ಪಿಡಿಒಗಳ ಹೆಗಲಿಗೆ ಆಯುಷ್ಮಾನ್
Team Udayavani, Dec 25, 2019, 10:46 AM IST
ಕಲಘಟಗಿ: ಜನವರಿಯಲ್ಲಿ ಗ್ರಾಪಂ ಕಾರ್ಯಾಲಯ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಗ್ರಾಮಿಣ ಜನರಿಗೆ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್ ತಲುಪಿಸುವ ಗುರುತರ ಕಾರ್ಯವನ್ನು ಆಯಾ ಭಾಗದ ಪಿಡಿಒಗಳು ನಿರ್ವಹಿಸಬೇಕೆಂದು ಯೋಜನೆಯ ಜಿಲ್ಲಾ ನೋಡಲ್ ಅ ಧಿಕಾರಿ ಡಾ| ಶಶಿ ಪಾಟೀಲ ಕರೆ ನೀಡಿದರು.
ಪಟ್ಟಣದ ತಾಪಂ ಭವನದಲ್ಲಿ ತಾಲೂಕಿನ ಎಲ್ಲ ಪಿಡಿಒಗಳಿಗೆ ಮತ್ತು ಗಣಕಯಂತ್ರ ಕಾರ್ಯನಿರ್ವಾಹಕ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗಗಳಲ್ಲಿರುವ ಎಲ್ಲ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ಸರಕಾರ ಮಹತ್ವಾಕಾಂಕ್ಷಿ ಆಯುಷ್ಮಾನ್ ಯೋಜನೆ ಜಾರಿಗೆ ತಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಯುಷ್ಮಾನ್ ಕಾರ್ಡ್ ಗಳನ್ನು ಮಾಡಿಸುವಲ್ಲಿ ಪಿಡಿಒಗಳು ಗ್ರಾಮಿಣ ಜನರಲ್ಲಿ ಅರಿವು ಮೂಡಿಸಲು ಮುಂದಾಗಬೇಕೆಂದು ತಿಳಿಸಿದರು.
ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಜಿಲ್ಲಾ ಸಂಯೋಜಕ ಬಿ.ಜಿ. ಮಕಾಂದಾರ ಮಾತನಾಡಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಭರತ ಬಹುರೂಪಿ, ರವಿರಾಜ ಹಿರೇಗೌಡರ, ನಾಗರಾಜ ಗಿರೆಪ್ಪನ್ನವರ, ಜಯಶ್ರೀ, ಮಂಜುನಾಥ ಹಿರೇಮಠ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.