ಕೌಶಲ್ಯವೃದ್ಧಿಗೆ ಹೆಸರು ನೋಂದಾಯಿಸಲು ಸಲಹೆ
Team Udayavani, May 30, 2017, 1:20 PM IST
ಧಾರವಾಡ: ಕೌಶಲ ಕರ್ನಾಟಕ ಕಾರ್ಯಕ್ರಮದಡಿ ನಿರುದ್ಯೋಗಿ ಯುವಜನರಿಗೆ ತರಬೇತಿ ಮತ್ತು ಉದ್ಯೋಗ ಒದಗಿಸುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಜಿಲ್ಲೆಯ ಯುವ ಸಮೂಹ ಪಡೆದುಕೊಳ್ಳಬೇಕು ಎಂದು ಡಿಸಿ ಎಸ್.ಬಿ. ಬೊಮ್ಮನಹಳ್ಳಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ಪ್ರದೇಶಗಳ ಎಲ್ಲ ಅರ್ಹ ಯುವಜನರನ್ನು ನೋಂದಣಿ ಮಾಡಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು, ಉಪನ್ಯಾಸಕರು, ಶಿಕ್ಷಕರು, ಯುವ ಸಂಘಟನೆಗಳು ಶ್ರಮಿಸಬೇಕು. ಯೋಜನೆಯಡಿ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಜೂನ್ 6ರವರೆಗೆ ವಿಸ್ತರಿಸಲಾಗಿದೆ.
ಜಿಲ್ಲೆಯ ಯುವ ಸಮೂಹ ಈ ಸದಾವಕಾಶ ಬಳಸಿಕೊಳ್ಳಬೇಕು ಎಂದು ಹೇಳಿದರು. ಎಸ್ಸೆಸ್ಸೆಲ್ಸಿಯಿಂದ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪೊÉàಮಾ ಸೇರಿದಂತೆ ಯಾವುದೇ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಎಲ್ಲ ಯುವಕ, ಯುವತಿಯರು ವೆಬ್‌ಸೈಟ್ ಮೂಲಕ ಇಲ್ಲವೇ ಎಲ್ಲ ಗ್ರಾಪಂ, ಪಾಲಿಕೆಯ ವಲಯ ಕಚೇರಿಗಳು, ತಹಶೀಲ್ದಾರ್ ಕಾರ್ಯಾಲಯಗಳಲ್ಲಿ, ಎಲ್ಲ ಪುರಸಭೆ, ಪಪಂಗಳಲ್ಲಿ ಜೂನ್ 6ರವರೆಗೂ ನೋಂದಣಿ ಮಾಡಿಕೊಳ್ಳಬಹುದು.
ಮೊಬೈಲ್ ಆ್ಯಪ್ ಮೂಲಕವೂ ನೋಂದಾಯಿಸಿಕೊಳ್ಳಬಹುದು. ನವನಗರದಲ್ಲಿರುವ ಉದ್ಯೋಗ ಮತ್ತು ತರಬೇತಿ ಇಲಾಖೆ ಕಚೇರಿಯಲ್ಲಿ ನಿರಂತರ ನೋಂದಣಿ ಕಾರ್ಯ ನಡೆಯುತ್ತಿರುತ್ತದೆ. ಈ ಯಾವುದಾದರೂ ಒಂದು ಸ್ಥಳದಲ್ಲಿ ಹೆಸರು, ವಿದ್ಯಾರ್ಹತೆ ಮತ್ತಿತರ ವಿವರಗಳನ್ನು ನೋಂದಾಯಿಸಿಕೊಳ್ಳಬೇಕು ಎಂದರು.
2 ತಿಂಗಳಲ್ಲಿ ತರಬೇತಿ ಆರಂಭ: ನೋಂದಣಿ ಮಾಡಿಕೊಂಡ ಅಭ್ಯರ್ಥಿಗಳಿಗೆ ಎರಡು ತಿಂಗಳೊಳಗಾಗಿ ತರಬೇತಿ ನೀಡಲಾಗುವುದು. ಹೊಲಿಗೆ, ಕಟ್ಟಡ ನಿರ್ಮಾಣ, ಜವಳಿ, ಗುಡಿ ಕೈಗಾರಿಕೆ ಸೇರಿದಂತೆ ವಿವಿಧ 360 ಬಗೆಯ ಉದ್ಯೋಗಕೌಶಲಗಳಲ್ಲಿ ತರಬೇತಿ ನೀಡಲು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯು ಸರಕಾರಿ ಮತ್ತು ಖಾಸಗಿ ಸಂಸ್ಥೆಗಳನ್ನು ಗುರುತಿಸಿದೆ.
ಜಿಲ್ಲೆಯಲ್ಲಿ ಎಲ್ಲ ಗ್ರಾಪಂ ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು, ಮಹಾನಗರ ಪಾಲಿಕೆಯ ವಲಯ ಸಹಾಯಕ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಆಸಕ್ತಿವಹಿಸಿ ಯುವ ಜನರನ್ನು ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಉಪವಿಭಾಗಾಧಿಕಾರಿ ಮಹೇಶ ಕರ್ಜಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಕೋನರಡ್ಡಿ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು, ತಾಪಂ ಇಒ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.