ಕೋವಿಡ್ ನಿಯಂತ್ರಣಕ್ಕೆ ಸಕಲ ಕ್ರಮ: ಸಿಎಂ ಬೊಮ್ಮಾಯಿ
Team Udayavani, Dec 24, 2022, 2:33 PM IST
ಹುಬ್ಬಳ್ಳಿ: ಕೋವಿಡ್ ನಿಯಂತ್ರಣ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಆರೋಗ್ಯ ಕ್ಷೇತ್ರದ ಮೂಲಭೂತ ಸೌಲಭ್ಯ, ಆಸ್ಪತ್ರೆ ಸಲಕರಣೆ, ಔಷಧ, ಆಕ್ಸಿಜನ್ ಘಟಕಗಳು ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸೂಚಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮವಾಗಿ ಎರಡು ಸಭೆಗಳನ್ನು ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದ್ದೇನೆ. ರವಿವಾರ ಕಂದಾಯ ಮತ್ತು ಆರೋಗ್ಯ ಸಚಿವರು ಸಭೆ ನಡೆಸಲಿದ್ದಾರೆ. ಬೂಸ್ಟರ್ ಡೋಸ್ ನೀಡಿಕೆ, ಪರೀಕ್ಷೆ ಹೆಚ್ಚಳಕ್ಕೆ ಸೂಚಿಸಿದ್ದೇನೆ, ಮುಖ್ಯವಾಗಿ ಲಸಿಕೆ ಕೊರತೆ ಆಗದಂತೆ ನೋಡಿಕೊಳ್ಳಲು ಹಾಗೂ ಪರಿಸ್ಥಿತಿ ಬಗ್ಗೆ ನಿಗಾವಹಿಸಲು ತಿಳಿಸಿದ್ದೇನೆ. ಮಾಸ್ಕ್ ಧರಿಸುವ ನಿಟ್ಟಿನಲ್ಲಿ ಜಾಗೃತಿ, ಕಡ್ಡಾಯ ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯಕ್ಕೆ ಗಾಬರಿಯಾಗುವ ಸ್ಥಿತಿ ಇಲ್ಲ ಆದರೆ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದೇವೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳು, ನೀರಾವರಿ ಯೋಜನೆಗಳ ಕುರಿತು ಚರ್ಚೆ ಅವಕಾಶ ನೀಡುವಂತೆ ಎರಡು ಸದನಗಳ ಮುಖ್ಯಸ್ಥರಿಗೆ ಮನವಿ ಮಾಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಚರ್ಚೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದರು.
ಇದನ್ನೂ ಓದಿ:ಈ ದೇಶಗಳಿಂದ ಭಾರತಕ್ಕೆ ಬಂದವರಿಗೆ RT-PCR ಕಡ್ಡಾಯ: ಕೇಂದ್ರ ಸರಕಾರ
ಅವಧಿಗೆ ಮುನ್ನ ಚುನಾವಣೆಯ ಚಿಂತನೆ ಸರಕಾರ, ಪಕ್ಷದ ಮಟ್ಟದಲ್ಲಿ ಇಲ್ಲವೇ ಇಲ್ಲ. ನಮ್ಮ ಸಾಧನೆಗಳ ರಿಪೋರ್ಟ್ ಕಾರ್ಡ್ ನೊಂದಿಗೆ ಜನರ ಬಳಿ ಹೋಗುತ್ತೇವೆ.
ವಿಪಕ್ಷಗಳಿಗೆ ಅದರಲ್ಲೂ ಕಾಂಗ್ರೆಸ್ ನವರಿಗೆ ಅಭದ್ರತೆ ಕಾಡುತ್ತಿದ್ದು ಅದಕ್ಕಾಗಿ ಅವಧಿಗೆ ಮುನ್ನ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯವಾಗಿ ಅವರ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.