ನಟ-ನಿರ್ದೇಶಕ ಅನಿಲ ದೇಸಾಯಿ ಇನ್ನಿಲ್ಲ
Team Udayavani, May 7, 2019, 10:56 AM IST
ಧಾರವಾಡ: ಬಳ್ಳಾರಿ ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಅಧಿಕಾರಿಯಾಗಿದ್ದ ರಂಗಭೂಮಿ ನಟ, ನಿರ್ದೇಶಕ ಅನಿಲ ನಾರಾಯಣರಾವ್ ದೇಸಾಯಿ (57) ಸೋಮವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.
ಮೂಲತಃ ಬಾಗಲಕೋಟೆ ಜಿಲ್ಲೆ ಸೀಮಿಕೇರಿ, ಧಾರವಾಡ ಕಲ್ಯಾಣನಗರ ನಿವಾಸಿಯಾಗಿದ್ದ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಸೋಮವಾರ ನಸುಕಿನ ಜಾವ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ಮೃತರಿಗೆ ಪತಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವಿದೆ.
ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ಕಾರ್ಯಕ್ರಮ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಮತೆ ಮಾತಾಗಿದ್ದ ಅನಿಲ ಅವರು, ಕಳೆದ 2 ವರ್ಷಗಳ ಹಿಂದೆಯಷ್ಟೇ ಬಳ್ಳಾರಿ ಆಕಾಶವಾಣಿ ಕೇಂದ್ರಕ್ಕೆ ವರ್ಗವಾಗಿದ್ದರು. ಪ್ರಸ್ತುತ ಸಂಗೀತ-ನೃತ್ಯ ಅಕಾಡೆಮಿಯ ನಾಮ ನಿರ್ದೇಶಿತ ಸದಸ್ಯರಾಗಿದ್ದ ಅವರು, ನಮ್ಮ ಇಡೀ ಬದುಕಿನುದ್ದಕ್ಕೂ ಸಾಂಸ್ಕೃತಿಕ ಬದುಕಿನಲ್ಲಿ ಅತ್ಯಂತ ಕ್ರಿಯಾಶೀಲರಾಗಿ ತೊಡಗಿಸಿಕೊಂಡಿದ್ದರು. ಈಗ ಅವರ ಅಗಲಿಕೆಯಿಂದ ಗೆಳೆಯರ ಬಳಗಕ್ಕೆ ಅಪಾರ ನಷ್ಟವಾದಂತಾಗಿದೆ.
ದೇಸಾಯಿ ಬಗ್ಗೆ ಒಂದಿಷ್ಟು: 1962ರ ಅ.28ರಂದು ವಿಜಯಪುರ ಜಿಲ್ಲೆಯಲ್ಲಿ ಜನಿಸಿದ ಅನಿಲ ದೇಸಾಯಿ ಅವರು ಕಾಲೇಜು ಶಿಕ್ಷಣವನ್ನು ಬಾಗಲಕೋಟೆಯಲ್ಲಿ ಪೂರೈಸಿ, ಕವಿವಿಯಲ್ಲಿ ಭೌತಶಾಸ್ತ್ರ ವಿಷಯದಲ್ಲಿ ಪದವಿ ಪಡೆದ ಬಳಿಕ ಕೆಲ ವರ್ಷ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಇದಾದ ಬಳಿಕ ಆಕಾಶವಾಣಿಗೆ ಸೇರಿದ ಅವರು, ಧಾರವಾಡ ಕೇಂದ್ರದಲ್ಲಿ ಸಂಗೀತ ಮತ್ತು ನಾಟಕ ವಿಭಾಗದ ಕಾರ್ಯಕ್ರಮ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಈ ವೇಳೆ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ನಡೆದ ನಾಟಕ ಸ್ಪರ್ಧೆಗಳಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅವರು, ಜಗಜ್ಯೋತಿ ಬಸವೇಶ್ವರ, ಕರೆಯಪ್ಪನ ಕೋರಿಯೋಗ್ರಾಫಿ, ಜೀವನ ಚದುರಂಗ, ನಟ ಸಾಮ್ರಾಟ, ಖರೋಖರ್ ಸೇರಿದಂತೆ ಇನ್ನೂ ಹಲವು ನಾಟಕಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 200ಕ್ಕೂ ಹೆಚ್ಚು ನಾಟಕಗಳ ನಿರ್ದೇಶನ, ನಿರ್ಮಾಣ ಮಾಡಿದ ಅವರು, ಆಕಾಶವಾಣಿ ನಾಟಕ ವಿಭಾಗದ ಎ ಗ್ರೇಡ್ ಕಲಾವಿದರಾಗಿದ್ದರು. ಅಲೆಮಾರಿ ಕಲಾತ್ಮಕ ಚಿತ್ರ ಸೇರಿದಂತೆ ಕಿರುತೆರೆಯಲ್ಲಿ ಅಭಿನಯಿಸಿ ಸೈ ಅನ್ನಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.