ಆಟೋರಿಕ್ಷಾ ದರ ಪರಿಷ್ಕರಣೆ
Team Udayavani, Dec 25, 2018, 4:56 PM IST
ಧಾರವಾಡ: ಧಾರವಾಡ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಅಧ್ಯಕ್ಷರಾಗಿರುವ ಡಿಸಿ ದೀಪಾ ಚೋಳನ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ನಿರ್ಧರಿಸಿರುವಂತೆ ಆಟೋರಿಕ್ಷಾಗಳ ಫೇರ್ ಮೀಟರ್ ದರವನ್ನು ಪರಿಷ್ಕರಿಸಲಾಗಿದೆ. ಹುಬ್ಬಳ್ಳಿ, ಧಾರವಾಡ ಅವಳಿ ನಗರದ ಆಟೋರಿಕ್ಷಾ ಚಾಲಕರ ಹಾಗೂ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಆಟೋರಿಕ್ಷಾ ಫೇರ್ ಮೀಟರ್ ದರಗಳನ್ನು ಪರಿಷ್ಕರಿಸುವಂತೆ ಹಾಗೂ ಆಟೋರಿಕ್ಷಾ ರಹದಾರಿ ನೀಡುವುದನ್ನು ನಿರ್ಬಂಧಿಸುವಂತೆ ಸಲ್ಲಿಸಿರುವ ಮನವಿಯನ್ನು ಪರಿಶೀಲಿಸಲಾಗಿದೆ.
ಆಟೋರಿಕ್ಷಾಗಳ ದರ, ಕಾಲಕಾಲಕ್ಕೆ ಪೆಟ್ರೋಲ್ ಮತ್ತು ಎಲ್.ಪಿ.ಜಿ. ದರಗಳಲ್ಲಿನ ಏರಿಕೆ, ರಾಜ್ಯದ ಇತರೆ ಪ್ರಾಧಿಕಾರಗಳಲ್ಲಿ ನಿಗಪಡಿಸಿರುವ ದರಗಳ ಅಂಕಿ-ಅಂಶಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಈ ಸಭೆಯಲ್ಲಿ ಚರ್ಚಿಸಿ, ಪ್ರಸ್ತುತ ಪೆಟ್ರೋಲ್, ಎಲ್.ಪಿ.ಜಿ ಇಂಧನಗಳ ಬೆಲೆ ಏರಿಕೆ, ಬಿಡಿಭಾಗಗಳ ಬೆಲೆ ಏರಿಕೆ ಹಾಗೂ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ಪರಿಗಣಿಸಿ 2019ರ ಜನವರಿ 01 ರಿಂದ ಜಾರಿಗೆ ಬರುವಂತೆ ಫೇರ್ ಮೀಟರ್ ದರ ಪರಿಷ್ಕರಿಸಲಾಗಿದೆ. ನಿಗದಿಪಡಿಸಿರುವ ದರಗಳನ್ವಯ ಬಾಡಿಗೆ ಪಡೆಯತಕ್ಕದ್ದು. ನಿಗದಿತ ದರಗಳನ್ವಯ ಬಾಡಿಗೆ ಪಡೆಯದೇ ಇರುವ ಆಟೋರಿಕ್ಷಾಗಳ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಡಿಸಿ ದೀಪಾ ಚೋಳನ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಪರವಾನಗಿ ನಿರ್ಬಂಧ: ಅವಳಿನಗರದಲ್ಲಿ ಆಟೋರಿಕ್ಷಾ ವಾಹನಗಳ ಸಂಚಾರವು ಅಧಿಕವಾಗಿದ್ದು, ಆಟೋರಿಕ್ಷಾ ಪಾರ್ಕಿಂಗ್ ಗೆ ಸ್ಥಳಾವಕಾಶ ಇಲ್ಲದಿರುವುದರಿಂದ ಹಾಗೂ ಅನಧಿಕೃತ ಆಟೋರಿಕ್ಷಾಗಳ ಸಂಚಾರ ನಿರ್ಬಂಧಿಸುವ ದಿಶೆಯಲ್ಲಿ ಹೊಸದಾಗಿ ಆಟೋರಿಕ್ಷಾಗಳಿಗೆ ಪರವಾನಗಿ ನೀಡುವುದನ್ನು (ಸರ್ಕಾರದ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ವಿತರಿಸಲಾಗುವ ಆಟೋರಿಕ್ಷಾಗಳು ಹಾಗೂ ಬ್ಯಾಟರಿ ಚಾಲಿತ ಗ್ರೀನ್ ಆಟೋರಿಕ್ಷಾಗಳನ್ನು ಹೊರತು ಪಡಿಸಿ) ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಆಟೋರಿಕ್ಷಾಗಳಿಗೆ ಪರವಾನಗಿ ನೀಡುವುದನ್ನು ನಿರ್ಬಂಧಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಕಚೇರಿ ಸಂಪರ್ಕಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಾರ್ಯದರ್ಶಿ ಹಾಗೂ ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ರವೀಂದ್ರ ವಿ.ಕವಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.