ಪ್ರಾಚೀನ ಸ್ಮಾರಕಗಳು ನಾಡಿನ ಅಮೂಲ್ಯ ಆಸ್ತಿ 

Team Udayavani, May 19, 2018, 5:41 PM IST

19-may-21.jpg

ಬಾದಾಮಿ: ಪ್ರಾಚೀನ ಕಾಲದ ಸ್ಮಾರಕಗಳು ನಾಡಿನ ಅಮೂಲ್ಯ ಆಸ್ತಿ. ಇವುಗಳನ್ನು ಮುಂದಿನ ಜನಾಂಗಕ್ಕೆ ತಿಳಿಸಲು, ಉಳಿಸಿ, ಬೆಳೆಸುವ ಉದ್ದೇಶದಿಂದ ಜಗತ್ತಿನಾದ್ಯಂತ 146 ದೇಶಗಳಲ್ಲಿ ಮೇ 18 ರಂದು ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನ ಆಚರಿಸಲಾಗುತ್ತಿದೆ ಎಂದು ನಿವೃತ್ತ ಉಪನ್ಯಾಸಕ ಎಸ್‌.ಎಚ್‌. ವಾಸನ್‌ ಹೇಳಿದರು.

ನಗರದ ಪ್ರಾಚ್ಯವಸ್ತು ಸಂಗ್ರಹಾಲಯದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣ ಧಾರವಾಡ ವಲಯದ ವತಿಯಿಂದ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಯುವ ಪೀಳಿಗೆ ಇತಿಹಾಸವನ್ನು ಅರಿಯುವ ಕೆಲಸ ಮಾಡಬೇಕು. ಹಿಂದಿನ ಕಾಲದಲ್ಲಿ ಚಾಲುಕ್ಯರು ಆಳಿದ ಸ್ಮಾರಕಗಳನ್ನು ನೋಡಿದವರಿಗೆ ಹೊಸ ಅನುಭವ ಕೊಡುತ್ತವೆ. ಯುವ ಜನರ ದೃಷ್ಟಿಕೋನ ಬದಲಾಗಬೇಕು ಎಂದರು.

ಸಾವಿರಾರು ವರ್ಷಗಳ ಹಿಂದೆ ಚಾಲುಕ್ಯರು ನಿರ್ಮಿಸಿದ ಗುಹಾಂತರ ದೇವಾಲಯಗಳು ತಮ್ಮದೇ ಆದ ಇತಿಹಾಸ ಹೊಂದಿವೆ. ಅವರ ಸಾಧನೆ, ಕಲೆ, ಸಂಸ್ಕೃತಿ, ಸಾಹಿತ್ಯ, ಇತಿಹಾಸವನ್ನು ಇತರರಿಗೆ ಮತ್ತು ಮುಂದಿನ ಜನಾಂಗಕ್ಕೆ ತಿಳಿಸುವ ಕಾರ್ಯ ಆಗಬೇಕಿದೆ ಎಂದರು.

