ಗೋವಾ ಪತ್ರದಡಿ ಟ್ರಿಬ್ಯುನಲ್‌ಗೆ ಅರ್ಜಿ ಸಲ್ಲಿಸಲಿ
Team Udayavani, Dec 24, 2017, 6:50 AM IST
ಹುಬ್ಬಳ್ಳಿ: “ಮಹದಾಯಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ರಾಜಕೀಯ ಬಿಡಲಿ. ಗೋವಾ
ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಇತ್ತೀಚೆಗೆ ನನಗೆ ಬರೆದ ಪತ್ರವನ್ನೇ ನ್ಯಾಯಾಧಿಕರಣ ಮುಂದೆ ಹೋಗಿ ಅರ್ಜಿ ಸಲ್ಲಿಸಿ, ಕುಡಿಯುವ ನೀರು ಪಡೆಯುವ ಪ್ರಾಮಾಣಿಕ ಯತ್ನಕ್ಕೆ ಮುಂದಾಗಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಕಳೆದ 6 ತಿಂಗಳಿಂದ ನಾನು, ಶೆಟ್ಟರ್, ಪ್ರಹ್ಲಾದ ಜೋಶಿ ಇನ್ನಿತರ ನಾಯಕರು ಮಹದಾಯಿ ಇತ್ಯರ್ಥಕ್ಕೆ ಯತ್ನಿಸಿದ್ದೆವು. ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೋವಾ ಮುಖ್ಯಮಂತ್ರಿ ಕುಡಿಯುವ ನೀರು ನೀಡಲು ಸಮ್ಮತಿಸಿದ್ದಲ್ಲದೆ, ನನಗೆ ಪತ್ರ ಬರೆದಿದ್ದಾರೆ.
ಗೋವಾ ಮುಖ್ಯಮಂತ್ರಿ ಬರೆದ ಪತ್ರದ ಬಗ್ಗೆ ಇಲ್ಲಸಲ್ಲದ ವ್ಯಾಖ್ಯಾನ, ಟೀಕೆ ಮಾಡುವ ಬದಲು ಸಿದ್ದರಾಮಯ್ಯ ಅದೇ ಪತ್ರವನ್ನು ನ್ಯಾಯಾಧಿಕರಣದ ಮುಂದೆ ಸಲ್ಲಿಸಿ, ನೀರು ಪಡೆಯುವ ಪ್ರಾಮಾಣಿಕ ಯತ್ನ ತೋರಲಿ. ಈ ರೀತಿ ಅರ್ಜಿ ಸಲ್ಲಿಸಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ’ ಎಂದರು.
ಮಹದಾಯಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸ್ವಾರ್ಥದ ರಾಜಕೀಯ ಬಿಟ್ಟು ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಳ್ಳಲಿ. ಗೋವಾ ಮುಖ್ಯಮಂತ್ರಿಯನ್ನು ಮಾತುಕತೆಗೆ ಆಹ್ವಾನಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಯ ಜತೆ ಕರ್ನಾಟಕ ಸರಕಾರ ಕೈಜೋಡಿಸಲಿ.
– ಡಿ.ವಿ.ಸದಾನಂದ ಗೌಡ, ಕೇಂದ್ರ ಸಚಿವ
ಮಹದಾಯಿ ಇತ್ಯರ್ಥಕ್ಕೆ ಪ್ರಾಮಾಣಿಕ ಯತ್ನ ತೋರದ ಕಾಂಗ್ರೆಸ್ ಜನರ ಮುಂದೆ ನಾಟಕ ಮಾಡುತ್ತಿದೆ. ಆದರೆ, ಕುಡಿಯುವ ಉದ್ದೇಶಕ್ಕೆ 7.56 ಟಿಎಂಸಿ ನೀರು ತರುವ ನಿಟ್ಟಿನಲ್ಲಿ ಗೋವಾ ಸಿಎಂ ಮನವೊಲಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ.
– ಜಗದೀಶ ಶೆಟ್ಟರ್, ವಿಧಾನಸಭೆ ಪ್ರತಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.