ಸೊಪ್ಪಿನ ಎಎಪಿ ಗ್ರಾಮೀಣ ಜಿಲ್ಲಾಧ್ಯಕ್ಷ
Team Udayavani, Jan 16, 2022, 8:45 PM IST
ಹುಬ್ಬಳ್ಳಿ: ಆಮ್‌ಆದ್ಮಿ ಪಕ್ಷ(ಎಎಪಿ) ಗ್ರಾಮೀಣ ಜಿಲ್ಲಾಧ್ಯಕ್ಷರನ್ನಾಗಿ ಕಳಸಾ-ಬಂಡೂರಿ ಸಮನ್ವಯ ಸಮಿತಿ ಸಂಚಾಲಕ ವಿಕಾಸ ಸೊಪ್ಪಿನ ಅವರನ್ನು ನೇಮಕ ಮಾಡಲಾಗಿದೆ.
ಅವರ ರೈತಪರ ಹೋರಾಟ ಮತ್ತು ರೈತಪರ ಕಾಳಜಿ ಗುರುತಿಸಿ ಎಎಪಿ ನೂತನ ಜಿಲ್ಲಾಧ್ಯಕ್ಷ ಅನಂತಕುಮಾರ ಬುಗಡಿ ಅವರ ನೇತೃತ್ವದಲ್ಲಿ ಎಲ್ಲ ಜಿಲ್ಲಾ ಮುಖಂಡರ ಶಿಫಾರಸು ಮೇರೆಗೆ ಪಕ್ಷದ ರಾಜ್ಯ ಉಸ್ತುವಾರಿ ರೊಮಿ ಭಾಟಿ ಮತ್ತು ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ ಜೈನ ಅವರ ಸಮ್ಮುಖದಲ್ಲಿ ವಿಕಾಸ ಸೊಪ್ಪಿನ ಅವರನ್ನು ನೇಮಕ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ರೊಮಿ ಭಾಟಿ ಅವರು, ಗ್ರಾಮೀಣ ಜನರ ಸಮಸ್ಯೆಗಳ ವಿರುದ್ಧ ತಮ್ಮ ಹೋರಾಟವನ್ನು ತೀವ್ರಗತಿಯಲ್ಲಿ ಮುಂದುವರಿಸಿ ಬರುವ ಬೇಸಿಗೆ ಮೊದಲು ಕಳಸಾ-ಬಂಡೂರಿ ಯೋಜನೆ ಕಾರ್ಯಾರಂಭ ಮಾಡಲು ಒತ್ತು ಕೊಡಬೇಕು ಎಂದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ವಿಕಾಸ ಸೊಪ್ಪಿನ, ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಮ್ ಆದ್ಮಿ ಪಕ್ಷದ ಅಭಿಮಾನಿಗಳಿದ್ದಾರೆ. ಅಂಥವರನ್ನು ಗುರುತಿಸಿ ಪಕ್ಷಕ್ಕೆ ಕರೆತಂದು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ. ರೈತರ, ಮಹಿಳೆಯರ ಮತ್ತು ಸಾಮಾನ್ಯ ಜನತೆಯ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಚಳವಳಿ ಕಟ್ಟಿ ಪಕ್ಷ ಬೆಳೆಸುವ ಕಾರ್ಯವನ್ನು ಮುಂಬರುವ ದಿನಗಳಲ್ಲಿ ಮಾಡಲಾಗುವುದು ಎಂದು ಹೇಳಿದರು.
ಶಶಿಕುಮಾರ ಸುಳ್ಳದ, ಪ್ರವೀಣಕುಮಾರ ನಡಕಟ್ಟಿನ, ಮಲ್ಲಪ್ಪ ತಡಸದ, ಸಂತೋಷ ಮಾನೆ, ಮಲ್ಲಿಕಾರ್ಜುನಯ್ಯ ಹಿರೇಮಠ, ಸದಾನಂದ ಹೊಳೆಣ್ಣವರ, ಹಸನಸಾಬ್ ಇನಾಂದಾರ, ಶಿವಕುಮಾರ ಬಾಗಲಕೋಟೆ, ಮಹೆಬೂಬ್ ಹೊಸಮನಿ, ಡೇನಿಯಲ್ ಐಕೋಸ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.