ಧಾರವಾಡ ಜಿಲ್ಲೆಯಲ್ಲಿ 89 ಸಾವಿರ ಹೆಕ್ಟೇರ್ ಕೃಷಿ ಬೆಳೆ ಹಾನಿ : ಕೃಷಿ ಸಚಿವ ಬಿ.ಸಿ ಪಾಟೀಲ
Team Udayavani, Aug 9, 2022, 6:29 PM IST
ಧಾರವಾಡ : ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅಂದಾಜು ೮೯,೧೪೮ ಹೆಕ್ಟೇರ್ ಪ್ರದೇಶದ ಕೃಷಿ ಬೆಳೆಗಳು ಹಾನಿಯಾಗಿದ್ದು, ಹೆಸರು, ಉದ್ದು ಕೊಯ್ಲು ಮಾಡಲು ಸಾಧ್ಯವಾಗದೇ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಬಗ್ಗೆ ಜಂಟಿ ಸಮೀಕ್ಷೆ ಸಮರ್ಪಕವಾಗಿ ಕೈಗೊಂಡು ಹಾನಿಯ ನಿಖರ ಮಾಹಿತಿ ದಾಖಲಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ನಗರದ ಡಿಸಿ ಕಚೇರಿಯಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ಬೆಳೆಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಿ ರೈತರಿಗೆ ಸ್ಪಂದಿಸಬೇಕು. ಬೆಳೆವಿಮಾ ಕಂಪೆನಿಗಳ ಪ್ರತಿನಿಧಿಗಳು ಸ್ಥಳೀಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಲಭ್ಯ ಇರಬೇಕು. ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳನ್ವಯ ಪರಿಹಾರಕ್ಕೆ ಜಂಟಿ ಸಮೀಕ್ಷೆ ಸಮರ್ಪಕವಾಗಿ ನಡೆಯಬೇಕು ಎಂದು ಸೂಚಿಸಿದರು.
ಈ ವರ್ಷ ಅಧಿಕ ಮಳೆಯಿಂದ ತುರ್ತು ಪರಿಸ್ಥಿತಿಯ ಸನ್ನಿವೇಶ ಸೃಷ್ಟಿಯಾಗಿದ್ದು, ಅಽಕಾರಿಗಳು ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸಿ, ರೈತರಿಗೆ ಸಕಾಲದಲ್ಲಿ ಸ್ಪಂದಿಸಬೇಕು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್, ಕರ್ನಾಟಕ ರೈತ ಸುರಕ್ಷಾ ಫಸಲ್ ವಿಮಾ ಯೋಜನೆಯಡಿ ನೋಂದಾಯಿಸಿಕೊಂಡಿರುವ ರೈತರು ಇ-ಕೆವೈಸಿ ಮಾಡಿಕೊಳ್ಳಬೇಕು. ರಾಜ್ಯದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ ೩೪ ಸಾವಿರ ಲೀಟರ್‌ನ್ಯಾನೋ ಯೂರಿಯಾ ಬಳಸಿದ್ದಾರೆ. ಜಾಗತಿಕ ತಾಪಮಾನ ನಿಯಂತ್ರಣ ಹಾಗೂ ಭೂಮಿಯ ಫಲವತ್ತತೆ ಹೆಚ್ಚಳಕ್ಕೆ ಇದು ಪೂರಕವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯ ಪ್ರಶಂಸನೀಯ ಎಂದರು.
ಇದು ಗಂಭೀರವಾದ ಸಭೆ ಇಂತಹ ಸಭೆಗೆ ಗೈರು ಹಾಜರಾಗಿರುವ ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆ ಅಽಕಾರಿಗಳಿಗೆ ನೋಟೀಸ್ ಜಾರಿ ಮಾಡುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಸಕ ಅಮೃತ ದೇಸಾಯಿ ಮಾತನಾಡಿ, ಈ ಬಾರಿ ಉತ್ತಮ ಬೆಳೆ ಬಂದಿತ್ತು ಅತಿವೃಷ್ಟಿಯಿಂದಾಗಿ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಬೆಳೆವಿಮಾ ಕಂಪೆನಿಗಳ ಬಗ್ಗೆ ರೈತರು ಅಸಮಾಧಾನ ಹೊಂದಿದ್ದು, ಕಂಪೆನಿಗಳು ರೈತ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಐ.ಬಿ.ಮಾತನಾಡಿ, ಜೂನ್ ಹಾಗೂ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಽಕ ಮಳೆಯಾಗಿದೆ. ಜಿಲ್ಲೆಯಲ್ಲಿ ಸುಮಾರು ೮೯ ಸಾವಿರ ಹೆಕ್ಟೇರ್‌ಗೂ ಅಽಕ ಕೃಷಿ ಬೆಳೆ ಹಾನಿಯಾಗಿದೆ. ಇದರಲ್ಲಿ ಹೆಸರು ಬೆಳೆ ಹಾನಿಯ ಪ್ರಮಾಣವೇ ೬೧ ಸಾವಿರ ಹೆಕ್ಟೇರಿನಷ್ಟಿದೆ. ಹೆಚ್ಚಿನ ಮಳೆಯಿಂದ ಹೆಸರು ಮತ್ತು ಉದ್ದು ಬೆಳೆಯ ಕೋಯ್ಲು ಕಷ್ಟಸಾಧ್ಯವಾಗಿದೆ. ಅಧಿಕ ತೇವಾಂಶದಿಂದ ಶೇಂಗಾ ಕೊಳೆಯುವ ಹಂತದಲ್ಲಿದೆ. ಹತ್ತಿ, ಮೆಕ್ಕೆಜೋಳ ಬೆಳೆಗಳ ಬೆಳವಣಿಗೆ ಕುಂಠಿತವಾಗಿದೆ. 1,48,166 ರೈತರು ಬೆಳೆವಿಮೆ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜಿಲ್ಲೆಯಲ್ಲಿ ಬೀಜ, ರಸಗೊಬ್ಬರ ಪೂರೈಕೆ ಸಮರ್ಪಕವಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಉಪವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.