ವಿದ್ಯಾಗಿರಿಯಲ್ಲಿ ಅಕ್ಷರ ದಾಸೋಹ


Team Udayavani, Dec 30, 2019, 11:06 AM IST

huballi-tdy-2

ಧಾರವಾಡ: ವಿದ್ಯಾಕಾಶಿ ಖ್ಯಾತಿಯ ಧಾರವಾಡಕ್ಕೂ ಉಡುಪಿಯ ಪೇಜಾವರದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರಿಗೂ ಅವಿನಾಭಾವ ಸಂಬಂಧ ಇತ್ತು.

ಧಾರವಾಡ ವಿದ್ಯಾಕಾಶಿ ಎಂಬ ಹೆಗ್ಗಳಿಕೆ ಪಡೆಯಲು ಶ್ರೀಗಳ ಕೊಡುಗೆ ಅಪಾರವಾಗಿದೆ. ಪೇಜಾವರ ಶ್ರೀ ಹಾಗೂ ಕಾರ್ಯಾಧ್ಯಕ್ಷರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜನತಾ ಶಿಕ್ಷಣ ಸಮಿತಿ ಈ ಭಾಗದಲ್ಲಿ ಹೆಮ್ಮರವಾಗಿ ಬೆಳೆದಿದೆ.  ಹಾಳುಕೊಂಪೆಯಾಗಿದ್ದ ವಿದ್ಯಾಗಿರಿಯ ಗುಡ್ಡದಲ್ಲಿ ವಿದ್ಯೆಯ ಬೀಜ ಬಿತ್ತುವ ಮೂಲಕ ನಿಜಕ್ಕೂ “ವಿದ್ಯಾಗಿರಿ’ಯನ್ನಾಗಿ ಮಾಡಿದ್ದಾರೆ.

ಜೆಎಸ್‌ಎಸ್‌ಗೆ ಮರುಜೀವ: 1944ರಲ್ಲಿ ರಾಮರಾವ್‌ ಹುಕ್ಕೇರಿಕರ ಅವರಿಂದ ಸ್ಥಾಪನೆಯಾದ ಜನತಾ ಶಿಕ್ಷಣ ಸಮಿತಿ 1963ರ ಸಮಯದಲ್ಲಿ ಆರ್ಥಿಕ ಮುಗ್ಗಟ್ಟಿನಲ್ಲಿತ್ತು. ಆಗ ಹುಕ್ಕೇರಿಕರ ಅವರು ಶ್ರೀಗಳಲ್ಲಿ ಈ ಸಮಿತಿ ಮುನ್ನಡೆಸುವಂತೆ ಮನವಿ ಮಾಡಿದ್ದರು. ಆ  ಬಳಿಕ ಶ್ರೀಗಳು ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಈ ಸಮಿತಿ ಮುನ್ನಡೆಸುವಂತೆ ಮನವಿ ಮಾಡಿಕೊಂಡಾಗ ಶ್ರೀಗಳ ಇಚ್ಛೆಯಂತೆ ಸಮಿತಿ ಜವಾಬ್ದಾರಿ ವಹಿಸಿಕೊಂಡರು.

ಆಗ ಸಮಿತಿ ಕಾರ್ಯಾಧ್ಯಕ್ಷ ಸ್ಥಾನವನ್ನು ಡಾ|ಹೆಗ್ಗಡೆ ಅವರು ವಹಿಸಿಕೊಂಡರೆ, ಪೇಜಾವರ ಶ್ರೀಗಳು 1973ರಲ್ಲಿ ಅಕ್ಟೋಬರ್‌ 18ರಂದು ಅಧ್ಯಕ್ಷರಾದರು. ಆಗ 300 ವಿದ್ಯಾರ್ಥಿಗಳನ್ನು ಹೊಂದಿದ್ದ ಈ ಸಮಿತಿ ಅಡಿಯಲ್ಲಿ ಈಗ 22 ಅಂಗ ಶಿಕ್ಷಣ ಸಂಸ್ಥೆಗಳಿದ್ದು, 22,500 ವಿದ್ಯಾರ್ಥಿಗಳಿದ್ದಾರೆ. ಎಲ್‌ಕೆಜಿಯಿಂದ ಹಿಡಿದು ಪಿಜಿ, ಪಿಎಚ್‌ಡಿವರೆಗೂ ವಿದ್ಯಾರ್ಥಿಗಳಿದ್ದಾರೆ.

ಪ್ರಹ್ಲಾದ ನಿಲಯ ಸ್ಥಾಪನೆ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸ್ಥಾಪಿಸಿದ ಮೊದಲ ಸಂಸ್ಥೆ ಧಾರವಾಡದ ಪ್ರಹ್ಲಾದ ವಿದ್ಯಾರ್ಥಿ ನಿಲಯ. 1955ರಲ್ಲಿ ಪ್ರಹ್ಲಾದ ವಿದ್ಯಾರ್ಥಿ ನಿಲಯ ಸ್ಥಾಪಿಸುವ ನಿರ್ಣಯ ಶ್ರೀಗಳು ಕೈಗೊಂಡಾಗ ಅವರಿಗೆ ಕೇವಲ 24 ವರ್ಷವಾಗಿತ್ತು. ಶ್ರೀಗಳ ಸಂಕಲ್ಪದಿಂದ ನಿಲಯ ಸ್ಥಾಪನೆಗೊಂಡು 2018 ರಲ್ಲಿ ವಜ್ರ ಮಹೋತ್ಸವ ಆಚರಿಸಿಕೊಂಡಿದೆ. ಈ ನಿಲಯದಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಳಿದುಕೊಂಡು ವಿದ್ಯೆಯನ್ನು ಪಡೆದಿದ್ದಾರೆ.

ಪ್ರಭಂಜನಾಚಾರ್ಯ ವ್ಯಾಸನಕೆರೆ, ಪಂ| ನಾರಾಯಣಾಚಾರ್ಯ ಧೂಳಖೇಡ ಸೇರಿದಂತೆ ಮೊದಲಾದ ಶ್ರೇಷ್ಠರು ಈ ನಿಲಯದ ವಿದ್ಯಾರ್ಥಿಗಳಾಗಿದ್ದರು ಎಂಬುದು ಹೆಮ್ಮೆಯ ವಿಷಯ. ಈ ಪ್ರಹ್ಲಾದ ವಿದ್ಯಾರ್ಥಿ ನಿಲಯದಲ್ಲಿ ಓದಿ ದೇಶ-ವಿದೇಶಗಳಲ್ಲಿ ನೆಲೆಸಿರುವ ಹಿಂದಿನ ವಿದ್ಯಾರ್ಥಿಗಳಲ್ಲಿ ಕೆಲವರು ಕೂಡಿಕೊಂಡು 15 ವರ್ಷದ ಹಿಂದೆ “ನಿಲಯ ಫೌಂಡೇಶನ್‌’ ಎಂಬ ಸಂಸ್ಥೆಯನ್ನೂ ಹುಟ್ಟು ಹಾಕಿದ್ದಾರೆ. ಶ್ರೀ ಪ್ರಹ್ಲಾದ ವಿದ್ಯಾರ್ಥಿ ನಿಲಯ ಪ್ರತಿಷ್ಠಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷರಾಗಿರುವ ಪೇಜಾವರ ಶ್ರೀಗಳ ಮಾರ್ಗದರ್ಶನದಲ್ಲಿ ಈಗಲೂ ಈ ನಿಲಯ ಮುನ್ನಡೆದಿದೆ.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.