ಹಾಸ್ಟೆಲ್ ಸೌಲಭ್ಯಗಳಿಗಾಗಿ ಎಐಡಿಎಸ್‌ಒ ಪ್ರತಿಭಟನೆ
Team Udayavani, Jul 24, 2019, 4:04 PM IST
ಧಾರವಾಡ: ಡಿಸಿ ಕಚೇರಿ ಎದುರು ಎಐಡಿಎಸ್‌ಒ ಹಾಗೂ ದಲಿತ ಮಹಿಳಾ ಒಕ್ಕೂಟ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಧಾರವಾಡ: ಸರ್ಕಾರಿ ಹಾಸ್ಟೆಲ್ಗಳಿಗೆ ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಡಿಎಸ್‌ಒ ಹಾಗೂ ದಲಿತ ಮಹಿಳಾ ಒಕ್ಕೂಟ ವತಿಯಿಂದ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಅವಶ್ಯಕತೆಗೆ ಅನುಗುಣವಾಗಿ ಸರ್ಕಾರಿ ಹಾಸ್ಟೆಲ್ಗಳ ಸಂಖ್ಯೆ ಹೆಚ್ಚಿಸಬೇಕು. ಶಾಲಾ-ಕಾಲೇಜುಗಳ ಆರಂಭದ ದಿನದಿಂದಲೇ ಹಾಸ್ಟೆಲ್ಗಳನ್ನೂ ಆರಂಭಿಸಬೇಕು. ಸರ್ಕಾರಿ ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು, ಸ್ವಂತ ಕಟ್ಟಡದಂತಹ ಮೂಲಸೌಲಭ್ಯ ಒದಗಿಸಬೇಕು. ವಿದ್ಯಾರ್ಥಿ ವೇತನಗಳನ್ನು ಆಯಾ ಶೈಕ್ಷಣಿಕ ವರ್ಷದಲ್ಲೇ ನಿಯಮಿತವಾಗಿ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಲಾಯಿತು.
ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಗೌರಮ್ಮ ಕರೆಪ್ಪನವರ ಹಾಗೂ ಎಐಡಿಎಸ್‌ಒ ಜಿಲ್ಲಾ ಜಂಟಿ ಕಾರ್ಯದರ್ಶಿ ಮಹಾಂತೇಶ ಬಿಳೂರ ಮಾತನಾಡಿ, ಜಿಲ್ಲೆಯ ಹಾಸ್ಟೆಲ್ಗಳು ಸಮಸ್ಯೆಯ ಕೂಪವಾಗಿವೆ. ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ನಿಭಾಯಿಸಲು ಸಿಗುತ್ತಿದ್ದ ಅಲ್ಪ-ಸ್ವಲ್ಪ ವಿದ್ಯಾರ್ಥಿ ವೇತನವೂ ಸರಿಯಾಗಿ ಬರದ ಕಾರಣ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ಆಗುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ಈ ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಎಐಡಿಎಸ್‌ಒ ಜಿಲ್ಲಾ ಸಂಘಟನಾಕಾರರಾದ ಸಿಂಧೂ ಕೌದಿ, ರಣಜೀತ್ ಧೂಪದ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.