ಮುರುಘಾ ಶ್ರೀ ವಿರುದ್ಧ ಆರೋಪ; ಸಂಪೂರ್ಣ ಹೊಣೆ ತನಿಖಾಧಿಕಾರಿಗೆ: ಅಲೋಕ್ ಕುಮಾರ್
ಗಣೇಶೋತ್ಸವ: ಕೆಲ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ; ಕಿಡಿಗೇಡಿಗಳಿಗೆ ಈಗಾಗಲೇ ಎಚ್ಚರಿಕೆ
Team Udayavani, Aug 29, 2022, 1:59 PM IST
ಹುಬ್ಬಳ್ಳಿ: ಚಿತ್ರದುರ್ಗದ ಮುರುಘಾ ಶರಣರ ಬಂಧನ ಆಗಿದೆಯೋ ಇಲ್ಲವೋ ಎಂಬುವುದರ ಬಗ್ಗೆ ಗೊತ್ತಿಲ್ಲ. ಸಂಪೂರ್ಣ ತನಿಖೆ ಪ್ರಕರಣದ ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟ ವಿಚಾರ. ಒಂದು ವೇಳೆ ಬಂಧನವಾಗಿದ್ದರೆ ಅಧಿಕಾರಿಗಳು ನನಗೆ ಮಾಹಿತಿ ನೀಡುತ್ತಿದ್ದರು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟಪಡಿಸಿದರು.
ಇಲ್ಲಿನ ಈದ್ಗಾ ಮೈದಾನಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಕ್ಸೋ ಕಾಯ್ದೆ ಪ್ರಕಾರ ಪ್ರಕಣ ತನಿಖೆ ನಡೆಸಲಾಗುತ್ತಿದೆ. ತನಿಖೆಯ ಸಂಪೂರ್ಣ ಹೊಣೆಯನ್ನು ತನಿಖಾಧಿಕಾರಿಗೆ ನೀಡಲಾಗಿದೆ. ಅವರು ಉತ್ತಮ ಅಧಿಕಾರಿಯಾಗಿದ್ದು, ಕಾನೂನು ಪ್ರಕಾರ ತನಿಖೆ ಮಾಡುತ್ತಿದ್ದಾರೆ.
ಸಂತ್ರಸ್ತ ಬಾಲಕಿಯನ್ನು ಮಹಿಳಾ ಕಲ್ಯಾಣ ಅಧಿಕಾರಿಗಳ ಮುಂದೆ ವಿಚಾರಣೆ, ವೈದ್ಯಕೀಯ ತಪಾಸಣೆ, ಅವರ ಪಾಲಕರ ಪತ್ತೆ ಹಚ್ಚಿ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸಲಾಗುತ್ತಿದೆ. ಕಾನೂನು ಪ್ರಕಾರವೇ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಗಣೇಶೋತ್ಸವ : ಕಿಡಿಗೇಡಿಗಳಿಗೆ ಈಗಾಗಲೇ ಎಚ್ಚರಿಕೆ
ರಾಜ್ಯದಲ್ಲಿ ಗಣೇಶ ಹಬ್ಬವನ್ನು ವಿಜೃಂಬಣೆಯಿಂದ ಆಚರಿಸಲಾಗುತ್ತಿದೆ. ಈ ಭಾಗದಲ್ಲಿ ಹೆಚ್ಚಿನ ಅದ್ದೂರಿತನ ಇರುತ್ತದೆ. ಈ ಆಚರಣೆಗೆ ಯಾವುದೇ ದಕ್ಕೆ ಬರಬಾರದು ಎನ್ನುವ ಕಾರಣಕ್ಕೆ ಕೆಲ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತು ಸೇರಿದಂತೆ ಹಲವು ತಂತ್ರಜ್ಞಾನದ ಸಾಧನಗಳನ್ನು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತಿದೆ. ಕಿಡಿಗೇಡಿಗಳಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ರೂಟ್ ಮಾರ್ಚ್ ನಡೆಸಿ ವಿಜೃಂಬಣೆಯ ಆಚರಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದರು.
ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರ ಮೈದಾನದ ಮಾಲೀಕರಾದ ಮಹಾನಗರ ಪಾಲಿಕೆಗೆ ಬಿಟ್ಟ ವಿಚಾರವಾಗಿದೆ. ಅವರು ಕೈಗೊಳ್ಳುವ ನಿರ್ಧಾರದ ಮೇಲೆ ಪೊಲೀಸ್ ಇಲಾಖೆ ಕೆಲಸ ಮಾಡಲಿದೆ. ಈ ವಿಚಾರದಲ್ಲಿ ಕೇಳದ ಹೊರತು ಸುಖಾ ಸುಮ್ಮನೆ ಸಲಹೆಯಯನ್ನು ಪೊಲೀಸ್ ಇಲಾಖೆ ಕೊಡುವುದಿಲ್ಲ. ಪಾಲಿಕೆ ಸದನ ಸಮಿತಿ ರಚಿಸಿದ್ದು, ಅದರ ವರದಿ ಏನಿರುತ್ತದೆ ಎನ್ನುವುದರ ಮೇಲೆ ಪೊಲೀಸ್ ಇಲಾಖೆ ಕೆಲಸ ಮಾಡಲಿದೆ. ಈಗಾಗಲೇ ಮುನ್ನೆಚ್ವರಿಕಾ ಕ್ರಮವಾಗಿ ಬಿಗಿ ಬಂದೋಬಸ್ತು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.