ಕ್ರೀಡಾ ಸಾಧಕನಿಗೆ ಬೇಕಿದೆ ಆರ್ಥಿಕ ನೆರವು
Team Udayavani, Oct 19, 2019, 11:59 AM IST
ಧಾರವಾಡ: ಈತ ಅಪ್ಪಟ ದೇಶಿ ಪ್ರತಿಭೆ. ಟಾಟಾ ಮಾರ್ಕೋಪೋಲೋ ಕಂಪನಿಯಲ್ಲಿ ಕೆಲಸ ಮಾಡುವ ಕಾರ್ಮಿಕ. ಸಾಧನೆಯೋ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಿ ನಿಂತಿದೆ. ಆದರೆ, ಸಾಧನೆಗೆ ಇದೀಗ ಆರ್ಥಿಕ ಸಂಕಷ್ಟ ಅಡ್ಡವಾಗಿದೆ. ದುಬೈ ಹಾಗೂ ಮಲೇಷ್ಯಾದಲ್ಲಿ ನಡೆಯಲಿರುವ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಲು ಹೊರಟ ಈ ಕ್ರೀಡಾಪಟುವಿಗೆ ಆರ್ಥಿಕ ನೆರವಿನ ಹಸ್ತ ಬೇಕಿದೆ.
ವಿಜಯಪುರದ ಇಂಡಿ ತಾಲೂಕಿನ ನಿಂಬಾಳ ಗ್ರಾಮದ ಮಲ್ಲಪ್ಪ ಪೂಜೇರಿ ಐಟಿಐ ಶಿಕ್ಷಣ ಪಡೆದು ಧಾರವಾಡದ ಟಾಟಾ ಮಾರ್ಕೋಪೋಲೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಧಾರವಾಡ ನಗರದ ಮೆಣಸಿನಕಾಯಿ ಓಣಿಯಲ್ಲಿ ನೆಲೆಸಿದ್ದಾರೆ. 2019, ಅ.10ರಂದು ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಮ್ಯಾರಥಾನ್ ಸ್ಪರ್ಧೆಯಲ್ಲಿ 2 ಬೆಳ್ಳಿ ಪದಕ ಪಡೆದಿದ್ದು, ಈವರೆಗೆ 30ಕ್ಕೂ ಹೆಚ್ಚು ಪದಕ ಗಳಿಸಿದ್ದಾರೆ. ಬಡ ಕುಟುಂಬದಲ್ಲಿ ಬೆಳೆದು ಬಂದ ಮಲ್ಲಪ್ಪ ಕೆಲಸ ಮಾಡುತ್ತಲೇ ಕ್ರೀಡೆಯಲ್ಲಿ ಸಾಧನೆ ಮಾಡಲು ಕಷ್ಟಪಟ್ಟಿದ್ದಾರೆ. ಯಾರ ಬಳಿಯೂ ತರಬೇತಿ ಪಡೆಯದೇ ಸ್ವಯಂ ಸಾಧನೆ ಮಾಡಿರುವ ಮಲ್ಲಪ್ಪ ಜಿಲ್ಲೆ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಮ್ಯಾರಥಾನ್ ಗಳಲ್ಲಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದಿದ್ದಾರೆ.
ಇದೀಗ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ದುಬೈ ಹಾಗೂ ಮಲೇಷ್ಯಾದಲ್ಲಿ ನಡೆಯುವ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಲಭಿಸಿದ್ದು, ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಇವರಿಗೆ ದಾನಿಗಳಿಂದ ಆರ್ಥಿಕ ನೆರವು ಬೇಕಾಗಿದೆ. ನೆರವು ನೀಡಲು ಬಯಸುವವರು ಮೊ: 8971092023 ಸಂಪರ್ಕಿಸಬಹುದು. ಇಲ್ಲವೇ ನೇರವಾಗಿ ಅವರ ಬ್ಯಾಂಕ್ ಖಾತೆಗೆ (ಭಾರತೀಯ ಸ್ಟೇಟ್ ಬ್ಯಾಂಕ್ ಅಕೌಂಟ್ ನಂ-30693375841, ಐಎಫ್‌ಎಸ್‌ಸಿ ನಂ-ಖಆಐN0011272) ಹಣ ಜಮೆ ಮಾಡಬಹುದು.
ಗೆಳೆಯರ ಸಹಕಾರದಿಂದ ಹೊರ ರಾಜ್ಯಗಳಿಗೆ ಹೋಗಿ ಸ್ಪರ್ಧಿಸಲು ಸಾಧ್ಯವಾಗಿದ್ದು, ಇದಲ್ಲದೇ ಶ್ರೀಲಂಕಾ ದೇಶಕ್ಕೂ ಹೋಗಿ ಬೆಳ್ಳಿ ಪದಕ ತಂದಿರುವೆ. ಇದೇ ವರ್ಷ ನೇಪಾಳಕ್ಕೆ ಹಣದ ವ್ಯವಸ್ಥೆ ಆಗದೇ ಕೈ ಬಿಡಬೇಕಾಯಿತು. ಸದ್ಯ ದುಬೈ, ಮಲೇಷ್ಯಾದಲ್ಲಿ ಸ್ಪರ್ಧಿಸಿ ಚಿನ್ನದ ಪದಕ ತರುವ ವಿಶ್ವಾಸವಿದ್ದು, ವಿದೇಶಕ್ಕೆ ತೆರಳಲು ಹಣದ ಅಡಚಣೆ ಉಂಟಾಗಿದೆ. –ಮಲ್ಲಪ್ಪ ಪೂಜೇರಿ, ರಾಷ್ಟ್ರಪಟ್ಟದ ಕ್ರೀಡಾಪಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.