![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 11, 2024, 12:50 PM IST
ಹುಬ್ಬಳ್ಳಿ: ನಗರದ ಹಳೆಯ ಕೋರ್ಟ್ ವೃತ್ತದಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿ ವೇಳೆ ಎಎಸ್‌ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್‌ಗೆ ಸಂಬಂಧಿಸಿ ಗುತ್ತಿಗೆದಾರ ಕಂಪನಿಯ ಎಂಡಿ ಸೇರಿದಂತೆ 19ಕ್ಕೂ ಹೆಚ್ಚು ಜನರ ವಿರುದ್ಧ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ಬೈಕ್ ಮೇಲೆ ಕರ್ತವ್ಯಕ್ಕೆ ತೆರಳುತ್ತಿದ್ದ ಉಪನಗರ ಠಾಣೆ ಎಎಸ್‌ಐ, ಧಾರವಾಡ ಸತ್ತೂರಿನ ರಾಜಾಜಿನಗರ ನಿವಾಸಿ ನಾಬಿರಾಜ ಜಯಪಾಲ ದಯಣ್ಣವರ (59) ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದು ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಸದ್ಯ ಕೆಎಂಸಿಆರ್‌ಐನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಅವಘಡಕ್ಕೆ ಸಂಬಂಧಿಸಿ ಗಾಯಾಳುವಿನ ಮಗ ವೃಷಭ ಅವರು ಫ್ಲೈಓವರ್ ಕಾಮಗಾರಿಯ ಗುತ್ತಿಗೆ ಪಡೆದಿರುವ ಝಂಡು ಕನ್ಸ್ಟ್ರ ಕ್ಷನ್ ಕಂಪನಿಯ ಮೂವರು ಎಂಡಿಗಳು, ಪ್ರೊಜೆಕ್ಟ್ ಮ್ಯಾನೇಜರ್, ಪ್ರೊಜೆಕ್ಟ್ ಹೆಡ್ಸ್, ಸುಪರ್‌ವೈಜರ್ಸ್, ಫೀಲ್ಡ್ ಇಂಜಿನಿಯರ್, ಲೇಬರ್ ಕಾಂಟ್ರಾಕ್ಟರ್, ಲೇಬರ್ಸ್ ಸೇರಿ 19ಕ್ಕೂ ಹೆಚ್ಚು ಜನರ ವಿರುದ್ಧ ಉಪನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.