ಅವಶ್ಯಕತೆ ಇಲ್ಲದ ಜಾಗೆಯಲ್ಲಿ ಶೌಚಾಲಯ

ಆನೇಗುಂದಿ ಪ್ಲಾಟ್‌ನಲ್ಲಿ ಕಟ್ಟುತ್ತಿರುವ 15 ಲಕ್ಷ ಅನುದಾನದ ಶೌಚಾಲಯ ಅಸಮರ್ಪಕವಾಗಿದೆ.

Team Udayavani, Jul 6, 2022, 4:31 PM IST

ಅವಶ್ಯಕತೆ ಇಲ್ಲದ ಜಾಗೆಯಲ್ಲಿ ಶೌಚಾಲಯ

ನವಲಗುಂದ: ಪಟ್ಟಣದ ಆನೇಗುಂದಿ ಪ್ಲಾಟ್‌ ರಸ್ತೆಗೆ ಹೊಂದಿಕೊಂಡು ಶ್ರೀ ಲಾಲಗುಡಿ ದೇವಸ್ಥಾನದ ಜಾಗೆಯಲ್ಲಿ 15 ಲಕ್ಷ ರೂ. ಅನುದಾನದಲ್ಲಿ ಶೌಚಾಲಯ ನಿರ್ಮಾಣ ಮಾಡಬೇಕೆಂಬ ಯೋಜನೆಯನ್ನು ಪುರಸಭೆಯವರು ಹಾಕಿಕೊಂಡಿರುವುದನ್ನು ಖಂಡಿಸಿ ಅಲ್ಲಿನ ನಿವಾಸಿಗಳು ಮಂಗಳವಾರ ಪುರಸಭೆಗೆ ಮನವಿ ನೀಡಿ ಒತ್ತಾಯಿಸಿದ್ದಾರೆ.

ಶೌಚಾಲಯ ಅವಶ್ಯಕತೆ ಇಲ್ಲದ ಜಾಗೆಯಲ್ಲಿ ಶೌಚಾಲಯವನ್ನು ಹಾಕಿದರೆ ಮುಂದಿನ ದಿನಗಳಲ್ಲಿ ಇಲ್ಲಿಯ ಪರಿಸರ ಶುದ್ಧವಾಗಿ ಉಳಿಯುವುದಿಲ್ಲ. ಈ ಶೌಚಾಲಯವನ್ನು ಸಾರ್ವಜನಿಕರಿಗೆ ಅನುಕೂಲವಾಗುವಂತಹ ಪ್ರದೇಶಗಳಲ್ಲಿ ಹಾಕಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ “ಪುರಸಭೆ ನಿರ್ಲಕ್ಷ್ಯ; ನಿಸರ್ಗದ ಕರೆಗೆ ಬಯಲೇ ಆಸರೆ’ ಎಂಬ ಶೀರ್ಷಿಕೆಯಡಿ ಮೂತ್ರ ವಿಸರ್ಜನೆಗಾಗಿ ಸರಿಯಾದ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಪರದಾಡುತ್ತಿರುವ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು. ಈ ನಡುವೆಯೇ ಜನದಟ್ಟಣೆ ಇಲ್ಲದ ಪ್ರದೇಶಗಳಲ್ಲಿ ಲಕ್ಷಗಟ್ಟಲೆ ಹಣ ವ್ಯಯ ಮಾಡಿ ಶೌಚಾಲಯ ಕಟ್ಟಲು ಮುಂದಾಗುತ್ತಿರುವುದು ಯಾರಿಗೂ ತಿಳಿಯದಂತಾಗಿದೆ.

ಮಾರುಕಟ್ಟೆ, ಇತರೆ ಪ್ರಮುಖ ಜನದಟ್ಟಣೆ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಹಾಗೂ ಶೌಚಾಲಯ ಇಲ್ಲದೇ ಪರಿತಪಿಸುತ್ತಿರುವ ಜನರ ಸಮಸ್ಯೆಗೆ ಪರಿಹಾರ ನೀಡುವುದನ್ನು ಬಿಟ್ಟು ಸುಸಜ್ಜಿತವಾಗಿ ಆರ್‌ಸಿಸಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿರುವ ಪ್ರದೇಶಗಳಲ್ಲಿ ಶೌಚಾಲಯವನ್ನು ಕಟ್ಟುತ್ತೇವೆ ಎಂದು ಮಂಕು ತಿಮ್ಮನ ಲೆಕ್ಕಾಚಾರ ಪುರಸಭೆ ಮಾಡುತ್ತಿರುವುದು ಈ ಭಾಗದ ಜನರಿಗೆ ಬೇಸರವನ್ನುಂಟು ಮಾಡಿದೆ.