ದೇವಾಲಯಗಳನ್ನು ನಿರ್ಮಿಸಿದ ಕಲಾಕಾರರ ಕಲಾ ಪ್ರೌಢಿಮೆ, ಕಲಾಪ್ರತಿಭೆ ವಿಶಿಷ್ಟವಾದುದು. ದೂರದೃಷ್ಟಿ ಮರೆಯಲು ಸಾಧ್ಯವಿಲ್ಲ. ಆದಕಾರಣ ಇತಿಹಾಸಕಾರರಿಗೆ ನಮನಗಳನ್ನು ಸಲ್ಲಿಸುತ್ತೇನೆ ಎಂದರು. 1977 ರಿಂದ ಪ್ರತಿ ವರ್ಷ ಮೇ 18 ರಂದು ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಗೌರವ ಅತಿಥಿಗಳಾಗಿ ಭಾಗವಹಿಸಿದ್ದ ವಿಶ್ರಾಂತ ಪ್ರಾಧ್ಯಾಪಕ ಡಾ.ಶಿಲಾಕಾಂತ ಪತ್ತಾರ ಮಾತನಾಡಿ, ಮಕ್ಕಳಿಗೆ ವಸ್ತು ಸಂಗ್ರಹಾಲಯ ಬಗ್ಗೆ ಹಲವು ಪ್ರಶ್ನೆ ಕೇಳಿದರು. ವಿದೇಶಿಗರು ಭಾರತಕ್ಕೆ ಬರುವ ಮುನ್ನ ಗೂಗಲ್‌ನಲ್ಲಿ ಹುಡುಕಿ ಮ್ಯೂಜಿಯಂ ಮೊದಲು ಆಯ್ಕೆ ಮಾಡಿಕೊಂಡು ಬಾದಾಮಿಗೆ ಬಂದು ಇಲ್ಲಿನ ಐತಿಹಾಸಿಕ ಸ್ಥಳಗಳನ್ನು ವೀಕ್ಷಣೆ ಮಾಡುತ್ತಾರೆ ಎಂದು ಹೇಳಿದರು. ಇಲ್ಲಿಯ ಗುಹಾಂತರ ದೇವಾಲಯ, ಕಪ್ಪೆ ಅರಭಟ್ಟನ ಶಾಸನ, ಮ್ಯೂಜಿಯಂ ಇವೆಲ್ಲವೂ ಚಾಲುಕ್ಯರ ಕಾಲದ ಇತಿಹಾಸ ಸಾರುತ್ತಿವೆ ಎಂದರು. ಎಸ್‌.ಎಂ. ಹಿರೇಮಠ ಮಾತನಾಡಿ, ಸ್ಮಾರಕಗಳನ್ನು ಎಲ್ಲರೂ ಸಂರಕ್ಷಣೆ ಮಾಡಬೇಕು. ಪ್ರತಿಯೊಬ್ಬರು ವಸ್ತು ಸಂಗ್ರಹಾಲಯದ ಬಗ್ಗೆ ತಿಳಿದು ಕೊಳ್ಳಬೇಕು ಎಂದು ಸಲಹೆ ನೀಡಿದರು. 

ವಸ್ತು ಸಂಗ್ರಹಾಲಯದ ಅಧಿಕಾರಿ ಪ್ರಶಾಂತ ಕುಲಕರ್ಣಿ ಇದ್ದರು. ಮಂಜು ಜಾಲವಾದಿ, ಹರ್ಷ ದೇಶಪಾಂಡೆ, ಡಾ.ಶೀಲಾಕಾಂತ ಪತ್ತಾರ, ಎಸ್‌.ಎಚ್‌.ವಾಸನ್‌, ಎಸ್‌.ಎಂ. ಹಿರೇಮಠ ಅವರನ್ನು ಸನ್ಮಾನಿಸಲಾಯಿತು. ವಸ್ತು ಸಂಗ್ರಹಾಲಯದ ಆವರಣದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಲೇಖನ ಹಾಗೂ ಚಿತ್ರಕಲೆ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಿತರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಮ್ಯೂಜಿಯಂ ಅಧಿಕಾರಿ ಸುಭಾಶ ಬೊಂಬ್ಲೆ ಸ್ವಾಗತಿಸಿದರು. ವಾದಿರಾಜ ಹುಯಿಲಗೋಳ ನಿರೂಪಿಸಿದರು. ಲಕ್ಷ್ಮಿ ಹಿರೇಮಠ ಪ್ರಾರ್ಥನಾ ಗೀತೆ ಹಾಡಿದರು. ಜಯಶ್ರೀ ಕಲ್ಮಠ, ಆರ್‌.ಬಿ. ಬಾವಿಮನಿ, ರೇಶ್ಮಾ, ಶಿವಾಣಿ, ಶಂಕ್ರಮ, ಹಿರಿಯರಾದ ಜಗದಾಳೆ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು, ಯುವಕರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.