Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Team Udayavani, Apr 18, 2024, 12:44 PM IST
ಹುಬ್ಬಳ್ಳಿ: ಬೆಂಗಳೂರಿನಲ್ಲಿ ಕೃತಕ ನೀರಿನ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಸರಕಾರ ಸೃಷ್ಟಿಸಿರುವ ಟ್ಯಾಂಕರ್ ಲಾಬಿ ಎಂದು ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ನೀರು ಪೂರೈಸಲು ಸರಕಾರಕ್ಕೆ ನೀರಿಲ್ಲ. ಆದರೆ ಟ್ಯಾಂಕರ್ ಮಾಲೀಕರಿಗೆ ನೀರು ಎಲ್ಲಿಂದ ಸಿಗುತ್ತಿದೆ. ಇದು ಸರಕಾರ ಸೃಷ್ಟಿಸಿರುವ ನೀರಿನ ಕೃತಕ ಅಭಾವ ಎನ್ನುವುದರಲ್ಲಿ ಅನುಮಾನವಿಲ್ಲ. ಒಂದು ಟ್ಯಾಂಕರ್ ನೀರು ಐದು ಸಾವಿರ ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಈ ಟ್ಯಾಂಕರ್ ಲಾಬಿ ಹಿಂದೆ ಸರ್ಕಾರ ನೇರವಾಗಿ ಭಾಗಿಯಾಗಿದೆ. ಅಲ್ಲಿನ ಜಲ ಮಂಡಳಿ ಅಧಿಕಾರಿಗಳ ಮೂಲಕ ನೀರಿನ ಕಳ್ಳ ಸಾಗಾಣಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಶ್ರೀಗಳ ಸ್ಪರ್ಧೆ ಬಿಜೆಪಿಗೆ ನಷ್ಟವಿಲ್ಲ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಯಸ್ಸು ಹಾಗೂ ಆರೋಗ್ಯದ ಹಿನ್ನೆಲೆಯಲ್ಲಿ ಅವರೇ ಖುಷಿಯಿಂದ ಅಧಿಕಾರ ಬಿಟ್ಟುಕೊಟ್ಟರು. ರಾಜಕೀಯ ಕುತಂತ್ರಕ್ಕೆ ಬಲಿಯಾದರೂ ಎನ್ನುವ ದಿಂಗಲೇಶ್ವರ ಸ್ವಾಮೀಜಿ ಹೇಳಿಕೆಯಲ್ಲಿ ಹುರುಳಿಲ್ಲ. ಸ್ವಾಮೀಜಿ ಅವರ ಸ್ಪರ್ಧೆಯಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದರು.
ಪಕ್ಷದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಅಭಿವೃದ್ಧಿ ಕಾರ್ಯಗಳು, ಎಲ್ಲಾ ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ನಾಯಕತ್ವ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಸ್ವಾಮೀಜಿಗಳು ಇದೀಗ ಚುನಾವಣೆಗೆ ಸ್ಪರ್ಧಿಸಿರುವುದರಿಂದ ಅವರ ಹೇಳಿಕೆಗಳು ರಾಜಕೀಯದಿಂದ ಕೂಡಿವೆ. ಇಂತಹ ಹೇಳಿಕೆಗಳ ಬಗ್ಗೆ ಅಷ್ಟೊಂದು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ
ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್ ಅರೆಸ್ಟ್! ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.