತಿಸಿದರು. ಸುನೀಲಾ ಬ್ಯಾಹಟ್ಟಿ ನಿರೂಪಿಸಿದರು. ಶಾಂತಾ ಹೊಸಕೋಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.