ಕೋವಿಡ್ ಸೋಂಕಿತರಿಗಿನ್ನು ಮನೆಯಲ್ಲೇ ಚಿಕಿತ್ಸೆ ಅವಕಾಶ
Team Udayavani, Jul 10, 2020, 11:12 AM IST
ಧಾರವಾಡ: ಕೋವಿಡ್ ಸೋಂಕು ದೃಢಪಟ್ಟಿದ್ದರು ಕೂಡಾ ಸೋಂಕಿನ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣಗಳಿರುವವರಿಗೆ ಆರೋಗ್ಯ ತಂಡದಿಂದ ನಡೆಸಲಾಗುವ ಪ್ರಾಥಮಿಕ ಪರಿಶೀಲನೆ ಹಾಗೂ ಟ್ರಯೇಜ್ ಶಿಫಾರಸು ಆಧರಿಸಿ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ಅವಕಾಶ ನೀಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತಾಲಯ ತಿಳಿಸಿದೆ.
ಈ ಕುರಿತು ಮಾರ್ಗಸೂಚಿ ಪ್ರಕಟಿಸಿರುವ ಆಯುಕ್ತಾಲಯವು ಪ್ರತ್ಯೇಕವಾಗಿರಲು ಮನೆಯು ಸೂಕ್ತವಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಪ್ರತ್ಯೇಕತೆಯ ಅವಧಿಯಲ್ಲಿ ವ್ಯಕ್ತಿಯನ್ನು ದೈನಂದಿನ ಅನುಸರಣೆ ಮಾಡಲು ಟೆಲಿ ಕನ್ಸಲ್ಟೆಶನ್ ಸಂಪರ್ಕ ಸ್ಥಾಪಿಸಲಾಗುವುದು. ಮನೆಯಲ್ಲಿ ಪ್ರತ್ಯೇಕವಾಗಿ ಇರಿಸುವುದು. ಕುಟುಂಬದ ಸದಸ್ಯರಿಗೆ, ಅಕ್ಕಪಕ್ಕದ ಮನೆಯವರಿಗೆ ತಿಳಿಸಬೇಕು.
ಆರೋಗ್ಯ ಸಿಬ್ಬಂದಿ ಪರಿಶೀಲಿಸುವ ಅಂಶಗಳು: ಶರೀರದ ತಾಪಮಾನ, ನಾಡಿಮಿಡಿತಕ್ಕಾಗಿ ಪಲ್ಸ್ ಆಕ್ಸಿಮೀಟರ್, ರಕ್ತದಲ್ಲಿನ ಸಕ್ಕರೆ ಅಂಶ, ರಕ್ತದೊತ್ತಡ, ಆರೋಗ್ಯ ಸಮಸ್ಯೆಗಳನ್ನು ನಿರಂತರವಾಗಿ ಪರಿಶೀಲಿಸುತ್ತಾರೆ. ವ್ಯಕ್ತಿಯು ಲಕ್ಷಣ ರಹಿತ ಅಥವಾ ಸೌಮ್ಯಲಕ್ಷಣ ಹೊಂದಿದ್ದಾರೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸುತ್ತಾರೆ. 38 ಡಿಗ್ರಿ ಸೆಲ್ಸಿಯಸ್ ಅಥವಾ 100.4 ಡಿಗ್ರಿ ಫ್ಯಾರನ್‌ಹೀಟ್ ಕಡಿಮೆ ಶರೀರ ತಾಪಮಾನ ಹೊಂದಿರಬೇಕು. ಆಮ್ಲಜನಕದ ಪರ್ಯಾಪ್ತತೆ ಶೇ.95ಕ್ಕಿಂತ ಹೆಚ್ಚಿರಬೇಕು. 60 ವಯಸ್ಸಿಗಿಂತ ಕಡಿಮೆ ವಯೋಮಾನದವರಾಗಿರಬೇಕು. ವ್ಯಕ್ತಿಯು ಸ್ವಯಂಪ್ರೇರಿತವಾಗಿ ಮನೆಯಲ್ಲಿ ಪ್ರತ್ಯೇಕವಾಗಿ ಇರಲು ಒಪ್ಪಿ ಮುಚ್ಚಳಿಕೆ ಪತ್ರ ನೀಡಿದಾಗ ಈ ನಿಟ್ಟಿನಲ್ಲಿ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.