ಬೇಂದ್ರೆ ಬಸ್‌ಗಳಿಗೆ ಪರ್ಯಾಯ ಮಾರ್ಗ ; ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಸೂಚನೆ
Team Udayavani, Aug 14, 2021, 1:21 PM IST
ಹುಬ್ಬಳ್ಳಿ: ಅವಳಿ ನಗರಗಳ ಮಧ್ಯ ಕಾರ್ಯಾಚರಣೆ ಯಲ್ಲಿರುವ ಬೇಂದ್ರೆ ಸಾರಿಗೆಯ ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು ನೀಡಿರುವ ಸಾರಿಗೆ ಇಲಾಖೆಯ ಅಧಿಸೂಚನೆ ಪ್ರಶ್ನಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಲ್ಲಿಸಿದ ಅರ್ಜಿ ಯನ್ನು ಹೈಕೋರ್ಟ್ ಪುರಸ್ಕರಿಸಿ ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಿದೆ.
ಸರಕಾರ ಬೇಂದ್ರೆ ಸಾರಿಗೆಗೆ ಪರ್ಯಾಯ ಮಾರ್ಗಗಳನ್ನು ನೀಡುವ ಕುರಿತು ವಾಕರಸಾ ಸಂಸ್ಥೆಯಿಂದ ತಕರಾರು ಇರುವ ಬಗ್ಗೆ ಈಗಾಗಲೇ ಸಾರಿಗೆ ಇಲಾಖೆಯ ಗಮನಕ್ಕೆ ತರಲಾಗಿತ್ತು. ಆದಾಗ್ಯೂ ಜು. 20, 2021ರಂದು ಸಾರಿಗೆ ಇಲಾಖೆ ಹೊರಡಿಸಿದ ಅಧಿಸೂಚನೆ ಮೇರೆಗೆ ಬೇಂದ್ರೆ ಸಾರಿಗೆಯ 41 ವಾಹನಗಳಿಗೆ ಪರ್ಯಾಯ ಮಾರ್ಗಗಳಾದ ಬೆಳಗಾವಿ-ಅಥಣಿ-ವಿಜಯಪುರ-15, ಹುಬ್ಬಳ್ಳಿ-ಬಾಗಲಕೋಟೆ ವಿಜಯಪುರ-15 ಹಾಗೂ ಹುಬ್ಬಳ್ಳಿ-ಗದಗ ನಡುವೆ 11 ಒಟ್ಟು 41 ವಾಹನಗಳಿಗೆ ಸಂಚರಿಸಲು ಅನುಮತಿಸಿ ಅಧಿಸೂಚನೆ ಹೊರಡಿಸಲಾಗಿತ್ತು.
ಬೆಳಗಾವಿ-ವಿಜಯಪುರ-ಗದಗ ಮಾರ್ಗಗಳಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳು ಈಗಾಗಲೇ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೇವೆ ಒದಗಿಸುತ್ತಿದ್ದು, ಸಂಸ್ಥೆಗೆ ಉತ್ತಮ ಆದಾಯ ಗಳಿಸುವ ಮಾರ್ಗಗಳಾಗಿರುತ್ತವೆ. ಆದ್ದರಿಂದ ಈ ಕುರಿತು ಜು.20, 2021ರಂದು ಹೊರಡಿಸಿದ ಸಾರಿಗೆ ಇಲಾಖೆಯ ಅಧಿಸೂಚನೆಯ ಆದೇಶವನ್ನು ಪ್ರಶ್ನಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಕರ್ನಾಟಕದ ರಾಜ್ಯದ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಾದ-ಪ್ರತಿವಾದ ಆಲಿಸಿದ ನಂತರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮನವಿಯನ್ನು ಪುರಸ್ಕರಿಸುವುದರೊಂದಿಗೆ, ಪ್ರಸ್ತುತ ಇದ್ದ ಯಥಾಸ್ಥಿತಿ ಮುಂದುವರಿಸುವಂತೆ ಆ.11, 2021ರಂದು ಹೈಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಈ ಮಾರ್ಗಗಳಲ್ಲಿ ಯಾವುದೇ ರಹದಾರಿ ಪರವಾನಗಿ(ಕಛಿrಞಜಿಠಿ) ಪತ್ರಗಳನ್ನು ನೀಡದಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಬಂಧಿಸಿದ ಸಾರಿಗೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ವಾಯವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ
Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್ ಮೇಲೇ ಕಣ್ಣು!
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.