ಪುರಸಭೆ ವಾಣಿಜ್ಯ ಮಳಿಗೆಯಲ್ಲಿಯೂ ಮೂತ್ರ ವಿಸರ್ಜನೆಗಾಗಿ ಯಾವುದೇ ಸವಲತ್ತು ಇಲ್ಲ. ಈ ಮೊದಲು ತರಕಾರಿ ಮಾರುಕಟ್ಟೆಯಲ್ಲಿದ್ದ ಮೂತ್ರಾಲಯವನ್ನು ಪುರಸಭೆಯವರು ತೆಗೆದುಹಾಕಲಾಗಿದೆ. ಹೀಗಾಗಿ ಮೂತ್ರ ವಿಸರ್ಜನೆಗೆ ಜಾಗೆ ಇಲ್ಲದೆ ಇರುವುದರಿಂದ ಪುರಸಭೆ ವಾಣಿಜ್ಯ ಸಂಕೀರ್ಣದ ಮೇಲುಗಡೆ, ಬಾಲೋದ್ಯಾನ ಬಯಲು, ಟಾಕೀಜ್‌ ರಸ್ತೆ, ಬಿಎಸ್‌ಎನ್‌ಎಲ್‌ ಕಾರ್ಯಾಲಯ ಮುಂದಿನ ಬಯಲಲ್ಲಿ ಮೂತ್ರ ವಿಸರ್ಜಿಸುತ್ತಾರೆ.

ಈ ಭಾಗದಲ್ಲಿ ಚಿಕ್ಕ ಮಕ್ಕಳ ಆಸ್ಪತ್ರೆ, ಸರಕಾರಿ ಶಾಲೆ ಹಾಗೂ ತುಂಬಾ ಜನದಟ್ಟಣೆ ಇರುತ್ತಿದ್ದು, ದುರ್ನಾತ ಬೀರುವಂತಾಗಿದೆ. ಮೂಗು ಮುಚ್ಚಿಕೊಂಡೇ ಓಡಾಡುವಂತಾಗಿದೆ. ಈಗ ಪಟ್ಟಣದ ಆನೇಗುಂದಿ ಪ್ಲಾಟ್‌ನಲ್ಲಿ ಕಟ್ಟುತ್ತಿರುವ 15 ಲಕ್ಷ ಅನುದಾನದ ಶೌಚಾಲಯ ಅಸಮರ್ಪಕವಾಗಿದೆ. ಇದರ ಅಕ್ಕಪಕ್ಕಕ್ಕೂ ದೇವಸ್ಥಾನಗಳು ನಿರ್ಮಾಣವಾಗುತ್ತಿರುವುದರಿಂದ ಶೌಚಾಲಯವನ್ನು ಇಲ್ಲಿ ಕಟ್ಟಬಾರದೆಂಬ ಕೂಗು ಈ ಭಾಗದ ಜನರದ್ದಾಗಿದೆ.

ಈ ಭಾಗದಲ್ಲಿ ಶೌಚಾಲಯ ಅವಶ್ಯಕತೆ ಇಲ್ಲ. ಜನದಟ್ಟಣೆ ಇರುವಂತಹ ಮಾರ್ಕೆಟ್‌ನಲ್ಲಿ ಒಂದು ಶೌಚಾಲಯ, ಮೂತ್ರ ವಿಸರ್ಜನೆ ವ್ಯವಸ್ಥೆ ಇಲ್ಲದೇ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಾರೆ. ಅವಶ್ಯಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಹಾಗೂ ಶೌಚಾಲಯವನ್ನು ಮಾಡಿ ಸರಕಾರದ ಅನುದಾನ ಸರಿಯಾಗಿ ಉಪಯೋಗಿಸವಂತಾಗಬೇಕು.
∙ಬಿ.ಕೆ. ರಾಯನಗೌಡರ, ಆನೇಗುಂದಿ ಪ್ಲಾಟ್‌ ನಿವಾಸಿ

*ಪುಂಡಲೀಕ ಮುಧೋಳ

ಟಾಪ್ ನ್ಯೂಸ್

Asha-workers-Protest

Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ

lokayukta-Raid

ಎಂಟು ಅಧಿಕಾರಿಗಳಿಗೆ ಸೇರಿದ 38 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ: 21 ಕೋಟಿ ರೂ. ಆಸ್ತಿ ಪತ್ತೆ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Cong-sabhe

Congress Session: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಜ.21ಕ್ಕೆ ಮರುನಿಗದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Asha-workers-Protest

Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ

lokayukta-Raid

ಎಂಟು ಅಧಿಕಾರಿಗಳಿಗೆ ಸೇರಿದ 38 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ: 21 ಕೋಟಿ ರೂ. ಆಸ್ತಿ ಪತ್ತೆ

Court-1

Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.