ಅಕ್ಷರ ದಾಸೋಹ ಕಾರ್ಮಿಕರ ಪ್ರತಿಭಟನೆ
Team Udayavani, Nov 28, 2019, 12:04 PM IST
ಧಾರವಾಡ: ಜಿಲ್ಲೆಯಲ್ಲಿ 3-4 ತಿಂಗಳ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಲು ಆಗ್ರಹಿಸಿ ಎಐಯುಟಿಯುಸಿ ವತಿಯಿಂದ ಅಕ್ಷರ ದಾಸೋಹ ಕಾರ್ಮಿಕರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಕಲಾಭವನ ಮೈದಾನದಿಂದ ಜಿಪಂ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡು, ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಲಾಯಿತು. ಎಐಯುಟಿಯುಸಿಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ವತಿಯಿಂದ ಜಿಲ್ಲೆಯಲ್ಲಿ ಅಕ್ಷರ ದಾಸೋಹ ಕಾರ್ಮಿಕರ 3-4 ತಿಂಗಳ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಬೇಕು. ವರ್ಷಕ್ಕೆ 2 ಸಮವಸ್ತ್ರ, ಅಧಿಕೃತ ಗುರುತಿನ ಪತ್ರ ಕೊಡುವುದರ ಜೊತೆಗೆ ಕಾರ್ಮಿಕೆಂದು ಪರಿಗಣಿಸಿ ಕನಿಷ್ಠ ವೇತನ, ಪಿಎಫ್, ಇಎಸ್‌ಐ, ಪಿಂಚಣಿ ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು.
ಎಐಯುಟಿಯುಸಿ ಜಿಲ್ಲಾ ಸಂಚಾಲಕರಾದ ಗಂಗಾಧರ ಬಡಿಗೇರ, ಸಂಘಟನೆಯ ಮುಖಂಡರಾದ ಭುವನಾ ಹಾಗೂ ರಮೇಶ ಹೊಸಮನಿ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಾ ಅಕ್ಷರ ದಾಸೋಹ ಕಾರ್ಮಿಕರಿಗೆ 3-4 ತಿಂಗಳುಗಳ ಬಾಕಿಯಿರುವ ವೇತನವನ್ನು ಈ ಕೂಡಲೇ ಒಂದೇ ಬಾರಿಗೆ ಪಾವತಿಸಬೇಕು. ಅಧಿಕೃತ ಗುರುತಿನ ಪತ್ರ ಒದಗಿಸಬೇಕು. ವರ್ಷಕ್ಕೆ 2 ಜೊತೆ ಸಮವಸ್ತ್ರ, ಅಗತ್ಯ ಎಪ್ರಾನ್, ಕೈಗವಸು ಕೊಡಬೇಕು.
ಇವರನ್ನು ಕಾರ್ಮಿಕರೆಂದು ಪರಿಗಣಿಸಿ, ಸೇವಾಭದ್ರತೆ ನೀಡಿ, ಕನಿಷ್ಟ ವೇತನ ಜಾರಿಗೊಳಿಸಬೇಕು. ಆರೋಗ್ಯ ಹಾಗೂ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿ ಹಾಗೂ ಎರಡೂ ಕಡೆಯ ಬಾಬತ್ತನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸಿದರು. ಮನವಿ ಸ್ವೀಕರಿಸಿದ ಜಿಪಂ ಸಿಇಒ ಡಾ| ಬಿ.ಸಿ. ಸತೀಶ್ ಮಾತನಾಡಿ, ಎರಡು ದಿನಗಳಲ್ಲಿ ಬಾಕಿ ಇರುವ ವೇತನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಗುರುತಿನ ಪತ್ರ,ಸಮವಸ್ತ್ರಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಜ್ಯೋತಿ ಆಟದ, ಶೋಭಾ ಕೊಟಬಾಗಿ, ರೇಣುಕಾ ಕರಿಗಾರ, ಸುನಿತಾ ಹೊಂಗಲ್, ದಿಲ್‌ಶಾದ್, ಮಂಜುಳಾ, ಅನುಸೂಯ, ರತ್ನ, ರೇಣುಕಾ ಲಮಾಣಿ, ಲಕ್ಷ್ಮೀ ಮುತ್ತಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.