ಹಿರಿಯರ ಮೇಲಿನ ದೌರ್ಜನ್ಯ ತಡೆಗೆ ಕ್ರಮ

•ಇಂದಿನ ಯುವಕರ ಎದುರು ಹಿರಿಯರೇ ತರುಣರು: ಜುಬೇರ•60 ದಿನಗಳಲ್ಲಿ ದೂರಿಗೆ ಪರಿಹಾರ ಭರವಸೆ‌

Team Udayavani, Jul 21, 2019, 10:00 AM IST

hubali-tdy-5

ಹುಬ್ಬಳ್ಳಿ: ಹೊಸೂರ ವೃತ್ತದಲ್ಲಿರುವ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಮಹಮ್ಮದ ಜುಬೇರ ಉದ್ಘಾಟಿಸಿದರು.

ಹುಬ್ಬಳ್ಳಿ: ವಯೋವೃದ್ಧರು ಒಂದೆಡೆ ಕುಳಿತುಕೊಳ್ಳದೆ ಸದಾ ಕ್ರಿಯಾಶೀಲರಾಗಿರಬೇಕು ಎಂದು ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ ಹೇಳಿದರು.

ಹೊಸೂರ ವೃತ್ತದಲ್ಲಿರುವ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಗೆ ಭೇಟಿ ನೀಡಿ ಅವರು ಮಾತನಾಡಿದರು. ಎಲ್ಲ ನಿವೃತ್ತ ನೌಕರರು ಹಾಗೂ ನಾಗರಿಕರು ಕೂಡಿಕೊಂಡು ನಿರ್ಮಿಸಿರುವ ಈ ವೇದಿಕೆಯಲ್ಲಿ ಇಂದು ಸಾವಿರಾರು ಜನರು ಸದಸ್ಯತ್ವ ಪಡೆದುಕೊಂಡಿರುವುದು ಹೆಮ್ಮೆಯ ವಿಷಯ. ಇಂದಿನ ಯುವಕರನ್ನು ನೋಡಿದರೆ ಅವರ ಮುಂದೆ ನೀವೆಲ್ಲರೂ ನವತರುಣರೇ ಆಗಿದ್ದೀರಿ. ನಿಮ್ಮ ದೇಹಕ್ಕೆ ವಯಸ್ಸಾಗಿದೆ ಹೊರತು ಮನಸ್ಸಿಗಲ್ಲ ಎಂದರು.

ಜಿಲ್ಲೆಯಲ್ಲಿ ಹಿರಿಯರ ಮೇಲೆ ಮಕ್ಕಳ ದೌರ್ಜನ್ಯ ಕುರಿತು 27 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಈಗಾಗಲೇ ಸುಮಾರು 18ಕ್ಕೂ ಹೆಚ್ಚು ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ. ಉತ್ತಮ ಹುದ್ದೆಯಲ್ಲಿರುವ ಮಕ್ಕಳು ತಂದೆ-ತಾಯಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಿಂದ ಹೊರಹಾಕುವುದು, ದೌರ್ಜನ್ಯ ಎಸಗುವುದು ಮಾಡುತ್ತಿದ್ದಾರೆ. ಇಂತಹ ಕೃತ್ಯ ತಡೆ ಹಾಗೂ ಹಿರಿಯ ನಾಗರಿಕರ ರಕ್ಷಣೆಗಾಗಿ ಒಂದು ವೇದಿಕೆ ನಿರ್ಮಿಸಲಾಗಿದೆ. ಅಲ್ಲಿ ನಿಮ್ಮ ದೂರು ನೀಡಿದಲ್ಲಿ 60 ದಿನಗಳಲ್ಲಿ ಅದಕ್ಕೆ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಹೇಳಿದರು.

ಸಂಘದ ರಾಜ್ಯಾಧ್ಯಕ್ಷ ಬಿ.ಎ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಕ್ಕೆ ನೀಡಿರುವ ಜಾಗದಲ್ಲಿ ಕೆಲವೊಂದು ತಾಂತ್ರಿಕ ತೊಂದರೆಗಳು ಕಂಡು ಬಂದಿದ್ದು ಅವುಗಳನ್ನು ಬಗೆಹರಿಸಿಕೊಡುವಂತೆ ಉಪವಿಭಾಗಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.

ಭಾರತದ ಉತ್ತಮ ನಾಗರಿಕ ಪ್ರಶಸ್ತಿ ಪಡೆದ ಟಾಕಪ್ಪ ಯಲ್ಲಪ್ಪ ಕಲಾಲ ಅವರನ್ನು ಸನ್ಮಾನಿಸಲಾಯಿತು. ಪಿ.ಎಸ್‌. ಧರಣೆಪ್ಪನವರ, ಎಫ್‌.ಎ. ಶೇಖ್‌, ಗದಗ ಜಿಲ್ಲೆ ಅಧ್ಯಕ್ಷ ಬಿ.ಬಿ. ಹೂಗಾರ, ಗಾಯಕವಾಡ, ಡಾ| ಡಿ.ಜಿ. ಪಾಟೀಲ, ಪ್ರೊ| ಎಂ.ಪಿ. ಕುಂಬಾರ, ರಮಾ ನೀಲಪ್ಪಗೌಡರ, ಶಂಕರ ಮಲಕಣ್ಣವರ, ಫಕ್ಕೀರಪ್ಪ ಇನ್ನಿತರರಿದ್ದರು.

ಲಕ್ಷ್ಮೀ ಮಂಗಳವೇಡಿ ಪ್ರಾರ್ಥಿಸಿದರು. ಗಾಮನಗಟ್ಟಿ ಸ್ವಾಗತಿಸಿದರು. ಮಂಗಳೂರಮಠ ವಂದಿಸಿದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.