ನಾಳೆಯಿಂದ 3 ದಿನ ಎಪಿಎಂಸಿ ಬಂದ್
Team Udayavani, Mar 18, 2020, 10:54 AM IST
ಹುಬ್ಬಳ್ಳಿ: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮರಗೋಳದ ಜಗಜ್ಯೋತಿ ಬಸವೇಶ್ವರ ಎಪಿಎಂಸಿ ಮಾರುಕಟ್ಟೆಯನ್ನು ಮಾ. 19ರಿಂದ 21ರ ವರೆಗೆ ಬಂದ್ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ.
ಎಪಿಎಂಸಿ ಅಧ್ಯಕ್ಷ ರಾಮಚಂದ್ರ ಜಾಧವ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮೂರು ದಿನಗಳ ಕಾಲ ಮಾರುಕಟ್ಟೆ ಬಂದ್ ಮಾಡುವ ಕುರಿತು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಒಂದು ವಾರ ಕಾಲ ಮಾರುಕಟ್ಟೆಯನ್ನು ಬಂದ್ ಮಾಡುವ ಕುರಿತು ಚರ್ಚಿಸಲಾಯಿತು. ಆದರೆ ಇದಕ್ಕೆ ಕೆಲ ವ್ಯಾಪಾರಸ್ಥರು ಆಕ್ಷೇಪ ವ್ಯಕ್ತಪಡಿಸಿದರು. ಕೇವಲ ತರಕಾರಿ ಮಾರುಕಟ್ಟೆ ಬಂದ್ ಮಾಡಿದರೆ ಸಾಲದು, ಎಲ್ಲ ವ್ಯಾಪಾರವನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.
ನಂತರ ಎಪಿಎಂಸಿಯಲ್ಲಿ ನಡೆಯುವ ಎಲ್ಲ ವಹಿವಾಟನ್ನು ಮೂರು ದಿನ ಸ್ಥಗಿತಗೊಳಿಸಲು ತೀರ್ಮಾನಿಸಲಾಯಿತು. ಸ್ಥಗಿತ ಮುಂದುವರಿಸುವ ಬಗ್ಗೆ ನಂತರ ನಿರ್ಧರಿಸಲಾಗುವುದು ಎಂದು ಅಧ್ಯಕ್ಷರು ಹೇಳಿದರು. ಇದಕ್ಕೂ ಮುನ್ನ ಪಾಲಿಕೆ ಆರೋಗ್ಯ ಇಲಾಖೆ ಸಿಬ್ಬಂದಿ ಕೊರೊನಾ ವೈರಸ್ ಹರಡುವ ಬಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವ್ಯಾಪಾರಸ್ಥರ ಸಂಘದ ಸದಸ್ಯರು ಹಾಗೂ ಎಪಿಎಂಸಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.