ಬುಡಕಟ್ಟು ಭಾಷಾನುವಾದಕ್ಕೆ ರೋಬೋಟ್‌ ಅಣಿ

ಮಾನವ ಸ್ವರೂಪಿ ರೋಬೋಟ್‌ ಯಂತ್ರದ ಮಾಹಿತಿಯನ್ನು ರಾಷ್ಟ್ರಪತಿಗಳ ಗಮನಕ್ಕೆ ತರಲಿದೆ.

Team Udayavani, Sep 24, 2022, 6:08 PM IST

ಬುಡಕಟ್ಟು ಭಾಷಾನುವಾದಕ್ಕೆ ರೋಬೋಟ್‌ ಅಣಿ

ಧಾರವಾಡ: ಹೇಳಿ ಕೇಳಿ ಇದು ರೋಬೋಗಳ ಸಂಶೋಧನಾ ಯುಗ. ಚಂದ್ರ, ಅನ್ಯ ಗ್ರಹಗಳ ಮೇಲೆ ರೋಬೋಟ್‌ ಬಳಕೆ ನಡೆಯುತ್ತಿರುವಾಗಲೇ ಧಾರವಾಡ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ರಾಷ್ಟ್ರಪತಿಗಳ ಮೂಲ ರಾಜ್ಯವಾದ ಒಡಿಶಾದ ಬುಡಕಟ್ಟು ನಿವಾಸಿಗಳಿಗಾಗಿ ಬಹುಭಾಷಾ ಧ್ವನಿ ಅನುವಾದ ಮಾಡುವ ರೋಬೋಟ್‌ ಸಿದ್ಧಪಡಿಸಿ ಕಾರ್ಯಕ್ಷಮತೆ ಮೆರೆದಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.26ರಂದು ಮಧ್ಯಾಹ್ನ ಐಐಐಟಿ ಸಂಸ್ಥೆಯನ್ನು ನಾಡಿಗೆ ಸಮರ್ಪಿಸಲಿದ್ದಾರೆ. ಈ ಶುಭ ಸಂದರ್ಭದಲ್ಲಿಯೇ ಸಂಸ್ಥೆಯು ಉನ್ನತ ಮಟ್ಟದಲ್ಲಿ ತಯಾರಿಸುತ್ತಿರುವ ಮಾನವ ಸ್ವರೂಪಿ ರೋಬೋಟ್‌ ಯಂತ್ರದ ಮಾಹಿತಿಯನ್ನು ರಾಷ್ಟ್ರಪತಿಗಳ ಗಮನಕ್ಕೆ ತರಲಿದೆ.

ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಬುಡಕಟ್ಟು ಭಾಷೆಗಳಿಂದ ಇತರ ಭಾಷೆಗಳಿಗೆ ಧ್ವನಿ ಭಾಷಾನುವಾದದ ಉಪಕರಣವನ್ನು ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಪ್ರಸ್ತುತ ಈ ರೋಬೋಟ್‌ ತಂತ್ರಜ್ಞಾನದಲ್ಲಿ ಬುಡಕಟ್ಟು ಜನರಿಗೆ ಇಂಗ್ಲಿಷ್‌ ಭಾಷೆಯಲ್ಲಿ ಲಭ್ಯವಿರುವ ಮಾಹಿತಿ ಅವರ ಭಾಷೆಯಲ್ಲಿ ದೊರೆಯಲಿದೆ. ಈ ಯೋಜನೆಯಲ್ಲಿ ಒಡಿಶಾದ ಕುಯಿ ಮತ್ತು ಮುಂಡಾರಿ ಭಾಷೆಗಳನ್ನು ಕರ್ನಾಟಕದ ಲಂಬಾಣಿ ಹಾಗೂ ಸೋಲಿಗ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಇಂಗ್ಲಿಷ್‌ ಭಾಷೆಯಿಂದ ಹೇಳಲ್ಪಟ್ಟ ಬುಡಕಟ್ಟಿನ ಭಾಷೆಗೂ ಹಾಗೂ ಬುಡಕಟ್ಟು ಭಾಷೆಯಿಂದ ಇಂಗ್ಲಿಷ್‌ ಭಾಷೆಗೂ ಸ್ಪಷ್ಟವಾಗಿ ಅನುವಾದ ಮಾಡಬಹುದಾದಂತಹ ತಂತ್ರಲಿಪಿಯನ್ನು ಸಿದ್ಧಪಡಿಸಲಾಗುತ್ತಿದೆ. ಈಗಾಗಲೇ ಲಂಬಾಣಿ, ಸೋಲಿಗ ಮತ್ತು ಕುಯಿಗೆ ಪಠ್ಯದಿಂದ ಪಠ್ಯಕ್ಕೆ ಮಾತಿನ ಸಂಶ್ಲೇಷಣೆಯ ಮಾದರಿಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಡಾ| ದೀಪಕ್‌ ಹೇಳಿದ್ದಾರೆ.

