ಓದು-ಹೊಸ ಆಲೋಚನೆಯಿಂದ ಸಾಧನೆ
Team Udayavani, Jun 30, 2018, 4:27 PM IST
ಧಾರವಾಡ: ಯಾವುದೇ ಕ್ಷೇತ್ರದ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಓದುವ ಮೂಲಕ ಹೊಸ ಆಲೋಚನೆ ಮೈಗೂಡಿಸಿಕೊಳ್ಳದೆ ಹೋದರೆ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಧಾರವಾಡ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕ ಡಾ| ಕವಿ ಮಹೇಶ ಹೇಳಿದರು. ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 8ನೇ ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.
ಕಷ್ಟಪಟ್ಟು ಓದಿ ಪಡೆದ ಪದವಿಗಳು ಹೊಸ ವೃತ್ತಿ ಜೀವನಕ್ಕೆ ಸದಾ ಉತ್ತಮ ಮುನ್ನಡೆಯನ್ನೇ ನೀಡುತ್ತವೆ. ಅದರಲ್ಲೂ ಜ್ಞಾನ ಕೌಶಲ ಹೊಂದಿರುವ ಎಂಜಿನಿಯರ್ ಪದವಿ ಪಡೆದವರು ಉತ್ತಮ ಎಂಜಿನಿಯರ್ ಆಗಿ ರೂಪುಗೊಳ್ಳುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಇ ಸೊಸೈಟಿ ಕಾರ್ಯದರ್ಶಿ ಜೀವಂಧರ ಕುಮಾರ ಮಾತನಾಡಿ, ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್. ಈ ನಿಟ್ಟಿನಲ್ಲಿ ಕಲಿಸಿದ ಸಂಸ್ಥೆಗೆ ಹೆಸರು ಹೆಚ್ಚಿಸುವುದರ ಜೊತೆಗೆ ಪರಿಸರ ಮತ್ತು ಸಮಾಜದ ಮೇಲೆ ಹೆಚ್ಚು ಗೌರವ ಇಟ್ಟುಕೊಂಡು ಬೆಳೆಯಬೇಕು ಎಂದು ಹೇಳಿದರು.
ಮಹಾವಿದ್ಯಾಲಯಕ್ಕೆ ಅತೀ ಹೆಚ್ಚು ಅಂಕ ಪಡೆದ ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಅನುಷಾ ಭಟ್ (ಸಿಜಿಪಿಎ 9.69) ಅವರಿಗೆ ಡಾ|ಡಿ. ವೀರೇಂದ್ರ ಹೆಗ್ಗಡೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಕಾಲೇಜಿನ ಒಟ್ಟು 559 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಪ್ರಾಚಾರ್ಯ ಡಾ| ಎಸ್.ಬಿ. ವಣಕುದುರೆ ವಾರ್ಷಿಕ ವರದಿ ಮಂಡಿಸಿದರು. ಡೀನ್‌ಗಳು, ಏಳು ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿ ಪೋಷಕರು ಇದ್ದರು. ರಕ್ಷಿತ ಹೆಬ್ಟಾರ ಪ್ರಾರ್ಥಿಸಿದರು. ಪ್ರೊ| ವಾಸುದೇವ ಪರ್ವತಿ ನಿರೂಪಿಸಿದರು. ಡಾ| ಆರ್.ಎಲ್. ಚಕ್ರಸಾಲಿ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು. ಇಂದಿರಾ ಉಮರ್ಜಿ ಪರಿಚಯಿಸಿದರು. ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ| ಕೆ.ಗೋಪಿನಾಥ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.