ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಮಹಿಳಾ ಸಂತೆ ಏರ್ಪಾಟು
Team Udayavani, May 4, 2018, 5:09 PM IST
ಬೆಳಗಾವಿ: ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಅನಕೂಲವಾಗುವಂತೆ, ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸಂಜೆ ಮಹಿಳಾ ಸಂತೆಯನ್ನು ಏರ್ಪಡಿಸಿ, ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಸಂಕಲ್ಪ ಮಾಡಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಹೇಳಿದರು.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಚನ್ನಮ್ಮ ನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪಾದಯಾತ್ರೆ ಮಾಡಿ ಮಹಿಳೆಯರ ಜೊತೆ ಸಂವಾದ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಜನ ಸೇವೆ ಮಾಡುವ ಅವಕಾಶ ನೀಡಿದರೆ ಮಹಿಳೆಯರ ಸುರಕ್ಷತೆ, ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಭರವಸೆ ನೀಡಿದರು.
ಸಂವಾದ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಮಾನ್ಸಾ ಪುರಭ, ಜ್ಯೋತಿ ಭಾಕಿ, ಸುಮಿತ್ರಾ ಶಿಗೇಹಳ್ಳಿ, ಶಾರದಾ ಹಿರೇಮಠ, ಸರೋಜಿನಿ, ಸ್ಮಿತಾ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸರ್ಕಾರ ಮತ್ತು ವಿಜಯೇಂದ್ರ ನಡುವೆ ಉತ್ತಮ ಅಡ್ಜಸ್ಟ್‌ಮೆಂಟ್ ಇದೆ: ಯತ್ನಾಳ್ ಆರೋಪ
Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ
BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ
BJP ರಾಜ್ಯಾಧ್ಯಕ್ಷರ ನೇಮಕ ಹೈಕಮಾಂಡ್ ನಿರ್ಧಾರ: ಅರವಿಂದ ಬೆಲ್ಲದ
Hubli: ಮೀಟರ್ ಬಡ್ಡಿಗೆ ಮನನೊಂದು ಲಾರಿ ಚಕ್ರದಡಿ ಬಿದ್ದು ವ್ಯಕ್ತಿ ಆತ್ಮಹ*ತ್ಯೆ