ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿ
Team Udayavani, Aug 5, 2018, 5:30 PM IST
ಗದಗ: ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಶ್ರಿತ ರೋಗವಾಹಕ ನಿಯಂತ್ರಣಾ ಅಧಿಕಾರಿಗಳ ಕಚೇರಿ, ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಶನಿವಾರ ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಡೆಂಘೀ ವಿರೋಧಿ ಮಾಸಾಚರಣೆ ಅಂಗವಾಗಿ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ನಡೆಯಿತು.
ಬಳಿಕ ಗೋಣಿಬಸವೇಶ್ವರ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಡಾ| ಎಸ್.ಎಂ. ಓಣಿ, ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಸೊಳ್ಳೆಗಳಿಂದ ಬರುತ್ತದೆ. ಶತಮಾನದಿಂದಲೂ ಸೊಳ್ಳೆಗಳು ಮನುಕುಲಕ್ಕೆ ಮಾರಿಯಾಗಿ ಪರಿಣಮಿಸಿವೆ. ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳ ಮಳೆಗಾಲದಲ್ಲಿ ಸೊಳ್ಳೆಗಳು ಹೆಚ್ಚಾಗಿ ಉತ್ಪತ್ತಿಯಾಗುತ್ತವೆ. ಶುದ್ಧ ನೀರಿನಲ್ಲಿ ಈಡೀಸ್ ಈಜೀಪ್ಟ್ಯೆ ಸೊಳ್ಳೆಗಳು ಮೊಟ್ಟೆಯಿಟ್ಟು ತನ್ನ ವಂಶಾಭಿವೃದ್ಧಿ ಮಾಡುತ್ತವೆ. ಅಂತಹ ಸೊಳ್ಳೆಗಳು ಕಚ್ಚುವುದರಿಂದ ಮಾನವನ ದೇಹದಲ್ಲಿ ಬಿಳಿರಕ್ತ ಕಣಗಳು ನಾಶವಾಗಿ ಡೆಂಘೀ, ಚಿಕೂನ್‌ಗುನ್ಯಾ ಹರಡುತ್ತವೆ. ಕೆಲವೊಮ್ಮೆ ಜನರ ಸಾವಿಗೂ ಅವು ಕಾರಣವಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.
ಡೆಂಘೀ, ಚಿಕೂನ್‌ಗುನ್ಯಾ ರೋಗಗಳಿಂದ ಜನರು ಭಯಭೀತರಾಗುವುದಕ್ಕಿಂತ ಮನೆಯ ನೀರಿನ ಪರಿಕರಗಳಲ್ಲಿ ಈಡೀಸ್ ಈಜೀಪ್ಟ್ಯೆಸೊಳ್ಳೆಗಳು ಉತ್ಪತ್ತಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಮಲೇರಿಯಾದಂತ ರೋಗಗಳಿಂದ ಮುಕ್ತರಾಗಬೇಕು. ಯಾವುದೇ ಸಮಯದಲ್ಲಿ ಸ್ವಲ್ಪ ಜ್ವರ ಕಾಣಿಸಿಕೊಂಡರೂ ವೈದ್ಯರಲ್ಲಿ ಚಿಕಿತ್ಸೆ ಪಡೆಯಬೇಕು. ಪ್ರಥಮ ಉಪಚಾರವಾಗಿ ಜ್ವರದ ಮಾತ್ರೆಗಳು, ಪಪ್ಪಾಯಿ ಎಲೆಯ ರಸವನ್ನು ರೋಗಿಗಳಿಗೆ ನೀಡುವುದು ಉತ್ತಮವೆಂದು ಸಲಹೆ ನೀಡಿದರು.
ಆರೋಗ್ಯ ಸಹಾಯಕ ಮತ್ತು ಮೇಲ್ವಿಚಾರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಪ್ಪ ಎನ್. ಲಿಂಗದಾಳ, ಪ್ರಾಥಮಿಕ ಶಾಲಾ ಶಿಕ್ಷಕರಾದ ಬಿ.ಕೆ. ಕಲ್ಲೊಳ್ಳಿ, ಮಂಜುನಾಥ ದೊಡ್ಡಮನಿ, ಆರೋಗ್ಯ ಸಹಾಯಕರಾದ ಎಸ್.ಬಿ. ಗಡಾದ, ಬಿ.ಸಿ. ಹಿರೇಹಾಳ, ಮಹಿಳಾ ಆರೋಗ್ಯ ಸಹಾಯಕಿ ಎಂ.ಎನ್. ದಂಡೀನ್, ಆಶಾ ಕಾರ್ಯಕರ್ತೆಯರಾದ ಮಾಲಾ ಮೇವುಂಡಿ, ಮೀನಾಕ್ಷಿ ವಡ್ಡರ, ರೇಣುಕಾ ಪುರದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.