ಮೈತ್ರಿ ಸರ್ಕಾರ ಸಿಎಂ ರೆಸಾರ್ಟ್‌ನಲ್ಲಿ ಗಾಢ ನಿದ್ರೆ
Team Udayavani, May 11, 2019, 9:46 AM IST
ಕುಂದಗೋಳ: ಕುಂದಗೋಳ, ಶಿರೂರು, ಪಶುಪತಿಹಾಳ, ಹಿರೇಗುಂಜಳ, ಬರದ್ವಾಡ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಪರ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಮತಯಾಚಿಸಿದರು.c
ಕುಂದಗೋಳ: ಜನರ ವಿಶ್ವಾಸ ಕಳೆದುಕೊಂಡ ಮೈತ್ರಿ ಸರ್ಕಾರದ ಸಿಎಂ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿ ಪರ ಮತಕೇಳಿ ಸುಸ್ತಾಗಿ ರೆಸಾರ್ಟ್‌ನಲ್ಲಿ ಗಾಢ ನಿದ್ರೆಗೆ ಜಾರಿದ್ದು, ಮುಂಬರುವ ದಿನಗಳಲ್ಲಿ ಮೈತ್ರಿ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಪರ ಶುಕ್ರವಾರ ಕುಂದಗೋಳ, ಶಿರೂರು, ಪಶುಪತಿಹಾಳ, ಹಿರೇಗುಂಜಳ ಮತ್ತು ಬರದ್ವಾಡ ಗ್ರಾಮಗಳಲ್ಲಿ ಮತಯಾಚಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಹುಬ್ಬಳ್ಳಿಯಲ್ಲಿ ಮನೆ ಮಾಡಿ ಮತಬ್ಯಾಂಕ್‌ಗೆ ಕೈ ಹಾಕಿದರೋ ಅಥವಾ ಇಲ್ಲಿನ ಜನರ ನೋವಿಗಾಗಿ ಮಾಡಿದರೋ ಅದು ಸ್ಪಷ್ಟವಾಗಲಿಲ್ಲ. ಚುನಾವಣೆ ಸಂದರ್ಭದಲ್ಲಿ ಇಲ್ಲಿನ ಜನ ಮತ ನೀಡಲಿಲ್ಲ ಎಂದು ಇಲ್ಲಿ ನಿರ್ಲಕ್ಷ್ಯ ವಹಿಸಿದರು. ಆದರೆ ಮಂಡ್ಯ, ಮೈಸೂರು, ತುಮಕೂರು, ಹಾಸನ ಜಿಲ್ಲೆಗೆ ಮಾತ್ರ ಸಿಎಂ ಆಗಿ ಕಾರ್ಯ ಮಾಡುತ್ತಿದ್ದಾರೆ ಎಂದರು.
ಮಲ್ಲಿಕಾರ್ಜುನ ಕಿರೇಸೂರ, ಪ್ರಕಾಶ ಶಟ್ಟಿ, ರುದ್ರಣ್ಣ ಗಾಣಿಗೇರ, ರಾಘವೇಮದ್ರ ಮಿರೇಜಕರ, ಈಶ್ವರ ಗಂಗಾಯಿ, ಶಂಕ್ರಣ್ಣ ಒಡಕಣ್ಣವರ, ಸಿದ್ದು ನಾಗರಳ್ಳಿ, ಇದ್ದರು.
ಇದೇ ವೇಳೆ ಹಿರೇಹರಕುಣಿ ಗ್ರಾಮದಲ್ಲೂ ಪ್ರಚಾರ ನಡೆಸಿ ಮತಯಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.