ಸಾಕಷ್ಟು ಜ್ಞಾನವಿರುವ ಬುಡಕಟ್ಟು ಜನಾಂಗದಲ್ಲಿ ಈ ತಂತ್ರಜ್ಞಾನ ಉಪಯೋಗ ವಾದರೆ ಜೀವವೈವಿಧ್ಯತೆ, ಪ್ರಾಣಿಗಳ ಜ್ಞಾನ, ಸಂಗೀತ, ನೃತ್ಯ, ಕಲೆ, ಪರಂಪರೆ, ಸಂಸ್ಕೃತಿ ಡಿಜಿಟಲ್‌ ರೂಪದಲ್ಲಿ ಹಿಡಿದಿಟ್ಟು ಕೊಂಡು ಹೊರಜಗತ್ತಿಗೆ ಗೊತ್ತಾಗಲಿದೆ. ಸರ್ಕಾರಿ ಯೋಜನೆಗಳ ಬಗ್ಗೆ ಅರಿವು, ಸದುಪಯೋಗಪಡಿಸಿ ಕೊಳ್ಳುವ ಬಗ್ಗೆಯೂ ಇದರಿಂದ ತಿಳಿದುಕೊಳ್ಳ ಬಹುದಾಗಿದೆ. ಧಾರವಾಡ, ಹೈದ್ರಾಬಾದ್‌ ಹಾಗೂ ಭುವನೇಶ್ವರ ಐಐಟಿ ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಸಂಶೋಧನೆಯಲ್ಲಿ ಸಹಪರೀಕ್ಷಕರಾದ ಡಾ| ಪ್ರಕಾಶ ಪವಾರ ಹಾಗೂ ಡಾ| ಸಿಬಾ ಶಂಕರಪಾಡಿ ತೊಡಗಿಸಿ ಕೊಂಡಿದ್ದಾರೆ. ನವದೆಹಲಿಯ ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರಾಥಮಿಕ ಹಂತವಾಗಿ 44.53 ಲಕ್ಷ ಅನುದಾನ ನೀಡಿದ್ದಾರೆ.

 ಸ್ವಯಂ ಚಾಲಿತ ಮಾನವರೂಪಿ ರೋಬೋಟ್‌
ವಯಸ್ಸಾದ ಹಿರಿಯರ ಸೇವೆಗೆ ಅನುಕೂಲವಾಗುವ ದೃಷ್ಟಿಯಿಂದ ಸ್ವಯಂ ಚಾಲಿತ ಮಾನವರೂಪಿ ರೋಬೋಟ್‌ನ್ನು ಸಹ ಐಐಐಟಿ ಧಾರವಾಡದಲ್ಲಿ ನಿರ್ಮಿಸಲಾಗುತ್ತಿದೆ. ಪ್ರಸ್ತುತ ಸಂಶೊಧನಾ ಯೋಜನೆಯು ಭಾರತದ ವಾತಾವರಣಕ್ಕೆ ಒಗ್ಗುವಂತಹ, ವಯಸ್ಸಾದವರ ಆರೈಕೆಗಾಗಿ ಮಾನವರೂಪಿ ರೋಬೋಟ್‌ ತಯಾರಿಸುವುದಾಗಿದೆ. ಅಲ್ಲದೆ ಹಾರ್ಡ್‌ವೇರ್‌ ಮತ್ತು ಸಾಫ್ಟ್‌ವೇರ್‌ ಮಾರ್ಪಾಡು ಮಾಡುವುದರಿಂದ ಇತರ ಉಪಯೋಗಗಳಿಗೂ ಬಳಸಬಹುದಾಗಿದೆ. ಹೈದರಾಬಾದ್‌ ತಿಹಾನ್‌ ಐಐಟಿ ಏಜೆನ್ಸಿ ಮೂಲಕ 70 ಲಕ್ಷ ರೂ. ಅನುದಾನದದಲ್ಲಿ ಸ್ವಯಂಚಾಲಿತ ಮಾನವರೂಪಿ ರೋಬೋಟ್‌ ತಯಾರಿಸಲಾಗುತ್ತಿದೆ. ಈ ಸಂಶೋಧನೆಯಲ್ಲಿ ಸಹಪರೀಕ್ಷಕರಾದ ಪ್ರೊ| ಕವಿ ಮಹೇಶ್‌, ಡಾ| ರಾಜೇಂದ್ರ ಹೆಗಡಿ, ಡಾ| ಪವನ್‌ ಕುಮಾರ್‌ ಸಿ.,
ಡಾ| ರಮೇಶ ಆತೆ, ಡಾ| ಚಿನ್ಮಯಾನಂದ ಎ. ತೊಡಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.