ವಿದ್ಯಾರ್ಥಿ ಬಸ್‌ಪಾಸ್‌ಗಾಗಿ ಎಐಡಿಎಸ್‌ಒ ಪ್ರತಿಭಟನೆ
Team Udayavani, Jun 2, 2019, 12:44 PM IST
ಧಾರವಾಡ: ವಿದ್ಯಾರ್ಥಿಗಳಿಗೆ ಶೀಘ್ರ ಬಸ್‌ಪಾಸ್ ನೀಡುವಂತೆ ಆಗ್ರಹಿಸಿ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಧಾರವಾಡ: ವಿದ್ಯಾರ್ಥಿಗಳಿಗೆ ಬಸ್‌ಪಾಸ್ ವಿತರಿಸುವಲ್ಲಿ ಕೆಎಸ್‌ಆರ್‌ಟಿಸಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕಡಪಾ ಮೈದಾನದಿಂದ ಆರಂಭಗೊಂಡ ಪ್ರತಿಭಟನಾ ರ್ಯಾಲಿ ಹಳೇ ಬಸ್ ನಿಲ್ದಾಣದ ವರೆಗೂ ಸಾಗಿತು. ಎಐಡಿಎಸ್‌ಒ ಜಿಲ್ಲಾ ಸಂಘಟಕ ರಣಜೀತ್ ಧೂಪದ ಮಾತನಾಡಿ, ಶಾಲಾ-ಕಾಲೇಜುಗಳು ರಾಜ್ಯವ್ಯಾಪಿ ಮೇ ತಿಂಗಳಿನಲ್ಲೇ ಪ್ರಾರಂಭವಾಗಿವೆ. ಸುಗಮವಾಗಿ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಬಸ್‌ಪಾಸ್ ಅತ್ಯಗತ್ಯ. ಆದರೆ ತರಗತಿಗಳು ಪ್ರಾರಂಭವಾಗಿ 2 ವಾರವಾದರೂ ಇನ್ನೂ ಬಸ್‌ಪಾಸ್ ದೊರಕದೆ ಪ್ರತಿದಿನ ವಿದ್ಯಾರ್ಥಿಗಳು ಬಸ್ ಟಿಕೆಟ್‌ಗೆ ಅಧಿಕ ಹಣ ವ್ಯಹಿಸಿ ಪ್ರಯಾಣಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಳಂಬ ಮಾಡದೆ ಎಲ್ಲ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ವಿತರಿಸಬೇಕು. ಬಸ್‌ಪಾಸ್ ವಿತರಿಸುವವರೆಗೂ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಿ ವಿದ್ಯಾರ್ಥಿಗಳಿಗಾಗುತ್ತಿರುವ ತೊಂದರೆ ತಪ್ಪಿಸಬೇಕೆಂದು ಅವರು ಆಗ್ರಹಿಸಿದರು.
ಜಿಲ್ಲಾ ಮುಖಂಡರಾದ ಮಹಾಂತೇಶ ಬಿಳೂರ, ಶಶಿಕಲಾ ಮೇಟಿ, ಸಿಂಧೂ ಕೌದಿ, ಕಾಲೇಜು ವಿದ್ಯಾರ್ಥಿಗಳಾದ ಪವಿತ್ರಾ, ಅಭಿಷೇಕ, ರಾಣಿ, ಪ್ರಕಾಶ್, ಶಿವು ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.