ಸೌಜನ್ಯ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಪ್ರಮೋದ್ ಮುತಾಲಿಕ್
Team Udayavani, Aug 17, 2023, 2:20 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು 40,000 ಮಹಿಳೆಯರು ಕಾಣೆಯಾಗಿದ್ದು 45,000 ಅಪ್ರಾಪ್ತರು ಗರ್ಭಿಣಿಯಾಗಿದ್ದಾರೆ. ಇದೊಂದು ಭಯಾನಕ ಸ್ಥಿತಿಯಾಗಿದ್ದು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸೂಕ್ತ ತನಿಖೆ ತನಿಖೆ ನಡೆಸಬೇಕು. ಇಂತಹ ಕೃತ್ಯಗಳ ತಡೆಗೆ ವಿಶೇಷ ಪಡೆ ರಚಿಸಬೇಕೆಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 25 ಸಾವಿರ ಮಕ್ಕಳ ಕಾಣೆಯಾಗಿದ್ದು ಮಹಿಳೆಯರ ನಾಪತ್ತೆಯಿಂದ ಲವ್ ಜಿಹಾದ್ ಉದ್ದೇಶದ ಆತಂಕ ಇದ್ದು ಈ ಬಗ್ಗೆ ವಿಶೇಷ ಗಮನ ಹರಿಸಬೇಕಾಗಿದೆ ಎಂದು ನುಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಒಂದರಲ್ಲೇ ಕಳೆದ 11 ವರ್ಷಗಳಲ್ಲಿ 434 ಮಹಿಳೆಯರು ಕಾಣೆಯಾಗಿದ್ದು ಸುಮಾರು 452 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯಗಳ ಬಗ್ಗೆ ಲಘುವಾಗಿ ಪರಿಗಣಿಸುವುದು ಯಾವುದೇ ಪಕ್ಷದ ಸರ್ಕಾರಕ್ಕೂ ಒಳ್ಳೆಯದಲ್ಲ ಎಂದರು.
ಇದನ್ನೂ ಓದಿ:MLA P. Ravikumar Gowda Ganiga: ನೂರು ವರ್ಷ ವಿದ್ಯುತ್ ಸಮಸ್ಯೆ ಬಾರದು
ಸೌಜನ್ಯ ಕೊಲೆ ಪ್ರಕರಣ ಅತ್ಯಂತ ಸೂಕ್ಷ್ಮವಾಗಿದ್ದು ತನಿಖೆಯಲ್ಲಿ ಲೋಪ, ಕೇಸನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಯತ್ನಗಳು ಸಾಕಷ್ಟು ನಡೆದಿವೆ ಎಂಬುದು ಗೋಚರಿಸುತ್ತಿದೆ ಈ ಬಗ್ಗೆ ಸರಕಾರ ಸಮಗ್ರ ತನಿಖೆಗೆ ಮುಂದಾಗಬೇಕಾಗಿದೆ. ಸೌಜನ್ಯ ಪ್ರಕರಣದಲ್ಲಿ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ಮಾಸಾಂತ್ಯಕ್ಕೆ ಹುಬ್ಬಳ್ಳಿಯಿಂದ ಉತ್ತರ ಕರ್ನಾಟಕದಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಗುತ್ತಿದ್ದು ಸೌಜನ್ಯ ಅವರ ತಾಯಿ ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಮಹಿಳೆಯರ ಮೇಲೆ ದೌರ್ಜನ್ಯ ಲವ್ ಜಿಹಾದ್, ಕಿಡ್ನಾಪ್, ನಾಪತ್ತೆಯಂತಹ ಪ್ರಕರಣಗಳ ಬಗ್ಗೆ ಸಂಘಟಿತ ಹೋರಾಟದ ಅಗತ್ಯವಿದ್ದು ಈ ಬಗ್ಗೆ ನಾನೇ ಖುದ್ದಾಗಿ ಹಿಂದೂಪರ ಸಂಘಟನೆಗಳೆಲ್ಲವನ್ನು ಭೇಟಿಯಾಗಿ ಹೋರಾಟಕ್ಕೆ ಕೈಜೋಡಿಸುವಂತೆ ಮನವಿ ಮಾಡುತ್ತೇನೆ. ಧರ್ಮ, ಜಾತಿ ರಹಿತ ಹೋರಾಟ ಆಗಬೇಕಾಗಿದೆ ಎಂದರು.
ಲವ್ ಜಿಹಾದ್ ಕೇವಲ ಒಂದು ರಾಜ್ಯ ಒಂದು ಪ್ರದೇಶಕ್ಕೆ ಸೀಮಿತವಾಗಿಲ್ಲ ರಾಷ್ಟ್ರಾದ್ಯಂತ ಆವರಿಸಿದ್ದು ಇದನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಠಿಣ ಕಾನೂನು ರಚನೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಹೊರತುಪಡಿಸಿ ಉಳಿದೆಲ್ಲ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದರು.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯ ಪ್ರತಿಸ್ಥಾಪನೆಯನ್ನು ಈ ವರ್ಷವೂ ಮಾಡುತ್ತೇವೆ ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹುಬ್ಬಳ್ಳಿಯ ಈದ್ಗಾ ಮೈದಾನ ಪಾಕಿಸ್ತಾನ ಇಲ್ಲವೇ ಆಫ್ಘಾನಿಸ್ತಾನದಲ್ಲಿ ಇಲ್ಲ ಅದು ಭಾರತದಲ್ಲಿಯೇ ಇದೆ. ನಮ್ಮದೇ ನೆಲದಲ್ಲಿ ನಮ್ಮ ದೇವರ ಪ್ರತಿಷ್ಠಾಪನೆಗೆ ಅವಕಾಶ ನೀಡುವುದಿಲ್ಲ ಎಂದರೆ ಸಹಿಸಿಕೊಳ್ಳುವುದಾದರೂ ಹೇಗೆ ಎಂದು ಪ್ರಶ್ನಿಸಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕಾಂಗ್ರೆಸ್ ಸರ್ಕಾರವಿರಲಿ, ಮುಸ್ಲಿಮರೇ ಆಗಲಿ ಯಾರು ಸಹ ವಿರೋಧ ಮಾಡದೆ ಸಹಕಾರ ನೀಡಬೇಕು. ಅದೇ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿಲ್ಲವೇ ಹಾಗಿದ್ದರೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆಗೆ ಯಾಕೆ ವಿರೋಧ ಎಂದು ಪ್ರಶ್ನಿಸಿದರು.
ಶ್ರೀರಾಮ ಸೇನೆ ರಾಜ್ಯ ಅಧ್ಯಕ್ಷ ಗಂಗಾಧರ ಪಾಟೀಲ್ ಕುಲಕರ್ಣಿ ಸೇರಿದಂತೆ ಹಲವರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.