ಎಲ್ಲ ಸಮಸ್ಯೆಗೂ ಸರಕಾರದಿಂದಲೇ ಪರಿಹಾರ ನಿರೀಕ್ಷೆ ಸಲ್ಲ


Team Udayavani, Nov 25, 2019, 10:31 AM IST

huballi-tdy-4

ಹುಬ್ಬಳ್ಳಿ: ನಾಗರಿಕರು ಕೈಜೋಡಿಸಿದರೆ ನಗರದ ಜನರು ಎದುರಿಸುತ್ತಿರುವ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ದೇಶಪಾಂಡೆ ಫೌಂಡೇಶನ್‌ ಸಂಸ್ಥಾಪಕ ಡಾ| ಗುರುರಾಜ ದೇಶಪಾಂಡೆ ಹೇಳಿದರು.

ಇಂದಿರಾ ಗಾಜಿನಮನೆಯಲ್ಲಿ ರವಿವಾರ ಸಿಟಿಜನ್ಸ್‌ ಲೀಡ್‌ ಹುಬ್ಬಳ್ಳಿ-ಧಾರವಾಡ ಆಯೋಜಿಸಿದ್ದ ಎಡಬ್ಲ್ಯೂಇ-ಎಚ್‌ಡಿ ಫೆಸ್ಟ್‌ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲ ಸಮಸ್ಯೆಗಳನ್ನು ಸರಕಾರವೇ ಬಗೆಹರಿಸಬೇಕೆಂದು ನಿರೀಕ್ಷಿಸುವುದುಸರಿಯಲ್ಲ. ನಾಗರಿಕರು ಕೈಜೋಡಿಸಿದರೆ ಎಂಥದೇ ಸಮಸ್ಯೆಗಳಿದ್ದರೂ ಪರಿಹರಿಸಬಹುದಾಗಿದೆ. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದು ಮನವರಿಕೆಯಾಗಬೇಕು ಎಂದರು.

ಅರಣ್ಯ ಇಲಾಖೆ ಅಧಿಕಾರಿ ಮಹೇಶಕುಮಾರ ಮಾತನಾಡಿ, ಸಸಿಗಳ ರಕ್ಷಣೆ ಕೇವಲ ಅರಣ್ಯ ಇಲಾಖೆ ಕೆಲಸವಲ್ಲ, ಪ್ರತಿಯೊಬ್ಬರ ಜವಾಬ್ದಾರಿಯೂ ಹೌದು. ಎಲ್ಲ ಗಿಡ-ಮರಗಳನ್ನು ಸಂರಕ್ಷಣೆ ಮಾಡುವುದು ಅರಣ್ಯ ಸಿಬ್ಬಂದಿಯಿಂದ ಸಾಧ್ಯವಿಲ್ಲ. ಮರಗಳನ್ನು ಕಡಿಯದಂತೆ ನೋಡಿಕೊಳ್ಳಬೇಕು. ಹೆಚ್ಚೆಚ್ಚು ಜನರು ನಗರವನ್ನು ಹಸಿರುಗೊಳಿಸುವ ಕಾರ್ಯದಲ್ಲಿ ಕೈಜೋಡಿಸುವುದು ಅವಶ್ಯಕ ಎಂದು ಹೇಳಿದರು.

ದೇಶಪಾಂಡೆ ಫೌಂಡೇಶನ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿವೇಕ ಪವಾರ ಮಾತನಾಡಿ, ಹುಬ್ಬಳ್ಳಿ ನಗರವನ್ನು ಮಾದರಿ ದ್ವಿತೀಯ ಸ್ತರದ ನಗರವನ್ನಾಗಿ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಮರ್ಪಕವಾಗಿ ಉಸಿರಾಡಲು, ವಾತಾವರಣ ಉತ್ತಮವಾಗಿರಲು ಪ್ರತಿಯೊಬ್ಬ ವ್ಯಕ್ತಿಗೆ 40 ಗಿಡಗಳಾದರೂ ಇರಬೇಕು. ಆದರೆ ಸದ್ಯ ಅವಳಿ ನಗರದಲ್ಲಿ ಪ್ರತಿ ವ್ಯಕ್ತಿಗೆ 28 ಗಿಡಗಳಿವೆ. ವರ್ಷಕ್ಕೆ 2 ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವುದು ಅತ್ಯವಶ್ಯಕ ಎಂದರು. ಅವಳಿನಗರದಲ್ಲಿ ಸಹಸ್ರಾರು ಸಸಿಗಳನ್ನು ನೆಟ್ಟು ಪೋಷಿಸುತ್ತಿರುವ ಡಾ| ಮಹಾಂತೇಶ ತಪಶೆಟ್ಟಿ ಅವರಿಗೆ ಜೀವನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ವಿಜೇತರು: ಫೆಸ್ಟ್‌ ನಿಮಿತ್ತ ಇಕೋ ಮಾಡೆಲ್‌ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು. ಕೆಎಲ್‌ಇ ಎಂ.ಆರ್‌. ಸಾಖರೆ ಸಿಬಿಎಸ್‌ಇ ಶಾಲೆಯ ಪ್ರಣಿತಾ ಹಾಗೂ ಗೌರಿ ಪ್ರಥಮ; ಬೆಂಗೇರಿ ರೋಟರಿ ಪ್ರಾಥಮಿಕ ಶಾಲೆಯ ರತನ್‌ ಗೌಡ ಹಾಗೂ ಪ್ರಥಮ ಅವಾಜಿ ದ್ವಿತೀಯ; ಚಿನ್ಮಯ ಇಂಗ್ಲಿಷ್‌ ಮೀಡಿಯಂ ಸ್ಕೂಲ್‌ನ ಭರತ್‌ ನಾಯ್ಕ ಹಾಗೂ ಸುಜನ್‌ರಾಜ್‌ ತೃತೀಯ ಸ್ಥಾನ ಪಡೆದರು. ವಾಸುಕಿ ಜಿ.ಎಸ್‌., ಜಯಶ್ರೀ ದೇಶಪಾಂಡೆ, ತಿಲಕ್‌ ವಿಕಂಶಿ, ಪಿ.ವಿ. ಹಿರೇಮಠ, ಡಾ| ಬಬಿತಾ ಆರ್‌., ಡಾ| ಸತೀಶ ಇರಕಲ್‌, ಡಾ| ಚೇತನ್‌, ಪ್ರಕಾಶ ಕರಿಗೌಡರ ಇದ್ದರು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.