ಕೃಷಿ ವಿವಿಯಲ್ಲಿ ಅಗ್ರಿವಾರ್ ರೂಮ್
Team Udayavani, Apr 22, 2020, 1:33 PM IST
ಧಾರವಾಡ: ಕೋವಿಡ್ 19 ಹಿನ್ನೆಲೆಯಲ್ಲಿ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆ ಹಾಗೂ ಸವಾಲುಗಳಿಗೆ ಸ್ಪಂದಿಸುವ ಉದ್ದೇಶದಿಂದ ಏ.14ರಿಂದ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿವಾರ್ ರೂಮ್ ಆರಂಭಿಸಲಾಗಿದೆ.
ಇದರ ಟೋಲ್ ಫ್ರೀ ಸಂಖ್ಯೆ 1800-425-1150 ಆಗಿದ್ದು, ರಾಜ್ಯದ ಯಾವುದೇ ಭಾಗದ ರೈತ ಬಾಂಧವರು ಈ ಸಂಖ್ಯೆಗೆ ಕರೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಈ ಕೇಂದ್ರ ಬೆಳಿಗ್ಗೆ 8:00 ರಿಂದ ರಾತ್ರಿ 8:00 ಗಂಟೆವರೆಗೆ ಕಾರ್ಯ ನಿರ್ವಹಿಸುತ್ತದೆ. ಈ ಕೇಂದ್ರದಲ್ಲಿ ಸರದಿಯಂತೆ ಕೃಷಿ ವಿಜ್ಞಾನಿಗಳು ರೈತರ ಸಮಸ್ಯೆಗೆ ಸ್ಪಂದಿಸಲು ಲಭ್ಯವಿರುತ್ತಾರೆ.
ಕೋವಿಡ್ 19 ವೈರಸ್ ಬಗ್ಗೆ ಜಾಗೃತಿ ಮೂಡಿಸುವುದು, ಕೃಷಿ ಸಮಸ್ಯೆಗಳ ಬಗ್ಗೆ ಪರಿಹಾರ ನೀಡುವುದು,ರೈತರ ಬೆಳೆದ ಹಣ್ಣು, ತರಕಾರಿ ಹಾಗೂ ಇತರೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಮಾಹಿತಿ ಕೊಡುವುದು ಈ ಕೇಂದ್ರದ ಉದ್ದೇಶವಾಗಿದೆ.
ಕೃಷಿ ವಿವಿ ಕುಲಪತಿ ಡಾ|ಮಹಾದೇವ ಚೆಟ್ಟಿ, ಮಾನ್ಯ ಆಡಳಿತ ಮಂಡಳಿ ಸದಸ್ಯರಾದ ಶಶಿಮೌಳಿ ಕುಲಕರ್ಣಿ ಹಾಗೂ ಸುರೇಶ ಗೊಣಸಗಿ ಅವರು ಈ ಕೇಂದ್ರಕ್ಕೆ ಭೇಟಿ ನೀಡಿ ಕಾರ್ಯ ವೈಖರಿಯನ್ನು ಪರಿಶೀಲಿಸಿದರು. ವಿಸ್ತರಣಾ ನಿರ್ದೇಶಕ ಡಾ|ರಮೇಶ ಬಾಬು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.