ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯಿರಿ
Team Udayavani, May 18, 2020, 12:28 PM IST
ಧಾರವಾಡ: ಎಪಿಎಂಸಿ ಕಾಯ್ದೆಗೆ ತರಾತುರಿಯಲ್ಲಿ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಸರಕಾರದ ನಿರ್ಧಾರದ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಎಪಿಎಂಸಿ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಶೇ.90 ರೈತರ ಬೆಂಬಲವಿದೆ ಎಂಬುದು ಸತ್ಯವೇ ಅಲ್ಲ. ಇದು ದುರುದ್ದೇಶ ಎಂದು ಜನತೆಗೆ ಅರ್ಥವಾಗದೇ ಇರಲು ಸಾಧ್ಯವಿಲ್ಲ. ಕೋವಿಡ್ ಹೊಡೆತಕ್ಕೆ ಜನ ತತ್ತರಿಸಿ ಮನೆಯಲ್ಲಿರುವ ಸಮಯದಲ್ಲಿ ಇಂತಹ ನಿರ್ಣಯ ತೆಗೆದುಕೊಂಡಿರುವುದು ಸಮಯಸಾಧಕ ಕ್ರಮವಾಗಿದೆ ಎಂದಿ ದೂರಿದ್ದಾರೆ.
ಎಪಿಎಂಸಿ ಕಾಯ್ದೆ ತಿದ್ದುಪಡಿ ಅಪಾಯಕಾರಿ ಬೆಳವಣಿಗೆ. ಇದು ರೈತರ ಉದ್ಧಾರಕ್ಕಲ್ಲ ಎನ್ನುವುದು ರೈತರಿಗೂ ಗೊತ್ತಾಗಿದೆ. ಸ್ವಾರ್ಥಕ್ಕಾಗಿ ರೈತರ ಹಿತವನ್ನು ಬಲಿ ಕೊಡಲು ಸರಕಾರ ಹೊರಟಿರುವುದು ಸಾಬೀತಾಗಿದೆ. ಇಂತಹ ಕ್ರಮದಿಂದ ಸರಕಾರವನ್ನು ಇತಿಹಾಸ ಎಂದಿಗೂ ಕ್ಷಮಿಸುವುದಿಲ್ಲ. ಈಗಲೂ ಕಾಲ ಮಿಂಚಿಲ್ಲ. ಮುಂದಿನ ದಿನಗಳಲ್ಲಿ ರೈತರಿಂದ ಗಂಭೀರ ಸ್ವರೂಪದ ಪ್ರತಿಭಟನೆ ಕೈಗೊಳ್ಳುವ ಮೊದಲೇ ಈ ನಿರ್ಧಾರದಿಂದ ಸರಕಾರ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ವಿತ್ತ ಮಂತ್ರಿಗಳು ಮೂರನೇ ಹಂತದಲ್ಲಿ ಪ್ರೋತ್ಸಾಹ ಘೋಷಣೆ ಮಾಡಿರುವುದರಲ್ಲಿ ಯಾವುದೇ ಅರ್ಥವಿಲ್ಲ. ಈ ವಿಷಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ “ಅನ್ನದಾತನ ಬೆನ್ನಿಗೆ ನಿಂತ ಮೋದಿ ಸರಕಾರ’ ಹೇಳಿಕೆ ವ್ಯರ್ಥವಾದದ್ದು ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.