ಎಪಿಎಂಸಿ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ಮುಂದಕ್ಕೆ


Team Udayavani, Jul 5, 2020, 12:13 PM IST

ಎಪಿಎಂಸಿ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ಮುಂದಕ್ಕೆ

ಸಾಂದರ್ಭಿಕ ಚಿತ್ರ

ಧಾರವಾಡ: ಶನಿವಾರ ನಡೆಯಬೇಕಿದ್ದ ಸ್ಥಳೀಯ ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಕಾನೂನು ತೊಡಕಿನ ಕಾರಣ ಮುಂದೂಡಲಾಗಿದೆ.

ಎಪಿಎಂಸಿಯಲ್ಲಿ ಹಿನ್ನಡೆ ಆಗುವ ಸುಳಿವು ಪಡೆದ ಬಿಜೆಪಿಯವರು ಕಾಂಗ್ರೆಸ್‌ ಮುಖಂಡ ದೀಪಕ ಚಿಂಚೋರೆ ಅವರನ್ನು ಮತದಾನ ಪ್ರಕ್ರಿಯೆಯಿಂದ ಹೊರಗಿಟ್ಟಿದ್ದರು. ಶ್ರೀಮೃತ್ಯುಂಜಯ ಹತ್ತಿ ಸಂಸ್ಕರಣ ಸಂಘ ನಿಯಮಿತ ಧಾರವಾಡದ ಪ್ರತಿನಿಧಿಯಾಗಿ ಅವರು ಎಪಿಎಂಸಿ ಸದಸ್ಯರಾಗಿದ್ದರು. ಆದರೆ ಸಂಘದ ನೋಂದಣಿ ನವೀಕರಣಗೊಳ್ಳದಿರುವುದನ್ನು ಮುಂದಿಟ್ಟುಕೊಂಡು ಅವರ ಮತದಾನದ ಹಕ್ಕು ಮೊಟಕುಗೊಳಿಸಿದ್ದರು.

ಸಂಘದ ಮರು ನೋಂದಣಿ ಮಾಡಿಸಿ ಕಾನೂನುಬದ್ಧವಾಗಿ ಮತದಾನದ ಹಕ್ಕು ನೀಡುವಂತೆ ಕಾಂಗ್ರೆಸ್‌ ಮುಖಂಡ ಹಾಗೂ ಎಪಿಎಂಸಿ ಸದಸ್ಯ ದೀಪಕ ಚಿಂಚೋರೆ ಅವರು ಈ ಕುರಿತು ಹೈಕೋರ್ಟ್‌ ಮೆಟ್ಟಲು ಹತ್ತಿದ್ದರು. ಇದಲ್ಲದೇ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕು ಮೊಟಕುಗೊಳಿಸಿರುವ ಸರಕಾರದ ಕ್ರಮ ಪ್ರಶ್ನಿಸಿದ್ದರು.

ಈ ಸಂಬಂಧ ಪ್ರಕರಣದಲ್ಲಿ ರಾಜ್ಯ ಸರಕಾರ ಮಾರುಕಟ್ಟೆ ಕಾರ್ಯದರ್ಶಿ, ಕೃಷಿ ಮಾರಾಟ ಇಲಾಖೆ ನಿರ್ದೇಶಕರು, ಧಾರವಾಡ ಜಿಲ್ಲಾಧಿಕಾರಿ, ಧಾರವಾಡ ತಹಶೀಲ್ದಾರ್‌, ಧಾರವಾಡ ಎಪಿಎಂಸಿ ಕಾರ್ಯದರ್ಶಿಯನ್ನು ಪ್ರತಿವಾದಿಯಾಗಿಸಿದ್ದರು. ದೀಪಕ ಚಿಂಚೋರೆ ಅವರ ಅರ್ಜಿಯನ್ನು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ಅವರಿಗೆ ಚುನಾವಣೆಯಲ್ಲಿ ಭಾಗವಹಿಸಲು ಹಾಗೂ ಮತದಾನ ಮಾಡಲು ಅವಕಾಶ ಕಲ್ಪಿಸಿತ್ತು. ಅದರಂತೆ ಅವರು ಜೂ. 2ರಂದು ತಮ್ಮ ಹಕ್ಕು ಚಲಾಯಿಸಿದ್ದರು. ನಿಯಮಾವಳಿ ಪ್ರಕಾರ ಶನಿವಾರ ಧಾರವಾಡ ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ, ಧಾರವಾಡ ತಹಶೀಲ್ದಾರ್‌ ಸಂತೋಷ ಬಿರಾದಾರ ಅವರು ಮತ ಎಣಿಕೆ ಪ್ರಕ್ರಿಯೆ ಕೈಗೊಳ್ಳದೆ ಈ ಬಗ್ಗೆ ಹೈಕೋರ್ಟ್‌ ಮೂಲಕ ಕಾನೂನು ಸಲಹೆ ಪಡೆಯಲು ನಿರ್ಧರಿಸಿದ್ದಾರೆ. ಸೋಮವಾರ ಹೈಕೋರ್ಟ್‌ ಮೂಲಕ ಈ ಕುರಿತು ಸಲಹೆ ಪಡೆದು ನಂತರ ಅವರ ನಿರ್ದೇಶನದಂತೆ ಮುಂದಿನ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.