Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Team Udayavani, Oct 7, 2024, 9:50 AM IST
ಹುಬ್ಬಳ್ಳಿ: ದರೋಡೆಗೆ ಯತ್ನಿಸಿದ ತಂಡದ ಮೇಲೆ ಪೊಲೀಸರು ಗುಂಡಿನ ದಾಳಿ ನಡಸಿದ್ದು, ಒಬ್ಬ ದರೋಡಕೋರನ ಕಾಲಿಗೆ ಗುಂಡು ತಗುಲಿದ ಘಟನೆ ರೇವಡಿಹಾಳ ಸೇತುವೆ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ.
ಸೋಮವಾರ ಬೆಳಗಿನ ಜಾವ 3:00 ಗಂಟೆ ಸುಮಾರಿಗೆ ಗೋಕುಲ ಗ್ರಾಮದಲ್ಲಿ 5-6 ಜನರ ತಂಡವು ರಜನಿಕಾಂತ ದೊಡ್ಡಮನಿ ಎಂಬುವರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದೆ. ಈ ವೇಳೆ ಮನೆಯವರು ಎಚ್ಚರಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಗೋಕುಲ ರೋಡ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ದರೋಡೆಕೋರರನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಮುಂದಾದಾಗ ಪಿಎಸ್‌ಐ ಸಚಿನ ದಾಸರೆಡ್ಡಿ ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ನಂತರ ಮಹೇಶ ಕಾಳೆ ಎಂಬ ದರೋಡೆಕೋರನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಇನ್ನುಳಿದ ದರೋಡೆಕೋರರು ತಲೆಮರೆಸಿಕೊಂಡು ಹೋಗಿದ್ದಾರೆ. ಈ ವೇಳೆ ಪಿಎಸ್ಐ ಸಚಿನ ದಾಸರೆಡ್ಡಿ ಮತ್ತು ಹೆಡ್ ಕಾನ್ಸಟೇಬಲ್ ವಸಂತ ಗುಡಗೇರಿ ಅವರು ಗಾಯಗೊಂಡಿದ್ದಾರೆ. ಗುಂಡೇಟು ತಿಂದ ದರೋಡೆಕೋರ ಮತ್ತು ಪೊಲೀಸರು ಸೇರಿ ಮೂವರು ಗಾಯಾಳುಗಳು ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ತಂಡವು ಕೆಲ ದಿನಗಳಿಂದ ಗೋಕುಲದಲ್ಲಿ 2-3 ಮನೆಗಳಲ್ಲಿ ದರೋಡೆ ಮಾಡಿತ್ತು. ನಿನ್ನೆಯೂ ಸಹ ಓರ್ವರ ಮನೆಗೆ ನುಗ್ಗಿ ದರೋಡೆ ಮಾಡಲು ಮುಂದಾಗಿದ್ದಾಗ ಅವರ ಮೇಲೆ ದಾಳಿ ಮಾಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗೋಕುಲ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದರೋಡೆಕೋರರ ತಂಡವು ಮನೆಗೆ ನುಗ್ಗುವ ಮುನ್ನ ಹಾಪ್ ಪ್ಯಾಂಟ್ ಧರಿಸಿ, ಮುಖಕ್ಕೆ ಮಂಕಿ ಕ್ಯಾಪ್ ಹಾಕಿಕೊಂಡು ದರೋಡೆಗೆ ಹೊಂಚು ಹಾಕುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಇದನ್ನೂ ಓದಿ: Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.