ಎಲ್ಲ ಫಲಾನುಭವಿಗಳಿಗೂ ಲಸಿಕೆ ತಲುಪಲಿ


Team Udayavani, May 20, 2018, 5:46 PM IST

20-may-27.jpg

ಗದಗ: ಇಂದ್ರಧನುಷ್‌ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜಿಲ್ಲೆಯಲ್ಲಿ ಗುರುತಿಸಿದ ಎಲ್ಲ ಫಲಾನುಭವಿಗಳಿಗೆ ಲಸಿಕೆ ತಲುಪಬೇಕು ಎಂದು ಜಿಲ್ಲಾ ಕಾರಿ ಮನೋಜ್‌ ಜೈನ್‌ ಹೇಳಿದರು.

ಗ್ರಾಮ ಸ್ವರಾಜ್ಯ ಯೋಜನೆಯಡಿ ಇಂದ್ರಧನುಷ್‌ ಲಸಿಕಾ ಕಾರ್ಯಕ್ರಮ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ನಿಮಿತ್ತ ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಶಿಸ್ತುಬದ್ಧವಾಗಿ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಗುರುತಿಸಿದ ಆಯಾ ತಾಲೂಕಿನ ಹಳ್ಳಿಗಳಿಗೆ ಸಂಬಂಧಿಸಿದ ಕಾರ್ಯಕ್ರಮದ ಅ ಧಿಕಾರಿಗಳು ಈ ಸಾರ್ವತ್ರಿಕ ಲಸಿಕೆಯ ಗುರುತಿಸಿದ ಎಲ್ಲ ಫಲಾನುಭವಿಗಳಿಗೆ ತಲುಪವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಮೇ 28 ರಿಂದ ಜೂ. 9 ವರೆಗೆ ಐಡಿಸಿಎಫ್‌ ಕಾರ್ಯಕ್ರಮವು ಜರುಗಲಿದ್ದು, 0-5 ವರ್ಷದೊಳಗಿನ ಮಕ್ಕಳು ಅತಿಸಾರಭೇದಿಯಿಂದ ಮರಣ ಹೊಂದಬಾರದೆಂಬ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಗುರುತಿಸಲಾದ 5 ವರ್ಷದೊಳಗಿನ ಒಟ್ಟು 1,32,424 ಮಕ್ಕಳಿರುವ ಮನೆಗಳಿಗೆ ಭೇಟಿ ನೀಡಿ ಓಆರ್‌ಎಸ್‌ ಹಾಗೂ ಜಿಂಕ್‌ ಮಾತ್ರೆ ನೀಡಿ ಉಪಚಾರ ಮಾಡಿ, ಗುಣಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು. ಮೇಲಿಂದ ಮೇಲೆ ಕೈತೊಳೆದುಕೊಳ್ಳುವ ಕುರಿತು ಹಾಗೂ ಗ್ರಾಮ, ನಗರ ಪ್ರದೇಶ, ಎಲ್ಲ ಆಸ್ಪತ್ರೆಗಳ ಹಾಗೂ ಶಾಲೆಗಳಲ್ಲಿಯ ನೀರಿನ ಟ್ಯಾಂಕ್‌ಗಳನ್ನು ಶುಚಿಗೊಳಿಸಲು ಹಾಗೂ ಜಿಲ್ಲೆಯ ಎಲ್ಲ ನೀರಿನ ಮೂಲಗಳನ್ನು ತಪಾಸಣೆ ಮಾಡಿ, ರೋಗ ಹರಡದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಗೆ ತಿಳಿಸಿದರು.

ಜಿಲ್ಲಾ ಆರ್‌.ಸಿ.ಎಚ್‌ ಅಧಿ ಕಾರಿ ಡಾ| ಎಸ್‌.ಎನ್‌. ಹೊನಕೇರಿ ಮಾತನಾಡಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ, ಇನ್ನುಳದ 28 ಜಿಲ್ಲೆಗಳ 625 ಹಳ್ಳಿಗಳಲ್ಲಿ ಈ ಅಭಿಯಾನ ಜರುಗಲಿದೆ. ಜಿಲ್ಲೆಯ ನರಗುಂದ ತಾಲೂಕು ಹೊರತುಪಡಿಸಿ ಉಳಿದ ನಾಲ್ಕು ತಾಲೂಕುಗಳ 22 ಗ್ರಾಮಗಳಲ್ಲಿ ಈ ಅಭಿಯಾನ ನಡೆಯಲಿದೆ. ಎರಡು ವರ್ಷದೊಳಗಿನ 247, 5-6 ವರ್ಷದೊಳಗಿನ 60 ಮಕ್ಕಳಿಗೆ ಹಾಗೂ 65 ಗರ್ಭಿಣಿಯರಿಗೆ ಈ ಚುಚ್ಚುಮದ್ದು ನೀಡಲಾಗುವುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಪಿ.ಎಚ್‌.ಕಬಾಡಿ ಸ್ವಾಗತಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮಕೃಷ್ಣ ಪಡಗಣ್ಣವರ, ಜಿಲ್ಲಾಶಸ್ತ್ರ ಚಿಕಿತ್ಸಕ ಡಾ| ಪಲ್ಲೇದ, ಶಿಕ್ಷಣ ಇಲಾಖೆಯ ಜಿ.ಎಲ್‌. ಬಾರಾಟಕ್ಕೆ, ತಾಲೂಕಾ ವೈದ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.