ಕಿಮ್ಸ್ ಆಸ್ಪತ್ರೆಯಲ್ಲಿ ಅತ್ಯುತ್ತಮ ಸೇವೆಗೆ ತಜ್ಞರ ತಂಡ
Team Udayavani, Nov 3, 2019, 12:27 PM IST
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ತಜ್ಞರ ತಂಡ ರಚಿಸಲಾಗುವುದು. ಇದಕ್ಕೆ ವೈದ್ಯರ ಸಹಕಾರ ಅತ್ಯವಶ್ಯವಾಗಿದೆ ಎಂದು ಡಿಸಿಎಂ, ವೈದ್ಯಕೀಯ ಶಿಕ್ಷಣ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಕಿಮ್ಸ್ ಆಸ್ಪತ್ರೆಯ ಸಿಲ್ವರ್ ಜ್ಯುಬಿಲಿ ಹಾಲ್ ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಕ ಭಾಗದ ಜನರು ತಮ್ಮ ಆರೋಗ್ಯ ಸಮಸ್ಯೆ ಬಗೆಹರಿಸಿಕೊಳ್ಳಲು ಕಿಮ್ಸ್ಗೆ ಬರುತ್ತಾರೆ. ಇಲ್ಲಿ ಹೆಚ್ಚು ಸುಧಾರಣೆ ತರಲು ಎಲ್ಲ ಬಗೆಯ ಸಹಕಾರ, ಪ್ರೋತ್ಸಾಹ ನೀಡುವೆ. ಕಿಮ್ಸ್ ಅಭಿವೃದ್ಧಿ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿ ಆದಷ್ಟು ಬೇಗ ಕಾರ್ಯರೂಪಕ್ಕೆ ತರಲಾಗುವುದು. ಏಮ್ ನಂತೆ ಕಿಮ್ಸ್ನಲ್ಲೂ ಗುಣಮಟ್ಟ ಹೆಚ್ಚಿಸುವ ಮೂಲಕ ರಾಜ್ಯದಲ್ಲೇ ಮಾದರಿ ಆಸ್ಪತ್ರೆಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಕ್ಯಾನ್ಸರ್ ಆಸ್ಪತ್ರೆ ಸೇರಿದಂತೆ ಇನ್ನಿತರೆ ಯೋಜನೆಗಳನ್ನು ತರಲು ಪ್ರಯತ್ನಿಸುವೆ. ವೈದ್ಯರ ಸಹಕಾರ, ಸಹಭಾಗಿತ್ವ ಇಲ್ಲದಿದ್ದರೆ ಸರ್ಕಾರಿ ಆಸ್ಪತ್ರೆಗಳ ಸುಧಾರಣೆ ಮಾಡುವುದು ಕಷ್ಟ ಎಂದರು.
ಕಿಮ್ಸ್ ನಿರ್ದೇಶಕ ಡಾ| ರಾಮಲಿಂಗಪ್ಪ ಅಂತರತಾನಿ, ಶಾಸಕ ಅರವಿಂದ ಬೆಲ್ಲದ, ವೈದ್ಯಕೀಯ ಅಧೀಕ್ಷಕ ಡಾ| ಅರುಣಕುಮಾರ ಸಿ., ಮುಖ್ಯ ಆಡಳಿತಾಧಿಕಾರಿ ರಾಜೇಶ್ವರಿ ಇದ್ದರು. ಸಚಿವರು ಸುಪರ್ ಸ್ಪೆಶಾಲಿಟಿ ಆಸ್ಪತ್ರೆಗೆಭೇಟಿಕೊಟ್ಟು ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.