ಡಿಪಿಆರ್‌ಗೆ ಅನುಮೋದನೆ; ಜೋಶಿ ಮೆರವಣಿಗೆ
ಮಹದಾಯಿ ಹೆಸರಲ್ಲಿ ಸಮಾವೇಶ ಮಾಡಲು ಮುಂದಾಗಿರುವುದು ನಾಚಿಕೆಗೇಡಿನ ವಿಚಾರ
Team Udayavani, Jan 2, 2023, 4:37 PM IST
ಹುಬ್ಬಳ್ಳಿ: ಕಳಸಾ ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಸರಕಾರದಿಂದ ಅನುಮೋದನೆ ಕೊಡಿಸುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆಂದು ಪಕ್ಷದ ಕಾರ್ಯಕರ್ತರು, ಬೆಂಬಲಿಗರು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಅಭಿನಂದನೆ ಸಲ್ಲಿಸಿದರು.
ರವಿವಾರ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಕಿತ್ತೂರು ಚನ್ನಮ್ಮ ವೃತ್ತದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿಸಿದರು. ಡಾ| ಬಿ.ಆರ್. ಅಂಬೇಡ್ಕರ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ವಿವಿಧ ಕಲಾ ತಂಡಗಳು ಪಾಲ್ಗೊಂಡಿದ್ದವು. ಪಕ್ಷದ ರೈತ ಮೋರ್ಚಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಕಳಸಾ ಬಂಡೂರಿ ಯೋಜನೆಗೆ ಪರಿಸರ ಇಲಾಖೆ ಅನುಮತಿ ಬೇಕಾಗಿಲ್ಲ. ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಕಳುಹಿಸುವ ಪತ್ರದಲ್ಲಿ ದಿನಾಂಕ ಹುಡುಕುವ ಸಣ್ಣ ಮಟ್ಟಕ್ಕೆ ಕಾಂಗ್ರೆಸ್ ಇಳಿದಿದ್ದು, ಇದು ಅವರ ಡೇಟ್ ಎಕ್ಸ್‌ಪೈರಿ ಆಗುತ್ತಿರುವುದನ್ನು ತೋರಿಸುತ್ತಿದೆ. ಈ ಯೋಜನೆಗೆ ಗೋವಾದಲ್ಲಿ ಸೋನಿಯಾ ಗಾಂಧಿ ವಿರೋಧ ಮಾಡಿದ್ದರು. ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಸರಕಾರ ನಿರ್ಮಾಣ ಹಂತದಲ್ಲಿ ಕಾಲುವೆಗೆ ಅಡ್ಡಗೋಡೆ ಕಟ್ಟಿಸಿ ನೀರು ಬಾರದಂತೆ ಮಾಡಿದ್ದಾರೆ. ಇದೀಗ ಮಹದಾಯಿ ಹೆಸರಲ್ಲಿ ಸಮಾವೇಶ ಮಾಡಲು ಮುಂದಾಗಿರುವುದು ನಾಚಿಕೆಗೇಡಿನ ವಿಚಾರ ಎಂದರು.
ಮಹದಾಯಿ ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಹೋರಾಟ ಹಾಗೂ ಕೊಡುಗೆ ದೊಡ್ಡದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಸಿ.ಸಿ. ಪಾಟೀಲ, ತಾವು ಸೇರಿದಂತೆ ಹಲವು ನಾಯಕರು ಹೋರಾಟ ಮಾಡಿದ್ದರು. ಇಂದು ಅದೇ ಬಿಜೆಪಿ ಸರಕಾರ ಈ ಯೋಜನೆಯನ್ನು ಅನುಷ್ಠಾನಕ್ಕೆ ತರುತ್ತಿದೆ. ಆದಷ್ಟು ಶೀಘ್ರದಲ್ಲಿ ಇದನ್ನು ಅನುಷ್ಠಾನಗೊಳಿಸಲಾಗುವುದು.
ಯೋಜನೆಯಿಂದ ಯಾವ ತಾಲೂಕುಗಳಿಗೆ ಲಾಭ ಆಗುತ್ತಿದೆಯೋ ಅಲ್ಲಿ ರಥಯಾತ್ರೆ ಮಾಡಲಾಗುವುದು. ಡಿಪಿಆರ್‌ಗೆ ಅನುಮೋದನೆ ದೊರೆಯುವಲ್ಲಿ ರಾಜ್ಯದ ಮುಖ್ಯಮಂತ್ರಿಯಿಂದ ಹಿಡಿದು ಸಚಿವರ, ಶಾಸಕರ ಪ್ರಯತ್ನವಿದೆ ಎಂದು ಹೇಳಿದರು. ಶಾಸಕರಾದ ಅರವಿಂದ ಬೆಲ್ಲದ, ಸಿ.ಎಂ. ನಿಂಬಣ್ಣವರ, ಅಮೃತ ದೇಸಾಯಿ, ಮಾಜಿ ಶಾಸಕರಾದ ವೀರಭದ್ರಪ್ಪ ಹಾಲಹರವಿ, ಸೀಮಾ ಮಸೂತಿ, ಮುಖಂಡರಾದ ಬಸವರಾಜ ಕುಂದಗೋಳಮಠ, ದತ್ತಮೂರ್ತಿ ಕುಲಕರ್ಣಿ, ಚಂದ್ರಶೇಖರ ಗೋಕಾಕ, ತಿಪ್ಪಣ್ಣ ಮಜ್ಜಗಿ, ರವಿ ನಾಯಕ ಇನ್ನಿತರರಿದ್ದರು.
ಶೆಟ್ಟರ-ಮುನೇನಕೊಪ್ಪ ಗೈರು; ವಿಶೇಷ ಅರ್ಥ ಬೇಡ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾಜಿ
ಮುಖ್ಯಮಂತ್ರಿ ಜಗದೀಶ ಶೆಟ್ಟರ ಹಾಗೂ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಗೈರು ಎದ್ದು ಕಾಣುತ್ತಿತ್ತು. ಶಾಸಕರಾದ ಅರವಿಂದ ಬೆಲ್ಲದ, ಸಿ.ಎಂ.ನಿಂಬಣ್ಣವರ, ಅಮೃತ ದೇಸಾಯಿ ಇದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜೋಶಿ, ಮೆರವಣಿಗೆ ಹಾಗೂ ಸ್ವಾಗತ ಕಾರ್ಯಕ್ರಮ ನನಗೂ ತಿಳಿದಿರಲಿಲ್ಲ. ಬೆಂಬಲಿಗರು ಹಾಗೂ ಕಾರ್ಯಕರ್ತರು ಅನಿರೀಕ್ಷಿತ ಕಾರ್ಯಕ್ರಮ ಆಯೋಜಿಸಿದ್ದರಿಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹಾಗೂ ಶಂಕರ ಪಾಟೀಲ ಅವರಿಗೆ ಗೊತ್ತಿಲ್ಲದಿರಬಹುದು. ಹೀಗಾಗಿ ಅವರು ಬಂದಿರಲಿಕ್ಕಿಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.