ಅಂಗನವಾಡಿ ಕೇಂದ್ರದ ಶಾಶ್ವತ ಕಟ್ಟಡಕ್ಕೆ ಒತ್ತಾಯಿಸಿ ಪ್ರತಿಭಟನೆ


Team Udayavani, Feb 7, 2017, 12:56 PM IST

hub2.jpg

ಹುಬ್ಬಳ್ಳಿ: ಅಂಗನವಾಡಿ ಕೇಂದ್ರಕ್ಕೆ ಸ್ಥಳಾವಕಾಶ ನೀಡದೇ ಮಂಜೂರಾದ ಅಂಗನವಾಡಿ ಕೇಂದ್ರವನ್ನು ಒತ್ತಡ ತಂದು ರದ್ದುಪಡಿಸಿ ಪಾಲಿಕೆ ಸದಸ್ಯರು ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಲೋಕಪ್ಪನ ಹಕ್ಕಲದ ನಿವಾಸಿಗಳು ಮಕ್ಕಳೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿದರು. 

ಉಪಮಹಾಪೌರರ ಲಕ್ಷ್ಮೀ ಉಪ್ಪಾರ ಅವರ ವಾರ್ಡ್‌ನಲ್ಲೇ ಇದು ನಡೆದಿದೆ. ಲೋಕಪ್ಪನ ಹಕ್ಕಲ ಸುತ್ತಮುತ್ತ ಬಡಜನರು ವಾಸಿಸುತ್ತಿದ್ದು, ಇಲ್ಲೊಂದು ಅಂಗನವಾಡಿ ಕೇಂದ್ರ ನೀಡುವಂತೆ ಹಲವಾರು ಬಾರಿ ಮನವಿ ಮಾಡಲಾಗಿತ್ತು. ಈ ಹಿಂದೆ ಹನುಮಂತ ದೇವರ ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಅಂಗನವಾಡಿ ಕೇಂದ್ರ ನಿರ್ಮಿಸಲಾಗಿತ್ತು.

ಅದು ನಿರ್ಮಾಣವಾಗಿ ಎರಡು ವರ್ಷಗಳು  ಗತಿಸಿದ ನಂತರ ಈ ಜಾಗ ಹನುಮಂತ ದೇವಸ್ಥಾನಕ್ಕೆ ಸೇರಿದ ಜಾಗವಾಗಿದ್ದು ಕೂಡಲೇ ಖಾಲಿ ಮಾಡಬೇಕೆಂದು ಆ ಸ್ಥಳದಿಂದ ಅಂಗನವಾಡಿ ಕೇಂದ್ರವನ್ನು ಹೊರ  ಹಾಕಲಾಯಿತು. ತದ ನಂತರ ಲೋಕಪ್ಪನ ಹಕ್ಕಲದಲ್ಲಿರುವ ದೇವಸ್ಥಾನದಲ್ಲಿ ಇದೀಗ ಅಂಗನವಾಡಿ ಕೇಂದ್ರ ನಡೆಸಲು ಅವಕಾಶ ನೀಡಲಾಗಿದೆ.

ಆದರೆ ಈ ಭಾಗಕ್ಕೆ ಶಾಶ್ವತ  ಅಂಗನವಾಡಿ ಕೇಂದ್ರದ ಅವಶ್ಯಕತೆ ಇದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿಗಳೇ ಸ್ವತಃ ಲೋಕಪ್ಪನ ಹಕ್ಕಲದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಅಂಗನವಾಡಿ ಕೇಂದ್ರ ನಡೆಸಲು ಅವಕಾಶ ನೀಡುವಂತೆ ಸೂಚನೆ ನೀಡಿದ್ದರೂ ಪಾಲಿಕೆ ಸದಸ್ಯರು ಒತ್ತಡದಿಂದ ಅದನ್ನು ರದ್ದುಪಡಿಸಿದ್ದರು ಎಂದು ಸ್ಥಳೀಯರು ಆರೋಪಿಸಿದರು. 

ಕೂಡಲೇ ಶಾಶ್ವತ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟ ಮುಂದುವರಿಯಲಿದೆ ಎಂದು ಅಲ್ಲಿನ ನಿವಾಸಿಗಳು ಎಚ್ಚರಿಸಿದ್ದಾರೆ. 

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.