ಕೃಷಿ ಚಟುವಟಿಕೆಗಳು ಚುರುಕು
Team Udayavani, Jun 15, 2020, 11:03 AM IST
ಸಾಂದರ್ಭಿಕ ಚಿತ್ರ
ಅಳ್ನಾವರ: ಏಪ್ರಿಲ್, ಮೇ ತಿಂಗಳಲ್ಲಿ ಆರಂಭವಾಗಬೇಕಿದ್ದ ಕೃಷಿ ಚಟುವಟಿಕೆಗಳು ಈ ಭಾಗದಲ್ಲಿ ಇದೀಗ ಆರಂಭಗೊಂಡಿವೆ. ಮಳೆ ಇಲ್ಲದೆ ಚಿಂತೆಯಲ್ಲಿ ಮುಳುಗಿದ್ದ ರೈತರಲ್ಲಿ ಕಳೆದ ವಾರ ಒಂದೆರಡು ದಿವಸ ಸುರಿದ ಮಳೆ ಆಶಾ ಭಾವನೆ ಮೂಡಿಸಿದೆ.
ಬಿತ್ತನೆಗೆ ಅಗತ್ಯವಿರುವಷ್ಟು ಭೂಮಿ ಹಸಿಯಾಗದಿದ್ದರೂ ಅಲ್ಲಲ್ಲಿ ಸ್ವಲ್ಪ ಮಳೆಯಾಗಿದ್ದರಿಂದ ಒಣ ಬಿತ್ತನೆ ಮಾಡುತ್ತಿರುವುದು ಕಂಡು ಬರುತ್ತಿದೆ. ಕಳೆದ ಒಂದೂವರೆ ತಿಂಗಳಿಂದ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಿಸುತ್ತಿದ್ದರೂ ರೈತರು ಆಸಕ್ತರಾಗಿರಲಿಲ್ಲ. ಆದರೀಗ ಮಳೆಯಾಗಿದ್ದರಿಂದ ಬಿತ್ತನೆ ಬೀಜ ಖರೀದಿಗೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಕಳೆದ ಮುಂಗಾರು ಮಳೆ ರೌದ್ರಾವತಾರ ತೋರಿ ಇದ್ದ ಅತ್ಯಲ್ಪ ಬೆಳೆಯನ್ನೂ ನುಂಗಿ ಹಾಕಿ ಕೃಷಿಕನ ಬದುಕನ್ನು ಕಸಿದುಕೊಂಡಿತ್ತು. ಈ ಸಲವಾದರೂ ಉತ್ತಮವಾದ ಹದಭರಿತ ಮಳೆ ಸುರಿದರೆ ಉತ್ತಮ ಇಳುವರಿ ಬರಬಹುದೆಂಬ ನಿರೀಕ್ಷೆಯಲ್ಲಿದ್ದ ರೈತರ ಕನಸಿಗೆ ಕೊಳ್ಳೆ ಇಡುವ ಲಕ್ಷಣಗಳು ಗೋಚರಿಸುತ್ತಿವೆ.
ಮುಂಗಾರು ಸಕಾಲದಲ್ಲಿ ಆರಂಭವಾಗುತ್ತದೆ ಎಂದು ಹವಾಮಾನ ತಜ್ಞರು ಹೇಳುತ್ತಿದ್ದಾರೆ. ಆದರೆ ಮುಂಗಾರು ಆರಂಭಕ್ಕೂ ಮೊದಲೇ ಭೂಮಿ ಹದಗೊಳಿಸಲು ಮಳೆಯ ಅವಶ್ಯಕತೆ ಇದೆ ಆದರೆ ಮಳೆ ಕೈಕೊಟ್ಟಿದ್ದರಿಂದ ಚಿಂತೆಗೀಡು ಮಾಡಿದೆ ಎನ್ನುತ್ತಿದ್ದಾರೆ ಭಾಗದ ರೈತರು.
ಬೀಜ ಮಾರಾಟ: ಅಳ್ನಾವರ ರೈತ ಸಂಪರ್ಕ ಕೇಂದ್ರದ ಮೂಲಕ ಈಗಾಗಲೇ 200 ಕ್ವಿಂಟಲ್ ಗೋವಿನ ಜೋಳ, 30 ಕ್ವಿಂಟಲ್ ಭತ್ತ ಸಹಾಯ ಧನದಲ್ಲಿ ಮಾರಾಟವಾಗಿದೆ.
ಬೇಡಿಕೆಗೆ ತಕ್ಕಷ್ಟು ಬಿತ್ತನೆ ಬೀಜದ ಸಂಗ್ರಹವಿದೆ. ಮಳೆಯ ಕೊರತೆಯ ಕಾರಣದಿಂದ ನಿಧಾನ ಗತಿಯಲ್ಲಿ ಸಾಗಿದ್ದ ಬೀಜ ಖರೀದಿ ಇದೀಗ ಚುರುಕುಗೊಂಡಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಬೀಜ ವಿತರಣೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. –ಸುನಂದಾ ಸಿಂಥೊಳಿ, ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಅಳ್ನಾವರ.
–ಎಸ್.ಗೀತಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.