ಧಾರವಾಡ : ಓರ್ವ ವ್ಯಕ್ತಿಗೆ ಕೋವಿಡ್ 19 ಪಾಸಿಟಿವ್ ; ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ

Team Udayavani, Mar 22, 2020, 9:00 AM IST

ಧಾರವಾಡ : ಓರ್ವ ವ್ಯಕ್ತಿಗೆ ಕೋವಿಡ್ 19 ಪಾಸಿಟಿವ್ ; ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ

ಧಾರವಾಡ: ಆಸ್ಟ್ರೇಲಿಯಾ, ದುಬೈ, ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ  ಓರ್ವ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು, ಪ್ರಯೋಗಾಲಯ ವರದಿಯಿಂದ ದೃಢಪಟ್ಟಿದೆ  ಎಂದು ಧಾರವಾಡ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

ವಿದೇಶ ಪ್ರವಾಸದಿಂದ ಆಗಮಿಸಿದ್ದ ಈ ವ್ಯಕ್ತಿಯು ದಿನಾಂಕ 12-03-2020 ರಂದು ಧಾರವಾಡ ನಗರಕ್ಕೆ ಆಗಮಿಸಿದ್ದರು.ಶಂ ಕಿತ ಕೋವಿಡ್ 19 ರ ರೋಗಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ , 18-03-2020 ರಂದು ಅವರು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಗೆ ಅನುಗುಣವಾಗಿ ಅದೇ ದಿನ ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ತಪಾಸಣೆಗಾಗಿ ಶಿವಮೊಗ್ಗದ VDRL ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಇದೀಗ ಪ್ರಯೋಗಾಲಯ ವರದಿ ಕೋವಿಡ್ 19 ಪಾಸಿಟಿವ್ ಎಂದು ಬಂದಿದೆ.

ಇದರೊಂದಿಗೆ ಕರ್ನಾಟಕದಲ್ಲಿ 21 ನೇ ಸೋಂಕು ಪ್ರಕರಣ ದೃಢಪಟ್ಟಿದೆ.

ಹೊಸಯಲ್ಲಾಪುರ ಸುತ್ತಮುತ್ತ ಕಂಟೈನಮೆಂಟ್ ಪ್ರದೇಶ ಘೋಷಣೆ
ಸೋಂಕು ದೃಢಪಟ್ಟಿರುವ ವ್ಯಕ್ತಿಯು ಧಾರವಾಡ ನಗರದ ಹೊಸಯಲ್ಲಾಪುರ ಪ್ರದೇಶಕ್ಕೆ ಸೇರಿದ 33 ವರ್ಷ ವಯಸ್ಸಿನ ಪುರುಷನಾಗಿದ್ದಾರೆ. ಹೊಸಯಲ್ಲಾಪುರ ಪ್ರದೇಶವನ್ನು ಕಂಟೈನಮೆಂಟ್ ಎಂದು ಘೋಷಿಸಲಾಗಿದ್ದು, ಅಲ್ಲಿಂದ ಸುತ್ತಮುತ್ತಲಿನ 3 ಕಿಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆಗಮನ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ.

ಈ  ವ್ಯಕ್ತಿಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಕಂಡು ಬಂದ ಸ್ಥಳದ ಸುತ್ತಮುತ್ತ ನಿಯಮಾನುಸಾರ ಸರ್ವೇ ಕಾರ್ಯ  ಕೈಗೊಳ್ಳಲಾಗಿದೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರ ಮಾಹಿತಿ ( Contact Tracing) ಸಂಗ್ರಹಿಸಲಾಗುತ್ತಿದೆ.

ಸಾಮಾಜಿಕ ಅಂತರ, ಶುಚಿತ್ವ ಪಾಲನೆಗೆ ಒತ್ತು ನೀಡಿ

ಜಿಲ್ಲೆಯಾದ್ಯಂತ ಈಗಾಗಲೇ ಕೋವಿಡ್ 19 ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಜನತೆ ಭಯಕ್ಕೆ ಒಳಗಾಗಬಾರದು, ಸಾಮಾಜಿಕ ಅಂತರ ಹಾಗೂ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು.ಸಾರ್ವಜನಿಕರು ಸಾಧ್ಯವಾದಷ್ಟು  ತಮ್ಮ  ಮನೆಗಳಲ್ಲಿಯೇ ಇರುವುದರ ಮೂಲಕ ವೈರಾಣು ತಡೆಯಲು ತಮ್ಮ ಸಹಕಾರ ನೀಡಬೇಕು  ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.