ಆತ್ಮಚರಿತ್ರೆಗಳು ಆತ್ಮ ಸಾಕ್ಷಾತ್ಕಾರಗಳಿದ್ದಂತೆ

ಆತ್ಮಕಥೆಗಳು ಮತ್ತೂಬ್ಬ ಮಹಿಳೆಯ ಜೀವನ ಸುಧಾರಣೆ-ಪ್ರೇರಣೆಗೂ ಕಾರಣ: ಉರ್ಮಿಳಾ

Team Udayavani, Mar 31, 2022, 12:09 PM IST

6

ಧಾರವಾಡ: ಪುರುಷ ಪ್ರಾಧಾನ್ಯತೆಯ ಸಮಾಜದ ಹಲವು ವಿರೋಧಗಳ ಮಧ್ಯೆಯೂ ಮಹಿಳಾ ಆತ್ಮಚರಿತ್ರೆಗಳು ಸಾಕಷ್ಟು ಪ್ರಮಾಣದಲ್ಲಿ ಹೊರ ಬಂದಿವೆ ಎಂದು ಭೂಪಾಲನ ಹಿಂದಿ ಲೇಖಕಿ ಉರ್ಮಿಳಾ ಶಿರೀಷ್‌ ಹೇಳಿದರು.

ಉತ್ತರ ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಕರ್ನಾಟಕ ವಿಶ್ವವಿದ್ಯಾಲಯದ ಮಾನಸೋಲ್ಲಾಸ ಭವನದಲ್ಲಿ “ಮಹಿಳಾ ಆತ್ಮಕಥೆಗಳು’ ವಿಷಯ ಕುರಿತು ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ತಮ್ಮ ಜೀವನದಲ್ಲಿ ಉಂಟಾದ ಸುಖ-ದುಃಖ, ಸಂಘರ್ಷಗಳನ್ನೊಳಗೊಂಡ ಮಹಿಳಾ ಆತ್ಮಚರಿತ್ರೆಗಳು ನಿಜಕ್ಕೂ ಅವರ ಆತ್ಮ ಸಾಕ್ಷಾತ್ಕಾರಗಳಿದ್ದಂತೆ. ಈ ಆತ್ಮಕಥೆಗಳು ಬರೀ ಸುಖ-ದುಃಖ ಮಾತ್ರವಲ್ಲ ಮತ್ತೂಬ್ಬ ಮಹಿಳೆಯ ಜೀವನ ಸುಧಾರಣೆ ಹಾಗೂ ಪ್ರೇರಣೆಗೂ ಕಾರಣವಾಗಿವೆ ಎಂದರು.

ಹಿಂದಿ ಸೇರಿದಂತೆ ಬಂಗಾಳಿ, ತಮಿಳು, ತೆಲಗು, ಕನ್ನಡ, ಮರಾಠಿ ಹೀಗೆ ಅನೇಕ ಭಾಷೆಗಳಲ್ಲಿ ಮಹಿಳೆಯರು ಹಲವಾರು ವರ್ಷಗಳಿಂದ ಆತ್ಮಕಥೆಗಳನ್ನು ಬರೆದಿದ್ದಾರೆ. ಸಮಾಜದಲ್ಲಿ ಅದರಲ್ಲೂ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರ ಸ್ಥಾನಮಾನ ಹೆಚ್ಚಿಸಿಕೊಳ್ಳಲು ಕಾರಣೀಭೂತವಾಗಿವೆ ಎಂದರು.

ಕವಿವಿಯ ಕುಲಪತಿ ಪ್ರೊ|ಕೆ.ಬಿ.ಗುಡಸಿ ಮಾತನಾಡಿ, ಆತ್ಮಕಥೆ ಬರೆಯುವುದು ಸುಲಭದ ಕೆಲಸವಲ್ಲ.ಅದರಲ್ಲೂ ಮಹಿಳೆಯರು ಕುಟುಂಬದ ನಿರ್ವಹಣೆ ಜತೆಗೆ ಲೇಖನ ಬರೆಯುವುದು, ಸಾಹಿತ್ಯದಲ್ಲಿ ತೊಡಗುವುದು ಸುಲಭದ ಕೆಲಸವಲ್ಲ. ಆದರೂ ಅಂತಹ ಕಷ್ಟದ ಕೆಲಸವನ್ನು ಸರಳ ಮತ್ತು ವಿವಿಧ ಆಯಾಮುಗಳಲ್ಲಿ ಮಾಡುತ್ತಿರುವುದು ಪ್ರಶಂಸನೀಯ ಎಂದರು. ಆತ್ಮಕಥೆಗಳು ಕನ್ನಡಿ ಇದ್ದಂತೆ. ಅವು ಮನುಷ್ಯನ ಕಣ್ಣು ತೆರೆಸುತ್ತವೆ. ಈ ನಿಟ್ಟಿನಲ್ಲಿ ಸಾಕಷ್ಟು ಮಹಿಳೆಯರು ಆತ್ಮಕಥೆ ಬರೆದು ತೋರಿಸಿದ್ದಾರೆ. ಅಂತಹ ಮಹಿಳೆಯರು ಸಾಧಕಿಯರ ಪಟ್ಟಿಯಲ್ಲಿದ್ದಾರೆ. ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನವಿದೆ ಎಂದರು.

ಹಿರಿಯ ಸಾಹಿತಿ ಡಾ|ವೀಣಾ ಶಾಂತೇಶ್ವರ ಮಾತನಾಡಿದರು. ಉತ್ತರ ಕರ್ನಾಟಕ ಮಹಿಳಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ|ರಾಜೇಶ್ವರಿ ಮಹೇಶ್ವರಯ್ಯ, ಕವಯತ್ರಿ ಪ್ರತಿಭಾ ನಂದಕುಮಾರ, ವಿಮರ್ಶಕಿ ಡಾ|ಎಂ.ಎಸ್‌. ಆಶಾದೇವಿ, ಈಶ್ವರ ಮಿರ್ಚಿ, ರಾಘವೇಂದ್ರ ಪಾಟೀಲ, ಡಾ|ಪ್ರಜ್ಞಾ ಮತ್ತಿಹಳ್ಳಿ, ಮೇಘಾ ಹುಕ್ಕೇರಿ, ಡಾ|ಉಷಾ ಗದ್ದಿಮಠ ಸೇರಿದಂತೆ ಹಲವರಿದ್ದರು. ಇದಾದ ಬಳಿಕ ವಿವಿಧ ಗೋಷ್ಠಿಗಳಲ್ಲಿ ವಿವಿಧ ಭಾಷೆಗಳ ಆತ್ಮಕಥೆಗಳ ಬಗ್ಗೆ ಉಪನ್ಯಾಸ ನಡೆದವು.

ಟಾಪ್ ನ್ಯೂಸ್

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Hagga movie review

Hagga movie review: ರೋಚಕ ರಹಸ್ಯದ ಕಥಾನಕ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.